ಬೆಂಗಳೂರು:2021-22ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು(ಗುರುವಾರ) ಪ್ರಕಟಗೊಂಡಿದ್ದು, ಶೇ.85.63 ಫಲಿತಾಂಶ ಬಂದಿದೆ. ಒಟ್ಟು 8,53,436 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 7,30,881 ಮಂದಿ ಪಾಸ್​ ಆಗಿದ್ದಾರೆ. ಇದರಲ್ಲಿ 3,72,279 ಹೆಣ್ಣುಮಕ್ಕಳು, 3,58,602 ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.
ಮಲ್ಲೇಶ್ವರದಲ್ಲಿರುವ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಗುರುವಾರ ಮಧ್ಯಾಹ್ನ 12.30ಕ್ಕೆ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್​ ಫಲಿತಾಂಶ ಘೋಷಿಸಿದರು. ಮಧ್ಯಾಹ್ನ 1 ಗಂಟೆಯ ನಂತರhttps://karresults.nic.in/ವೆಬ್​ಸೈಟ್​ನಲ್ಲಿ ಫಲಿತಾಂಶವನ್ನು ವಿದ್ಯಾರ್ಥಿಗಳು ವೀಕ್ಷಿಸಬಹುದು. ಶುಕ್ರವಾರ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್​ಗಳಿಗೂ ಫಲಿತಾಂಶದ ಸಂದೇಶ ಬರಲಿದೆ.
ಒಟ್ಟು 145 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದು ಮೊದಲ ಸ್ಥಾನ ಪಡೆದಿದ್ದಾರೆ. ಇನ್ನು 309 ವಿದ್ಯಾರ್ಥಿಗಳು 625ಕ್ಕೆ 624 ಅಂಕ ಪಡೆಯುವ ಮೂಲಕ 2ನೇ ಸ್ಥಾನ ಪಡೆದಿದ್ದಾರೆ. ರಾಜ್ಯದ 3920 ಶಾಲೆಗಳಿಗೆ ಶೇ.100 ಫಲಿತಾಂಶ ಸಿಕ್ಕಿದೆ. 20 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ.
PSI ಹುದ್ದೆ ಅಕ್ರಮ: ಮೊದಲ ರಾತ್ರಿಯ ಖುಷಿಯಲ್ಲಿದ್ದವನಿಗೆ ಶಾಕ್ ಕೊಟ್ಟ ಸಿಐಡಿ​! ದೇವಸ್ಥಾನದಲ್ಲೇ ನವವಿವಾಹಿತ ವಶಕ್ಕೆ

ಫ್ಯಾಟ್​ ಬರ್ನ್​ ಸರ್ಜರಿ ಪ್ರಾಣಕ್ಕೆ ಕುತ್ತು ತರುತ್ತಾ? ನಟಿ ಚೇತನಾ ಸಾವಿನ ಬೆನ್ನಲ್ಲೇ ಮಹತ್ವದ ವಿಚಾರ ತಿಳಿಸಿದ ವೈದ್ಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 18 =
Remember me
