ಮೈಸೂರು:ಹಿಜಾಬ್ ಧರಿಸಿ ಬಂದವರಿಗೆ ಪಾಠ ಮಾಡಲ್ಲ. ಕೇಸರಿ ಶಾಲು, ಹಸಿರು ಶಾಲು ಧರಿಸಿ ಬಂದವರಿಗೂ ತರಗತಿ ಇಲ್ಲ ಎಂದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಕುಂದಾಪುರದ ಕಾಲೇಜಿಗೆ ಸೋಮವಾರ ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿದ್ದೇಕೆ ಎಂಬುದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್​, ಕುಂದಾಪುರದಲ್ಲಿ ಇಂದು(ಸೋಮವಾರ) ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆದರೆ, ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳೂ ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ಕೂರಿಸಿದ್ದೇವೆ. ವಿದ್ಯಾರ್ಥಿನಿಯರನ್ನ ರಸ್ತೆಯಲ್ಲಿ ನಿಲ್ಲಿಸಲು ಇದು ಪಾಕಿಸ್ತಾನ ಅಲ್ಲ. ಅವರು ನಮ್ಮ ಮಕ್ಕಳು. ತುಂಬಾ ಮುಗ್ಧತೆ ಇರುವ ಹೆಣ್ಣುಮಕ್ಕಳು. ಅವರ ಮುಗ್ಧತೆಯನ್ನ ಕೆಲ ರಾಜಕಾರಣಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಮುಗ್ಧ ವಿದ್ಯಾರ್ಥಿನಿಯರಿಗೆ ಕೊಠಡಿಯಲ್ಲಿ ಕೂರಿಸಿ ಬುದ್ಧಿ ಹೇಳುತ್ತೇವೆ. ಇದು ಧರ್ಮದ ಶಿಕ್ಷಣವಲ್ಲ. ಇದನ್ನ ಹಿಜಾಬ್ ಧರಿಸುವ ವಿದ್ಯಾರ್ಥಿನಿಯರು ಅರ್ಥ ಮಾಡಿಕೊಳ್ಳಬೇಕು ಎಂದರು.
ನ್ಯಾಯಾಲಯದ ಆದೇಶವನ್ನು ನಿರೀಕ್ಷಿಸುತ್ತಿದ್ದೇವೆ. ಅದರ ಆಧಾರದ ಮೇಲೆ ಶಿಕ್ಷಣ ಇಲಾಖೆ ಮುಂದಿನ ಕ್ರಮ ಕೈಗೊಳ್ಳಲಿದೆ. ನಿಮಗೆ ಪಾಠ ಬೇಕಾದರೆ ಸಮವಸ್ತ್ರ ಧರಿಸಿಯೇ ಶಾಲಾ-ಕಾಲೇಜಿಗೆ ಬರಬೇಕು. ಶಾಲಾ ಆವರಣದ ಗೇಟ್​ವರೆಗೂ ಹಿಜಾಬ್ ಧರಿಸಿ ಬನ್ನಿ, ನಮ್ಮ ತಕಾರಾರಿಲ್ಲ. ನಿಮ್ಮ ಮಸೀದಿ ಒಳಗೆ ನಿಮಗೆ ಪ್ರವೇಶವಿಲ್ಲ. ಇದರ ವಿರುದ್ಧ ಹೋರಾಟ ಮಾಡಿ. ನಿಮ್ಮ ಹಕ್ಕುಗಳಿಗಾಗಿ ಅಲ್ಲಿ ಧ್ವನಿ ಎತ್ತಿ. ಶಿಕ್ಷಣ ವ್ಯವಸ್ಥೆ ಒಳಗಡೆ ಈ ಹೋರಾಟ ಮಾಡಬೇಡಿ. ಕೊಲಾರದಲ್ಲಿ ನಮಾಜ್ ಕೂಡ ಮಾಡಿದ್ದಾರೆ. ಇಂತಹದ್ದಕ್ಕೆಲ್ಲಾ ಅವಕಾಶ ಇಲ್ಲ ಎಂದು ಬಿ.ಸಿ. ನಾಗೇಶ್ ಹೇಳಿದರು.
ಕುಂದಾಪುರದಲ್ಲಿ ತಣ್ಣಗಾಗದ ವಿವಾದ: ಹಿಜಾಬ್​ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ

ತುಮಕೂರಲ್ಲಿ ಆರ್ಕೆಸ್ಟ್ರಾ ಕಲಾವಿದರನ್ನ ವೇಶ್ಯಾವಾಟಿಕೆ ದೂಡಲು ಯತ್ನ! ದಿನಕ್ಕೆ ಒಂದೂವರೆ ಸಾವಿರ ಕೊಡ್ತಾರೆ… ಆಡಿಯೋ ವೈರಲ್​

ಯಾದಗಿರಿಯ ಶಿಕ್ಷಕ ಒಂದಲ್ಲ, ಎರಡಲ್ಲ, ಮೂವರು ಹೆಂಡ್ತೀರ ಗಂಡ! ಇಬ್ಬರಿಗೆ ಕೈ ಕೊಟ್ಟು 3ನೇ ಹೆಂಡ್ತಿ ಜತೆ ಸಂಸಾರ… ಕೊನೆಗೂ ಆಯ್ತು ಶಾಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + fifteen =
Remember me
