ಕಲಬುರಗಿ:ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ, ಜೀವ ಬೆದರಿಕೆ ಸೇರಿದಂತೆ ಹಲವು ಕೇಸ್​ಗಳಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಮುಖಂಡ ಮಣಿಕಂಠ ರಾಠೋಡರನ್ನು ಕಲಬುರಗಿಯಿಂದ ಒಂದು ವರ್ಷ ಗಡಿಪಾರು ‌ಮಾಡಲಾಗಿದೆ.
ಕಲಬುರಗಿ ನಗರದಿಂದ ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ಗ್ರಾಮೀಣ ಠಾಣೆ ವ್ಯಾಪ್ತಿಗೆ ಗಡಿಪಾರು ಮಾಡಿ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ.ಎಸ್.ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಸೆ.30ರ‍ಂದೇ ಆದೇಶ ಹೊರಡಿಸಲಾಗಿದ್ದು, ಗಡಿಪಾರಾಗಲು 5 ದಿನ ಕಾಲಾವಕಾಶ ‌ನೀಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಣಿಕಂಠ ವಿರುದ್ಧ ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಹಲವು ಪ್ರಕರಣ ದಾಖಲಾಗಿವೆ. ಹೆಚ್ಚಿನವು ಪಡಿತರ ಅಕ್ಕಿ ಸಾಗಾಟಕ್ಕೆ ಸಂಬಂಧಿಸಿವೆ. ಕಾನೂನು ಮತ್ತು ಸುವ್ಯಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಇತ್ತೀಚೆಗೆ ಕಲಬುರಗಿ ನಗರಕ್ಕೆ ಭೇಟಿ ನೀಡಿದಾಗ ದಲಿತ ಸಂಘಟನೆಗಳ ಮುಖಂಡರು ಮಣಿಕಂಠ ರಾಡೋಡ ಗಡಿಪಾರಿಗೆ ಒತ್ತಾಯಿಸಿದ್ದರು. ಆ ವೇಳೆ ಕ್ರಮ ಕೈಗೊಳ್ಳುವುದಾಗಿ ಎಡಿಜಿಪಿ ಭರವಸೆ ಸಹ ನೀಡಿದ್ದರು.
ಕಲಬುರಗಿಯ ಶರಣಬಸವೇಶ್ವರ ಗುಡಿ ರಸ್ತೆಯಲ್ಲಿ ಎಂ.ಆರ್. ಮಾರ್ಟ್ ಸೂಪರ್ ಮಾರ್ಕೆಟ್ ಆರಂಭಿಸಿರುವ ಮಣಿಕಂಠ ರಾಠೋಡ ಅದರ ಉದ್ಘಾಟನೆಗೆ ಖ್ಯಾತ ಗಾಯಕಿ ಮಂಗ್ಲಿ ಅವರನ್ನು ಹೈದರಾಬಾದ್​ನಿಂದ ಕರೆಸಿ ಸುದ್ದಿಯಾಗಿದ್ದರು.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಜತೆಗಿನ ಫೋಟೋಗಳನ್ನು ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳಲು ಕಳೆದೊಂದು ವರ್ಷದಿಂದ ಕ್ಷೇತ್ರದಲ್ಲಿ ಓಡಾಡಿಕೊಂಡಿದ್ದರು. ಅವರದೇ ಸಮುದಾಯಕ್ಕೆ ಸೇರಿದ ಬಿಜೆಪಿ ಮುಖಂಡರೊಬ್ಬರು ಗಡಿಪಾರು ಆಗದಂತೆ ಪೊಲೀಸರ ಮೇಲೆ ಪ್ರಭಾವ ಬೀರಿ ಒತ್ತಡ ಹೇರುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಈಗ ಗಡಿಪಾರು ಆದೇಶ ಹೊರಬಿದ್ದಿದೆ.
ಆಳಂದ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಗಲಭೆಗೆ ಸಂಬಂಧಿಸಿದಂತೆ ಕಲಬುರಗಿ ಎಸ್ಪಿ ಇಶಾಪಂತ್ ಅವರ ಶಿಫಾರಸಿನ ಮೇರೆಗೆ ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ಅವರು ಫಿರೋಜ್ ಎಂಬಾತನನ್ನು ಬೆಳಗಾವಿ ಜಿಲ್ಲೆಗೆ ಗಡಿಪಾರು ಮಾಡಿದ್ದರು. ಅದರಂತೆ ರೌಡಿ ಪಟ್ಟಿಗೆ ಸೇರಿಸಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಗಡಿಪಾರು ಮಾಡುವ ಸಾಧ್ಯತೆ ‌ಇದೆ.
ICU ಬೆಡ್​ ಮೇಲೆ ಮಲಗಿಕೊಂಡೇ ಸಬ್​ರಿಜಿಸ್ಟ್ರಾರ್​ ಕಚೇರಿಗೆ ಬಂದು ಆಸ್ತಿ ಪತ್ರಕ್ಕೆ ಸಹಿ ಹಾಕಿದ ವೃದ್ಧೆ!

ಥೂ, ಇವರೆಂಥಾ ಕ್ರೂರಿಗಳು? ರಾತ್ರೋರಾತ್ರಿ ಅಮಾನುಷ ಕೃತ್ಯವೆಸಗಿ ‘ದೈವಾದೇಶ’ ಎಂದ ದುಷ್ಟರು.. ಈ ಸ್ಟೋರಿ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − seven =
Remember me
