ಬೆಂಗಳೂರು:ಶಿವಮೊಗ್ಗದಿಂದ ಬೆಂಗಳೂರಿನತ್ತ ಸಚಿವ ಕೆ.ಎಸ್​.ಈಶ್ವರಪ್ಪ ಪ್ರಯಾಣ ಬೆಳೆಸಿದ್ದು, ಇನ್ನು ಕೆಲವೇ ಕ್ಷಣದಲ್ಲಿ ರಾಜೀನಾಮೆ ನೀಡಲಿದ್ದಾರೆ. ಇದಕ್ಕೂ ಮುನ್ನ ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಮಠಕ್ಕೂ ಭೇಟಿ ಕೊಡಲಿದ್ದಾರೆ.
ಶಿವಮೊಗ್ಗದ ಬಿಜೆಪಿ ಕಚೇರಿ ಬಳಿ ಬೆಂಗಳೂರಿಗೆ ತೆರಳುವ ಮುನ್ನ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಈಶ್ವರಪ್ಪ ಮಾತನಾಡಿದರು. ಈ ವೇಳೆ ರಾಜೀನಾಮೆ ಕೊಡಬೇಡಿ ಎಂದು ಕಣ್ಣೀರಿಟ್ಟ ಬಿಜೆಪಿ ಮಹಿಳಾ ಕಾರ್ಯಕರ್ತೆಯರನ್ನು ಸಂತೈಸಿದ ಈಶ್ವರಪ್ಪ, ನೀವು ಹೀಗೆ ಅಳುತ್ತಿದ್ದರೆ ನಾನು ಇಲ್ಲಿಂದ ಹೋಗುವುದೇ ಇಲ್ಲ. ಸಂತೋಷದಿಂದ ಕಳಿಸಿಕೊಡಿ ಎಂದು ಮನವಿ ಮಾಡಿದರು. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ. ಆರೋಪದಿಂದ ಮುಕ್ತನಾಗಿ ಬರುವೆ ಎಂದರು. ಬಳಿಕ ಕಡೂರಿನಲ್ಲಿ ಮಧ್ಯಾಹ್ನದ ಊಟ ಸೇವಿಸಿದ ಈಶ್ವರಪ್ಪ, ಪ್ರಯಾಣ ಮುಂದುವರಿಸಿದರು.
ಅತ್ತ ಕಾರ್​ ರ್ಯಾಲಿ ಬಗ್ಗೆ ಟೀಕಿಸಿದ ಕಾಂಗ್ರೆಸ್​, ಈಶ್ವರಪ್ಪ ದುಡ್ಡು ಕೊಟ್ಟು ಜನರನ್ನು ಕರ್ಕೊಂಡು ಬರ್ತಿದ್ದಾರೆ. ಈಶ್ವರಪ್ಪರ ಬಂಧನ ಆಗುವವರೆಗೂ ಪ್ರತಿಭಟನೆ ನಿಲ್ಲಿಸಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ.
ಗುತ್ತಿಗೆದಾರನ​ ಸಾವಿಗೂ ಮುನ್ನ ಲಾಡ್ಜ್​ಗೆ ಬಂದಿದ್ದನೇ ರಾಜೇಶ್​? ಯಾರೀತ? ಈ ಕೇಸ್​ಗೆ ಮತ್ತೊಂದು ತಿರುವು

ರಾಮನಗರದಲ್ಲಿ ಕಾಂಗ್ರೆಸ್​ ಮುಖಂಡನ ಕೊಲೆ: 49 ದಿನದ ಬಳಿಕ ಬಯಲಾಯ್ತು ಸೊಸೆ ರಹಸ್ಯ

ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟು PSIಗೆ ಬೆವರಿಳಿಸಿ ಭಾರೀ ಸುದ್ದಿಯಾಗಿದ್ದ ತುಮಕೂರು SPಗೆ ಆತ್ಮಹತ್ಯೆ ಬೆದರಿಕೆ!

ನಾನು ಶಾಸಕ, ಸಚಿವ, ಡಿಸಿಎಂ ಆಗಿದ್ದೀನಿ… ಆದ್ರೆ ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
