ಬೆಂಗಳೂರು:ಬಹುಭಾಷಾ ನಟಿ ಸಂಜನಾ ಗಲ್ರಾನಿ ಕೊನೆಗೂ ತನ್ನ ಮದುವೆ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ಡ್ರಗ್ಸ್ ಕೇಸ್​ನಲ್ಲಿ ಜೈಲು ಸೇರಿದ್ದ ಸಂದರ್ಭದಲ್ಲಿ ಸಂಜನಾರ ಮದುವೆ ವಿಚಾರ ಭಾರೀ ಸುದ್ದಿ ಮಾಡಿತ್ತಾದರೂ ಸ್ಪಷ್ಟತೆ ಸಿಕ್ಕಿರಲಿಲ್ಲ. ಇದೀಗ ಸ್ವತಃ ಸಂಜನಾರೇ ತಾನು ಮದುವೆಯಾಗಿದ್ದೇನೆ ಎಂಬ ಸತ್ಯ ಬಾಯ್ಬಿಟ್ಟಿದ್ದಾರೆ.
ಕರೊನಾ ಲಾಕ್​ಡೌನ್​ ಹಿನ್ನೆಲೆ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಂಜನಾ ಗಲ್ರಾನಿ ಫೌಂಡೇಶನ್ ವತಿಯಿಂದ ನೆರವು ನೀಡುತ್ತಿರುವ ನಟಿ, ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಕಚೇರಿ ಪಕ್ಕದಲ್ಲಿರುವ ಗುರುರಾಜ ಮಂಟಪದಲ್ಲಿ ಲೈಟ್ ಮೆನ್ ಸಂಘ ಮತ್ತು ಪ್ರೊಡಕ್ಷನ್ ಯೂನಿಟ್​ನ ಸದಸ್ಯರಿಗೆ ಆಹಾರ ಕಿಟ್ ವಿತರಿಸಿದರು. ಇದೇ ವೇಳೆ ಮಾತನಾಡಿದ ಸಂಜನಾ, ಕಳೆದ ಲಾಕ್​ಡೌನ್​ನಲ್ಲಿ ಅಜೀಜ್ ಜತೆ ನನ್ನ ಮದುವೆ ಆಗಿರೋದು ನಿಜ ಎಂದರು.ಇದನ್ನೂ ಓದಿರಿಮೈಸೂರಿನಲ್ಲಿ ಇಂಜಿನಿಯರ್​ ಸಾವು! 2 ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದವರ ಬಾಳಿಗೆ ಕೊಳ್ಳಿ ಇಟ್ಟಿದ್ದೇನು?
ನನ್ನ ಮದುವೆ ವಿಷ್ಯವನ್ನು ಲಾಕ್​ಡೌನ್ ಮುಗಿದ ಮೇಲೆ ತಿಳಿಸೋಣ ಅಂತಿದ್ದೆ. ಆದರೆ ನಾನಾ ಕಾರಣದಿಂದ ಮದುವೆ ಸಂಭ್ರಮವನ್ನ ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಆಗಲಿಲ್ಲ. ಚಿತ್ರರಂಗದ ಅಣ್ಣ-ತಮ್ಮಂದಿರಿಗೆ ಊಟ ಹಾಕಿಸೋಕೂ ಆಗಲಿಲ್ಲ ಅನ್ನೋ ಕೊರಗಿದೆ. ಮದುವೆ ಸಂಭ್ರಮದ ಬದಲಾಗಿ ಲಾಕ್​​ಡೌನ್ ಸಂದರ್ಭದಲ್ಲಿ ಊಟಕ್ಕೆ ಪರದಾಡುತ್ತಿರುವ ಜನರ ಹಸಿವನ್ನ ನೀಗಿಸುವ ಕೆಲಸ ಮಾಡುತ್ತಿದ್ದೇನೆ ಎಂದು ಸಂಜನಾ ಹೇಳಿದರು.
https://www.instagram.com/p/CPo1S0pJWb8/?utm_source=ig_web_button_share_sheet
ಸಂಜನಾ ಗಲ್ರಾನಿ ಫೌಂಡೇಷನ್ ವತಿಯಿಂದ ಕೈಲಾದ ಸಹಾಯ ಮಾಡ್ತಿದ್ದೀವಿ. ಭಗವಂತ ಶಕ್ತಿ ಕೊಟ್ಟರೆ ಕನ್ನಡ ಇಂಡಸ್ಟ್ರಿಯೇ ನನ್ನ ಮೊದಲ ಆದ್ಯತೆ ಎಂದರು. ಸಂಜನಾರ ಪತಿ ಡಾ.ಅಜೀಜ್ ಪಾಷ ಬೆಂಗಳೂರಿನ ಪ್ರಸಿದ್ಧ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ.
ಲಾಕ್​ಡೌನ್​ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಕಲಾವಿದರು ಮತ್ತು ತಂತ್ರಜ್ಞರಿಗೆ ಸಂಜನಾ ಗಲ್ರಾನಿ ದಿನಸಿ​​ ಕಿಟ್​​​ ವಿತರಿಸಿದರು. ಸಂಜನಾಗೆ ನಿರ್ಮಾಪಕ ಕೆ.ಮಂಜು, ಎನ್.ಕುಮಾರ್ ಹಾಗೂ ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಸಾಥ್ ನೀಡಿದರು.
ಚಾಮರಾಜನಗರದಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಅತ್ತ ಪ್ರಿಯಕರನೊಂದಿಗೆ ಓಡಿ ಹೋದ ಮಗಳು, ಇತ್ತ ತೋಟದ ಮನೆಯಲ್ಲಿ ನಡೆಯಿತು ಘನಘೋರ ದುರಂತ!

ಅಮ್ಮನ ಸಾವಿನ ಸುದ್ದಿ ಕೇಳುತ್ತಿದ್ದಂತೆ ವಿದೇಶದಿಂದ ಬೀದರ್​ಗೆ ಬಂದ ಮಗನೂ ದುರಂತ ಅಂತ್ಯ!

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಹತ್ಯೆ! ‘ಕಾಮ’ದಾಹ ತೀರದ ಸಿಟ್ಟಿಗೆ ಮೂರು ಮಕ್ಕಳನ್ನ ನಾಲೆಗೆ ಎಸೆದ

ಬೆತ್ತಲೆ ಸ್ಥಿತಿಯಲ್ಲೇ ಕಂಬದಲ್ಲಿ ನೇತಾಡುತ್ತಿದ್ದ ಮಹಿಳೆ! ಬೆಳ್ಳಂಬೆಳಗ್ಗೆ ನಡೆದ ಈ ಕೃತ್ಯ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ರಿಯಕರನ ಜತೆಗೂಡಿ ಗಂಡನನ್ನು ಕೊಂದು ಬೆಡ್​ ರೂಂನಲ್ಲೇ ಸುಟ್ಟುಹಾಕಿದ ಪತ್ನಿ! ವಾರದ ಬಳಿಕ ಬಯಲಾಗಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − sixteen =
Remember me
