ಬೆಂಗಳೂರು:ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ ಸಾಮ್ರಾಜ್ಯದ ಮೇಲೆ ಇಂದು ಬೆಳ್ಳಂಬೆಳಗ್ಗೆ ಇಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ನಿನ್ನೆ(ಬುಧವಾರ) ತಾನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಶಾಸಕರಿಗೆ ಮರುದಿನ ಬೆಳ್ಳಗ್ಗೆಯೇ ಇಡಿ ಶಾಕ್​ ಕೊಟ್ಟಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ಸ್ಟೇಷನ್​ ಬಳಿ ಇರುವ ಜಮೀರ್ ಅಹ್ಮದ್ ಅವರ ಐಷಾರಾಮಿ ಬೃಹತ್​ ಬಂಗಲೆ, ಶಾಂತಿ ನಗರದಲ್ಲಿರುವ ಮನೆ, ಚಾಮರಾಜಪೇಟೆಯಲ್ಲಿರುವ ಸ್ವಂತ ಕಚೇರಿ, ಪ್ಲ್ಯಾಟ್‌ಗಳು, ಬಂಬೂ ಬಜಾರ್ ಬಳಿಯ ಮನೆ, ನ್ಯಾಷನಲ್ ಟ್ರಾವೆಲ್ಸ್ ಮುಖ್ಯ ಕಚೇರಿ… ಹಲವಡೆ ಏಕಕಾಲಕ್ಕೆ ಇಡಿ ದಾಳಿ ಆಗಿದೆ. ಜಮೀರ್​ ಹೆಸರಲ್ಲಿ ಕೋಟ್ಯಂತರ ಮೌಲ್ಯದ ಆಸ್ತಿ ಇದೆ. ಶ್ರೀಲಂಕಾ ಮತ್ತು ಗೋವಾದಲ್ಲಿ ಕ್ಯಾಸಿನೊ ಕ್ಲಬ್, ಮುಂಬೈನಲ್ಲಿ ಒಂದು ಮನೆ, ಹೈದರಾಬಾದ್ ಸೇರಿದಂತೆ ಹಲವು ಕಡೆ ಆಸ್ತಿ, ಬೆಂಗಳೂರಿನ ಮೇಕ್ರಿ ಸರ್ಕಲ್ ಬಳಿ ಒಂದು ಅಪಾರ್ಟ್‌ಮೆಂಟ್, ಯುಬಿ ಸಿಟಿಯಲ್ಲಿ ಒಂದು ಅಪಾರ್ಟ್‌ಮೆಂಟ್, ಹೆಬ್ಬಾಳದಲ್ಲಿ ಆಳಿಯನ ಮನೆ ಇದೆ. ಏಕಕಾಲಕ್ಕೆ ನಗರದ ಹಲವಡೆ ದಾಳಿ ನಡೆಸಿದ ಇಡಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲ ವರ್ಷಗಳಿಂದ ಜಮೀರ್ ಆದಾಯದ ಮೇಲೆ ಕಣ್ಣಿಟ್ಟಿದ್ದ ಇಡಿ, ಇತ್ತೀಚಿನ ದಿನಗಳಲ್ಲಿ ಜಮೀರ್ ಆಡಂಬರದ ಕುರಿತು ಮಾಹಿತಿ ಸಂಗ್ರಹಿಸಿತ್ತು ಎನ್ನಲಾಗಿದೆ.
ಒಂದೇ ಮನೆಯಲ್ಲಿದ್ದರು ಪತ್ನಿ-ಪತಿ-ಸ್ನೇಹಿತ! ಪೊಲೀಸರ ಮುಂದೆ ಬಯಲಾಯ್ತು ಚೆಂದುಳ್ಳಿ ಚೆಲುವೆಯ ಅಸಲಿ ಮುಖ

ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟ 21ರ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 5 =
Remember me
