ಮಂಡ್ಯ:ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ದಕ್ಷಿಣ ಪದವೀಧರರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ವಿರುದ್ಧ ಎಫ್​ಐಆರ್​ ದಾಖಲಾಗಿದೆ.
ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಪ್ರಜಾಪ್ರತಿನಿಧಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಡ್ಯದ ಮಹಿಳಾ ಕಾಲೇಜು, ವೈದ್ಯಕೀಯ ಕಾಲೇಜಿನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಇದರ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು. ಈ ಪ್ರಕರಣವನ್ನು ಮುಕ್ತವಾಗಿ ತನಿಖೆ ನಡೆಸಲು ನಮಗೆ ಅಧಿಕಾರವಿಲ್ಲ, ನ್ಯಾಯಾಲಯದಿಂದ ಆದೇಶ ತಂದರೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದರು.
ಸರ್ಕಾರಿ ಕಾಲೇಜುಗಳಲ್ಲಿ ಚುನಾವಣಾ ಪ್ರಚಾರ ನಡೆಸಿ ನೀತಿ ಸಂಹಿತೆ ಉಲ್ಲಂಘನೆ ನಡೆಸಿರುವ ಪ್ರಕರಣ ಸಂಬಂಧ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶಿಸುವಂತೆ ಚುನಾವಣಾ ಆಧಿಕಾರಿಯು 2ನೇ ACJ ಮತ್ತು JMFC ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಎಫ್​ಐಆರ್​ ದಾಖಲಿಸಿ, ತನಿಖೆ ನಡೆಸುವಂತೆ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಪೂರ್ವ ಠಾಣೆ ಅಪರಾಧ ವಿಭಾಗದ ಪಿಎಸ್​ಐ ಕೆ.ಎನ್. ಕೇಶವಮೂರ್ತಿ ಅವರು ಅಶ್ವತ್ಥ್ ನಾರಾಯಣ್ ಮತ್ತು ಮೈ.ವಿ.ರವಿಶಂಕರ್ ವಿರುದ್ಧ ಎಫ್​ಐಆರ್​ ದಾಖಲಿಸಿದ್ದಾರೆ.
ಕೆಜಿಎಫ್​ ಬಾಬು ಮನೆ ಮೇಲೆ IT ದಾಳಿ: ನಾಮಪತ್ರದಲ್ಲಿನ ಮಾಹಿತಿ ನೋಡಿ ಐಟಿ ಕಣ್ಣು ಬಿತ್ತಾ? ಬಾಬು ಮುಂದೆ ಡಿಕೆಶಿ, ಎಂಟಿಬಿ ಆಸ್ತಿಯೂ ಕಮ್ಮಿ

ಕಾವೇರಿ ನದಿಯಲ್ಲಿ ದುಬಾರಿ ಬೆಲೆಯ BMW ಕಾರು ಪತ್ತೆ! ರಾತ್ರಿ ನಾನೇ ನೀರಲ್ಲಿ ಮುಳುಗಿಸಿದೆ ಎಂದ ಮಾಲೀಕ… ಏಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
