ಶಿರಾ:ಕಾರು ಅಪಘಾತದಲ್ಲಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರ ಆರೋಗ್ಯ ಸ್ಥಿರವಾಗಿದೆ, ಸುಮಾರು ಮೂರು ವಾರಗಳ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ ಎಂದು ಅವರ ಪುತ್ರ ಟಿಬಿಜೆ ಪುತ್ರ ಸಂಜಯ್​ ಜಯಚಂದ್ರ ತಿಳಿಸಿದ್ದಾರೆ.
ವಿಡಿಯೋ ಬಿಡುಗಡೆ ಮಾಡಿದ ಟಿಬಿಜೆ:ಭಗವಂತನ ದಯೆ, ಶಿರಾ ಕ್ಷೇತ್ರದ ಜನರ ಆಶೀರ್ವಾದ ಮತ್ತು ಕಾಂಗ್ರೆಸ್​ ಕಾರ್ಯಕರ್ತರ ಹಾರೈಕೆಗಳಿಂದ ನಾನು ಪವಾಡ ಸದೃಶ್ಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ನನ್ನ ಆರೋಗ್ಯ ಸ್ಥಿರವಾಗಿದೆ. ಯಾರೂ ಆತಂಕಕ್ಕೆ ಒಳಗಾಗಬಾರದು. ನನ್ನನ್ನು ಭೇಟಿ ಮಾಡಲು ಆಸ್ಪತ್ರೆಗೆ ಬರಬೇಡಿ, ಶೀಘ್ರದಲ್ಲಿ ಗುಣಮುಖನಾಗಿ ನಿಮ್ಮ ಮುಂದೆ ಬಂದು ಮತ್ತೆ ನಿಮ್ಮ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಜಯಚಂದ್ರ ಬೆಂಗಳೂರಿನ ಆಸ್ಪತ್ರೆಯಿಂದಲೇ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಮಂಗಳವಾರ ರಾತ್ರಿ ಶಿರಾ ವಿಧಾನಸಭಾ ಕ್ಷೇತ್ರದ ಕೆಲವು ಹಳ್ಳಿಗಳಲ್ಲಿ ಊರಹಬ್ಬದಲ್ಲಿ ಪಾಲ್ಗೊಂಡಿದ್ದ ಜಯಯಂದ್ರ ಅವರು ಕಾರಿನಲ್ಲಿ ತಡರಾತ್ರಿ ಬೆಂಗಳೂರಿಗೆ ವಾಪಸ್​ ತೆರಳುತ್ತಿದ್ದರು. ತುಮಕೂರಿನ ಸೀಬಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿತ್ತು. ಅದೃಷ್ಟವಶಾತ್​ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಯಚಂದ್ರ ಹಾಗೂ ಅವರ ಗನ್​ ಮ್ಯಾನ್​, ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜಯಚಂದ್ರ ಅವರ ಎಡಗೈ ಮೂಳೆಗೆ ಪೆಟ್ಟಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜೈನ ಭಗವತಿ ದೀಕ್ಷೆ ಸ್ವೀಕರಿಸಲಿದ್ದಾರೆ ಶಿವಮೊಗ್ಗದ ಬಾಲಕಿ! ಅತ್ತೆಯ ಪ್ರಭಾವ… ಸುಖ-ವೈಭೋಗಕ್ಕೆ ವಿದಾಯ

ಕೆಜಿಎಫ್-2 ಸಿನಿಮಾ ನೋಡುವಾಗ ಥಿಯೇಟರ್​ನಲ್ಲೇ ಗುಂಡಿನ ದಾಳಿ: ಯುವಕನ ಸ್ಥಿತಿ ಗಂಭೀರ, ಟಾಕೀಸ್ ಬಂದ್​

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ ಮಾಡಿಕೊಂಡಿದ್ದ ಉಡುಪಿಯ ಲಾಡ್ಜ್​ನಲ್ಲಿ ಮತ್ತೊಬ್ಬ ನೇಣಿಗೆ ಶರಣು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 3 =
Remember me
