ಡೆಹ್ರಾಡೂನ್:ಪರಿಸರವಾದಿ, ಚಿಪ್ಕೊ ಚಳವಳಿಯ ನಾಯಕ, ಪದ್ಮವಿಭೂಷಣ ಸುಂದರ್​ಲಾಲ್​ ಬಹುಗುಣ(94) ಅವರು ಶುಕ್ರವಾರ ನಿಧರಾದರು.
ಕಳೆದ ವಾರ ಸುಂದರ್​ಲಾಲ್​ ಬಹುಗುಣ ಅವರಿಗೆ ಕರೊನಾ ಸೋಂಕು ತಗುಲಿತ್ತು. ಮೇ 8ರಂದು ಉತ್ತರಾಖಂಡದ ರಿಷಿಕೇಶ್​ನ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೇ 12ರಂದು ಶ್ವಾಸಕೋಶದಲ್ಲಿ ಸೋಂಕು ಇರುವುದು ಗೊತ್ತಾಗಿದ್ದು, ವೆಂಟಿಲೇಟರ್​ ಅಳವಡಿಸಲಾಗಿತ್ತು. ಮಧುಮೇಹ, ನ್ಯುಮೋನಿಯಾ ಕಾಯಿಲೆಯಿಂದಲೂ ಬಳಲುತ್ತಿದ್ದ ಸುದರ್​ಲಾಲ್​ ಬಹುಗುಣ ಅವರಲ್ಲಿ ಇನಕಳೆದಂತೆ ಉಸಿರಾಟ ಪ್ರಮಾಣದ ಮಟ್ಟ ಕುಸಿದಿದ್ದು, ಪರಿಸ್ಥಿತಿ ಗಂಭೀರವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟರು.
ಪರಿಸರವಾದಿ ಸುಂದರ್ ಲಾಲ್ ಬಹುಗುಣ ಅವರು ಹಿಮಾಲಯದಲ್ಲಿ ಕಾಡುಗಳ ಸಂರಕ್ಷಣೆಗಾಗಿ ಹೋರಾಟ ನಡೆಸಿದ್ದರು. 1973ರಲ್ಲಿ ಪರಿಸರ ಸಂರಕ್ಷಣೆಗಾಗಿ ನಡೆದ ಚಿಪ್ಕೋ ಚಳವಳಿಯನ್ನು ಮುನ್ನಡೆಸಿದ್ದರು. ತೆಹ್ರಿ ಅಣೆಕಟ್ಟು ವಿರುದ್ಧದ ಚಳವಳಿಯಲ್ಲೂ ಪ್ರಮುಖ ಪಾತ್ರವಹಿಸಿದ್ದರು.
ದಟ್ಟಾರಣ್ಯದ ಹಿಮಾಲಯದ ತಪ್ಪಲಿನ ಉತ್ತರಖಂಡದ ತೇಹ್ರಿ ಸಮಿಪದ ಮರೋಡ ಹಳ್ಳಿಯಲ್ಲಿ 1927 ಜನವರಿ 9ರಂದು ಜನಿಸಿದ ಸುಂದರ್ ಲಾಲ್ ಬಹುಗುಣ ದೇಶದ ಆರಂಭಿಕ ಹಂತದ ಪರಿಸರವಾದಿಗಳಲ್ಲಿ ಒಬ್ಬರು. 13ರ ವಯಸ್ಸಿನಲ್ಲೇ ಶ್ರೀದೇವಿ ಸುಮನ್​ರ ಮಾರ್ಗದರ್ಶನದಲ್ಲಿ ಸಾಮಾಜಿಕ ಚಟುವಟಿಕೆಗಳನ್ನು ಆರಂಭಿಸಿದ ಬಹುಗುಣ ತನ್ನ ಜೀವನದಲ್ಲಿ ಗಾಂಧಿ ತತ್ವಗಳನ್ನು ಅಳವಡಿಸಿಕೊಂಡಿದ್ದರು. ಗಾಂಧಿ ಜೀವನದಿಂದ ಪ್ರೇರಿತಗೊಂಡು ಸ್ವಾತಂತ್ರ್ಯ ಪೂರ್ವದಲ್ಲೇ ವಸಾಹತುಶಾಹಿ ಆಡಳಿತದ ವಿರುದ್ಧ ಜನರನ್ನು ಜಾಗೃತಗೊಳಿಸಿದ್ದರು.

