ಬೆಂಗಳೂರು:ಯುದ್ಧಪೀಡಿತ ಯೂಕ್ರೇನ್​ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳ ಜತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ತುರ್ತು ಸಭೆ ಕರೆದಿದ್ದಾರೆ. ಎಂಬಿಬಿಎಸ್​ ವಿದ್ಯಾಭ್ಯಾಸಕ್ಕೆಂದು ಯೂಕ್ರೇನ್​ಗೆ ಹೋಗಿದ್ದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿದೆ. ಇಲ್ಲೇ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಿ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಿಎಂ, ರಾಜ್ಯದಲ್ಲಿ ವೈದ್ಯಕೀಯ ಶಿಕ್ಷಣ ಶುಲ್ಕ ಕಡಿಮೆ ಮಾಡುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ಸಚಿವ ಡಾ.ಕೆ. ಸುಧಾಕರ್ ತುರ್ತು ಸಭೆ ಕರೆದಿದ್ದಾರೆ.
ಸೋಮವಾರ ಮಧ್ಯಾಹ್ನ 2ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ಆರಂಭವಾಗಿದ್ದು, ಮೂವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳೂ ಭಾಗವಹಿಸಿದ್ದಾರೆ. ಯೂಕ್ರೇನ್​ನಿಂದ ವಾಪಸ್ಸಾಗಿರುವ ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಅಪೂರ್ಣವಾಗಿದೆ. ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರದ ಶುಲ್ಕ ಕಡಿಮೆಯಿದೆ. ಖಾಸಗಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಾಗಿದೆ. ಈ ವಿಷಯಗಳ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದ್ದು, ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದೆ.
ಎಚ್​ಡಿಕೆ ಬೆಂಗಾವಲು ವಾಹನ ಅಪಘಾತ: ಪಾವಗಡ ಬಸ್​ ದುರಂತದಲ್ಲಿ ಗಾಯಗೊಂಡವರ ಭೇಟಿ ವೇಳೆ ಮತ್ತೊಂದು ಅವಘಡ

ಆನೇಕಲ್​ನಲ್ಲಿ ಬೆಳ್ಳಂಬೆಳಗ್ಗೆ ಬೆಚ್ಚಿಬಿದ್ದ ಜನ! ಮಲಗಿದ್ದಲ್ಲೇ ಪತ್ನಿಯ ಕತ್ತು ಸೀಳಿ ಕೊಂದ, ಬಳಿಕ ತನ್ನ ಕತ್ತನ್ನೂ ಕೊಯ್ದುಕೊಂಡ…

ಉಡುಪಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ: ಇಬ್ಬರು ಸಜೀವ ದಹನ, ಮೂವರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 1 =
Remember me
