ಕಾರವಾರ:ಹೊನ್ನಾವರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಲಿಕಾಪ್ಟರ್ ಇಳಿದ ಸ್ಥಳದ ಸಮೀಪ ಸಮೀಪ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಯಿತು.
ಹೊನ್ನಾವರದಲ್ಲಿ ಗುರುವಾರ ಕಾಂಗ್ರೆಸ್ ಸಮಾವೇಶ ಆಯೋಜಿಸಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೈಸೂರಿನಿಂದ ಹೊನ್ನಾವರ ರಾಮತೀರ್ಥ ಸಮೀಪ ಹೆಲಿಪ್ಯಾಡ್ ನಲ್ಲಿ ಹೆಲಿಕಾಪ್ಟರ್ ಇಳಿದು ಮಾಧ್ಯಮದವರ ಜತೆ ಮಾತನಾಡಿ ಕಾರ್ಯಕ್ರಮಕ್ಕೆ ಹೊರಟಿದ್ದರು.ಆಗ ಸಮೀಪದಲ್ಲಿ ಕರಡಕ್ಕೆ ಬೆಂಕಿ ಹೊತ್ತಿ ಉರಿದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದವರು, ಬೆಂಕಿ ನಂದಿಸಿದ್ದಾರೆ.
ಇದನ್ನೂ ಓದಿ:ಅವಿವಾಹಿತ ಯುವಕರಿಗೆ ಮದುವೆ ಮಾಡಿಸುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಿದ ಪಕ್ಷೇತರ ಅಭ್ಯರ್ಥಿ!
ಹೆಲಿಕಾಪ್ಟರ್ ಇಳಿಯಲು ಸ್ಥಳ ಗುರುತಿಸುವ ಸಲುವಾಗಿ ಸ್ಮೋಕ್ ಕ್ಯಾಂಡಲ್ ಇಡಲಾಗಿತ್ತು. ಅದರ ಕಿಡಿ ಪಕ್ಕದ ಒಣಗಿದ ಹುಲ್ಲಿಗೆ ತಾಗಿ ಬೆಂಕಿ ಉಂಟಾಗಿದೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಡಿ.ಕೆ. ಶಿವಕುಮಾರ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Bajrang Dal Ban: ಕೆ. ಸುಧಾಕರ್ ನೇತೃತ್ವದಲ್ಲಿ ಬಜರಂಗದಳ, ಹಿಂದೂಪರ ಸಂಘಟನೆಗಳ ಪ್ರತಿಭಟನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 16 =
Remember me