ಏನಿದು ಚಿಪ್ಕೊ ಚಳುವಳಿ?ಹಿಮಾಲಯದ ಕಾಡುಗಳಿಗೆ ಹಾನಿ ಸಂಭವಿಸುತ್ತಿದ್ದುದನ್ನು ಗಮನಿಸಿದ ಸುಂದರ್ ಲಾಲ್ ಬಹುಗುಣ ಬೆಟ್ಟಗಳು-ಹಳ್ಳಿಗಳ ನಡುವೆ ಸುಮಾರು 4,700 ಕಿ.ಮೀಟರ್ ಗಳಷ್ಟು ದೂರ ಪಾದಯಾತ್ರೆ ಮಾಡಿ ಜನರನ್ನು ಎಚ್ಚರಿಸಿ ಹೋರಾಟ ನಡೆಸಿದರು. ಚಿಪ್ಕೋ ಚಳವಳಿಯ ನೇತೃತ್ವ ವಹಿಸಿ ಹೆಚ್ಚು ಜನಪ್ರಿಯರಾದರು.ಅರಣ್ಯಗಳು ಹಿಮಾಲಯದ ತಪ್ಪಲಿನ ಜನ-ಜೀವನದ ಪ್ರಮುಖ ಅಂಗವಾಗಿವೆ. ಚಿಪ್ಕೋ ಚಳವಳಿಗೆ ನಾಂದಿ ಹಾಡಿದ್ದು 1973ರ ಸುಮಾರಿಗೆ ಮಂಡಲ್ ಎಂಬ ಹಳ್ಳಿ. ತಮ್ಮ ಕೃಷಿ ಸಲಕರಣೆಗಳ ತಯಾರಿಗಾಗಿ ಮುರಿದು ಬಿದ್ದ ಮರಗಳನ್ನು ಜನರು ಉಪಯೋಗಿಸುವುದಕ್ಕೆ ಸರ್ಕಾರ ನಿರ್ಬಂಧ ಹೇರಿತ್ತು. ಸರ್ಕಾರದ ನಿರ್ಧಾರ ತೀವ್ರ ಜನಾಕ್ರೋಶಕ್ಕೆ ಕಾರಣವಾಗಿತ್ತು. ಇದೇ ಸಂದರ್ಭ ಬಂಡವಾಳಶಾಹಿಗೆ ಮಣಿದ ಸರ್ಕಾರ ಇದೇ ಪ್ರದೇಶದಲ್ಲಿ ಕ್ರೀಡಾ ಉಪಕರಣಗಳನ್ನು ತಯಾರಿಸುವ ಕಂಪನಿಯೊಂದಕ್ಕೆ ಮರಗಳನ್ನು ಕಡಿಯಲು ಅನುಮತಿ ನೀಡಿತು.
ಕಾಡಿನ ನಾಶದ ಮುನ್ಸೂಚನೆ ಅರಿತ ಸ್ಥಳೀಯ ಮಹಿಳೆಯರು ಮರಗಳ ಸುತ್ತ ವೃತ್ತಾಕಾರದಲ್ಲಿ ನಿಂತು ಮರ ಕಡಿಯಲು ತಡೆಯೊಡ್ಡಿದರು. ಹಗಲು-ರಾತ್ರಿಯೆನ್ನದೆ ಮರಗಳನ್ನು ಅಪ್ಪಿಕೊಂಡು ನಿಂತ ಪರಿಣಾಮ ಗುತ್ತಿಗೆದಾರ ಹಿಂತಿರುಗಬೇಕಾಯಿತು. ಸುಂದರ್​ಲಾಲ್ ಬಹುಗುಣ ಚಳವಳಿಯ ನೇತೃತ್ವ ವಹಿಸಿದರು. ಮರ ಕಡಿಯುವುದ ವಿರುದ್ಧ ಆಗಿನ ಪ್ರಧಾನಿ ಇಂದಿರಾ ಗಾಂಧಿ ಅವರಲ್ಲಿ ಮನವಿ ಮಾಡಿ ಸರ್ಕಾರದ ಕ್ರಮದ ವಿರುದ್ಧ ಸತತ ಹೋರಾಟ ನಡೆಸಿದರು.
ಚಳವಳಿ ಹೊರ ಪ್ರದೇಶಗಳಿಗೂ ಹರಡಿತು. ಜನ ಜಾಗೃತರಾಗಿ ಹೋರಾಟ ತೀವ್ರಗೊಂಡಿತು. ಪರಿಣಾಮ ಆ ಪ್ರದೇಶದಲ್ಲಿ 15 ವರ್ಷ ಯಾವುದೇ ಮರ ಕಡಿಯದಂತೆ 1981ರಲ್ಲಿ ಕಾನೂನು ಹೊರ ಬಂದಿತು. ಸರ್ಕಾರ ಅದೇ ವರ್ಷ ಬಹುಗುಣರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿತು. ಆದರೆ ಪರಿಸರ ಸಂರಕ್ಷಣೆಯ ವಿಷಯದಲ್ಲಿ ಸರ್ಕಾರದ ಧೋರಣೆಯನ್ನು ಸಹಿಸದ ಬಹುಗುಣ ಪ್ರಶಸ್ತಿಯನ್ನು ತಿರಸ್ಕರಿಸಿದರು.

