ಚಿತ್ರದುರ್ಗ:ಹೊಳಲ್ಕೆರೆ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕುಟುಂಬಸ್ಥರ ವಿರುದ್ಧ ಮೃತ ವ್ಯಕ್ತಿಯ ಆಸ್ತಿಯನ್ನು ಅಕ್ರಮವಾಗಿ ಬರೆಸಿಕೊಂಡ ಆರೋಪ ಕೇಳಿ ಬಂದಿದ್ದು, ಮೃತನ ಸಹೋದರಿ ಕೊಟ್ಟ ದೂರಿನ ಮೇರೆಗೆ ಎಫ್​ಐಆರ್​ ದಾಖಲಾಗಿದೆ.
ಶಾಸಕರ ಪತ್ನಿ ಚಂದ್ರಕಲಾ, ಪುತ್ರರಾದ ರಘುಚಂದನ್ ಮತ್ತು ದೀಪ್ ಚಂದನ್, ಉದ್ಯಮಿ ನಾಗರಾಜ್, ಸಬ್​ರಿಜಿಸ್ಟ್ರಾರ್​ ನಾಗರತ್ನ ವಿರುದ್ಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.
ಏನಿದು ಪ್ರಕರಣ?:ಹೊಳಲ್ಕೆರೆಯ ಎಂ.ಜಿ.ಶ್ರೀಧರ್​ ಎಂಬುವವರು ಉದ್ಯಮಿ ನಾಗರಾಜ್​ಗೆ ವ್ಯವಹಾರದ ಉದ್ದೇಶದಿಂದ 2016ರಲ್ಲಿ ಜಿಪಿಎ(ಜನರಲ್​ ಪವರ್​ ಆಫ್​ ಅಟಾರ್ನಿ) ನೀಡಿದ್ದರು. ಈ ನಡುವೆ ಶ್ರೀಧರ್​ ಅವರ ಸಹೋದರಿ ಲತಾ ಸುಂದರ್​ ಎಮಬಾಕೆ ಪಿತ್ರಾರ್ಜಿತ ಆಸ್ತಿಯಲ್ಲಿ ಭಾಗ ಕೇಳಿ ಕೋರ್ಟ್​ನ ಮೊರೆ ಹೋಗಿದ್ದರು. ಪ್ರಕರಣ ಇತ್ಯರ್ಥವಾಗುವ ಮೊದಲೇ ಶ್ರೀಧರ್ ಅನಾರೋಗ್ಯದಿಂದ ತೀರಿಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ನಾಗರಾಜ್​, ಶಾಸಕರ ಕುಟುಂಬಕ್ಕೆ ಆಸ್ತಿಯನ್ನು ಮಾರಾಟ ಮಾಡಿಬಿಟ್ಟಿದ್ದಾರೆ.
ಈ ವಿಚಾರ ತಿಳಿದ ಶ್ರೀಧರ್ ಅವರ ಮತ್ತೊಬ್ಬ ಸಹೋದರಿ ಪದ್ಮಜಾ ಅವರು ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ಕಬಳಿಸಿದ್ದಾರೆ. ಇದರಲ್ಲಿ ಉಪನೋಂದಣಾಧಿಕಾರಿ ನಾಗರತ್ನ ಕೂಡ ಶಾಮೀಲಾಗಿದ್ದಾರೆ. ಇವರ ವಿರುದ್ಧ ಪ್ರಕರಣ ದಾಖಲಿಸಿ ನಮಗೆ ನ್ಯಾಯ ಕೊಡಬೇಕು ಎಂದು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ, ಆರೋಪಿಗಳ ವಿರುದ್ಧ ಕೇಸ್​ ದಾಖಲಿಸುವಂತೆ ಏ.30ರಂದು ಪೊಲೀರಿಗೆ ಸೂಚನೆ ನೀಡಿದ ಹಿನ್ನೆಲೆ ಎಫ್​ಐಆರ್ ದಾಖಲಾಗಿದೆ. ಕಲಂ 404, 405, 415, 420, 423, 463, 464, 466, 468, 470, ರೆ/ವಿ 149 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಪತ್ನಿಯ ಕೊಲೆ ಕೇಸ್​ನಲ್ಲಿ ಗಂಡನಿಗೆ ಜೈಲುಶಿಕ್ಷೆ, ಅತ್ತ ಪ್ರಿಯಕರನೊಂದಿಗೆ ಪ್ರತ್ಯಕ್ಷವಾದ ಪತ್ನಿ! ದುಡುಕಿಬಿಟ್ಟ ಮಾವ…

ಮದ್ವೆಯಾದ 11ನೇ ದಿನಕ್ಕೆ ವರ ಸಾವು, ವಧುವಿನ ಸ್ಥಿತಿ ಚಿಂತಾಜನಕ! ಕುಟುಂಬಸ್ಥರ ಗೋಳಾಟ ನೋಡಲಾಗ್ತಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