ಚಿಪ್ಕೋ ಚಳವಳಿಯ ನಂತರ ಬಹುಗುಣ ಹಿಮಾಲಯದ ಪ್ರದೇಶಗಳಿಗೆ ಪಾದಯಾತ್ರೆ ಕೈಗೊಂಡು ಜನರಿಗೆ ಚಳವಳಿಯ ಸಂದೇಶವನ್ನು ತಲುಪಿಸಿದ ಪರಿಣಾಮ ಅವರಿಗೆ ಬೆಂಬಲ ದೊರೆಯಿತು. ಜತೆಗೆ ಸ್ಥಳೀಯರಿಗೆ ಕಡಿಮೆ ದರದಲ್ಲಿ ಮೇವನ್ನು ಉತ್ಪಾದಿಸಲು ವ್ಯವಸ್ಥೆ ಮಾಡಿ, ಕಡಿಮೆ ಉತ್ಪಾದನೆ ಕೊಡುವ ಭೂಮಿಯಲ್ಲಿ ಗಿಡ ನೆಡಲು ಸಹಾಯ ಮಾಡಿದರು. ತೇಹ್ರಿ ಅಣೆಕಟ್ಟಿನ ವಿರುದ್ಧ ತೀವ್ರ ಹೋರಾಟ ಮಾಡಿ ಅದನ್ನು ತಡೆಗಟ್ಟಿ ಭಾಗೀರಥಿ ನದಿಯನ್ನು ರಕ್ಷಿಸಿದ ಹಿರಿಮೆ ಅವರದ್ದು. ಸಸ್ಯಗಳ ಮಡಿಗಳನ್ನು ಕಾಪಾಡಲು ಮಾಡಿದ “ಬೀಚ್ ಬಚಾವೋ” ಆಂದೋಲನ ಇಂದಿಗೂ ನಡೆಯುತ್ತಿದೆ.
ಚಿಪ್ಕೋ ಚಳವಳಿಯ ಪ್ರಭಾವದಿಂದಾಗಿ ಪಶ್ಚಿಮ ಘಟ್ಟದಲ್ಲಿನ ಅರಣ್ಯ ನಾಶದ ವಿರುದ್ಧದ ಅಪ್ಪಿಕೋ ಚಳವಳಿ ಕೂಡ ಕಾವೇರಿತು. ಸುಂದರ್​ಲಾಲ್ ಬಹುಗುಣ ಹೋರಾಟದ ಫಲವಾಗಿ ಅಧಿಕಾರಿಶಾಹಿಗಳಿಂದ ತಮ್ಮ ಸಂಪನ್ಮೂಲಗಳನ್ನು ರಕ್ಷಿಸಲು ಹಿಮಾಲಯ ತಪ್ಪಲಿನ ಜನರಿಗೆ ಪರೋಕ್ಷವಾಗಿ ಕಾರಣರಾದರು.
ಪದ್ಮಶ್ರೀ ತಿರಸ್ಕರಿಸಿದ ಬಹುಗುಣರಿಗೆ ಭಾರತ ಸರ್ಕಾರ 2009ರಲ್ಲಿ ಪದ್ಮವಿಭೂಷಣ ನೀಡಿ ಗೌರವಿಸಿತು. ಚಿಪ್ಕೋ ಚಳವಳಿಗಾಗಿ “ರೈಟ್ ಲೈವ್ಲಿ ಹುಡ್ ಅವಾರ್ಡ್” ಮತ್ತು ಜಮ್ನಾಲಾಲ್ ಬಜಾಜ್ ಪ್ರಶಸ್ತಿ ಲಭಿಸಿತು. 1989ರಲ್ಲಿ ಐಐಟಿ ರೂರ್ಕಿ ಅವರು ಡಾಕ್ಟರ್ ಆಫ್ ಸೋಷಿಯಲ್ ಸೈನ್ಸಸ್ ಗೌರವ ಪದವಿ ನೀಡಿದರು.
ಕಾಡಿನ ವಿನಾಶದ ಪರಿಣಾಮವನ್ನು ಒಂದಿಡೀ ಸಮುದಾಯಕ್ಕೆ ಅರ್ಥೈಸಿದ ಸುಂದರ್​ಲಾಲ್ ಬಹುಗುಣ ಬಹುದೊಡ್ಡ ಜನ-ಜಾಗೃತಿಗೆ ಕಾರಣರಾದರು. ಎಚ್ಚತ್ತುಕೊಂಡ ಜನ-ಸಮುದಾಯ ಅನಾಹುತವನ್ನು ಸರಿಸುವಲ್ಲಿ ಯಶಸ್ವಿಯಾಯಿತು. ಚಿಪ್ಕೋ ಚಳವಳಿ ನಡೆದು 4 ದಶಕಗಳೇ ಉರುಳಿದವು. ಪರಿಸರದ ಮೇಲಿನ ಹಾನಿಯನ್ನು ಅಂದಿಗಿಂತಲೂ ಹೆಚ್ಚಾಗಿಯೇ ಇಂದು ಅನುಭವಿಸುತ್ತಿರುವ ಮನುಷ್ಯ ಇನ್ನೂ ಎಚ್ಚತ್ತುಕೊಳ್ಳದಿರುವುದು ದೌರ್ಭಾಗ್ಯ. ತಾನೇ ಸೃಷ್ಟಿಸಿಕೊಂಡ ವಿಷ ವರ್ತುಲದೊಳಗೆ ಸಿಲುಕಿಕೊಂಡು ಒದ್ದಾಡುತ್ತಿದ್ದರೂ ಇನ್ನೂ ತನ್ನ ತಪ್ಪನ್ನು ಒಪ್ಪಿಕೊಳ್ಳಲು ಸಿದ್ಧನಾಗದ ಮಾನವ ತಾನು ಪರಿಸರದ ಮೇಲೆ ಮಾಡಿದ ದೌರ್ಜನ್ಯವನ್ನು ಸಮರ್ಥಿಸಿಕೊಳ್ಳುತ್ತಲೇ ಇದ್ದಾನೆ.
ದೆಹಲಿ ರೈತ ಹೋರಾಟಕ್ಕೆ ಬೆಂಬಲಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದೇಶದ ರೈತರು ಕಳೆದ 23 ದಿನಗಳಿಂದ ಸತತವಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಹಲವು ಸುತ್ತಿನ ಮಾತುಕತೆ ವಿಫಲವಾಗಿದೆ. ದೇಶದ ಖ್ಯಾತ ಚಿಪ್ಕೋ ಚಳವಳಿಯ ನೇತಾರ ಸುಂದರ್​ಲಾಲ್​ ಬಹುಗುಣ ಸಹ ರೈತ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು ರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿತ್ತು.
ಅಪ್ಪಿಕೋ ಚಳವಳಿ1983ರ ಸೆಪ್ಟೆಂಬರ್ 8 ರಂದು ಶಿರಸಿ ತಾಲೂಕಿನ ಕಳಾಸೆ ಕುದ್ರಗೋಡ ಅರಣ್ಯದಲ್ಲಿ ಚಳವಳಿ ಪ್ರಾರಂಭವಾದ ಅಪ್ಪಿಕೋ ಚಳವಳಿಯು ಇಡಿ ಕರ್ನಾಟಕದ ಮಲೆನಾಡಿನ ಪ್ರದೇಶದಲ್ಲಿ ವ್ಯಾಪಿಸಿತು. ಅದಕ್ಕೂ ಮುನ್ನ ರಾಷ್ಟ್ರೀಯ ಖ್ಯಾತಿಯ ಪರಿಸರ ಚಳವಳಿಯ ನೇತಾರ ಸುಂದರಲಾಲ್ ಬಹುಗುಣರು ಬಾಳೆಗದ್ದೆಯ ಬಿಳಗಲ್ ಅಡವಿಗೆ ಭೇಟಿಯಿತ್ತು ಹಳ್ಳಿಗರೊಡನೆ ಚರ್ಚೆ ನಡೆಸಿದ್ದು, ಮರ ಉಳಿಸಲು ಅಹಿಂಸಾತ್ಮಕ ಹೋರಾಟದ ಪ್ರತಿಜ್ಞೆ ಮಾಡಿದ್ದು ಇತಿಹಾಸದಲ್ಲಿ ದಾಖಲಾಗಿದೆ.
ಇನ್ನೆರಡು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿದ್ದ 24 ವರ್ಷದ ಪಿಎಸ್​ಐ ಕರೊನಾಗೆ ಬಲಿ!

ಮಾಂಗಲ್ಯ ಸರ ಮಾರಿ ಹಣ ಕಟ್ಟಿದರೂ ಗಂಡ ಬದುಕಲಿಲ್ಲ, ಶವ ಇಟ್ಟುಕೊಂಡು ಹಣಕ್ಕೆ ಬೇಡಿಕೆ ಇಟ್ಟ ಆಸ್ಪತ್ರೆ!

ಪರಸ್ತ್ರೀ ಜತೆ ಯುವಕನ ಸಲ್ಲಾಪ! ಸೆಕ್ಸ್​ ಮಾಡುತ್ತಿರುವಾಗಲೇ ಸಿಕ್ಕಿಬಿದ್ದ ಜೋಡಿ… ಕ್ಷಣಾರ್ಧದಲ್ಲೇ ನಡೆಯಿತು ದುರಂತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
