ಉಡುಪಿ:ರಾಜ್ಯದ ವಿವಿಧೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನೆರೆ ಉಂಟಾಗಿದ್ದುಮ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವ ಸಿಎಂ ಬಸವರಾಜ ಬೊಮ್ಮಾಯಿ, 500 ಕೋಟಿ ರೂ. ತುರ್ತು ಪರಿಹಾರ ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ಉಡುಪಿ ಜಿಪಂ ಕಚೇರಿಯಲ್ಲಿ ಬುಧವಾರ ಉತ್ತರಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಅವಲೋಕನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನಜೀವನ ಸುಗಮಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತುರ್ತು ಪರಿಸ್ಥಿತಿ ನಿಭಾಯಿಸಲು ಜಿಲ್ಲಾಧಿಕಾರಿ ಖಾತೆಗೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲಾಗುವುದು. ಮಳೆಯಿಂದ ಹಾನಿಗೆ ಒಳಗಾಗಿರುವ ರಸ್ತೆ, ವಿದ್ಯುತ್, ಸೇತುವೆಗಳ ತುರ್ತು ಕಾಮಗಾರಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದರು.
ಕೊಡಗು ಮತ್ತು ಕರಾವಳಿ ಜಿಲ್ಲೆಯಲ್ಲಿ ಭೂಕಂಪನ, ಭೂಕುಸಿತ ಬಗ್ಗೆ ವರದಿ ನೀಡಲು ಮೂರು ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ. ಕಡಲು ಕೊರೆತ ತಡೆಗೆ ಈಗಾಗಲೇ 300 ಕೋಟಿ ರೂ. ಖರ್ಚು ಮಾಡಲಾಗಿದೆ. ಆದರೆ ನಿರೀಕ್ಷಿತ ಫಲಿತಾಂಶ ಲಭ್ಯವಾಗಿಲ್ಲ. ಹೀಗಾಗಿ ಕೇರಳ ಮಾದರಿಯಲ್ಲಿ ಪ್ರಾಯೋಗಿಕವಾಗಿ ಬೆಟ್ಟಂಪಾಡಿಯಲ್ಲಿ ಒಂದು ಕಿ.ಮೀ. ಸೀ ವೇವ್ ಬ್ರೇಕರ್ ತಂತ್ರಜ್ಞಾನ ಅಳವಡಿಸಲಾಗುವುದು. ಇದು ಯಶಸ್ವಿಯಾದರೆ ರಾಜ್ಯದ 330 ಕರಾವಳಿ ತೀರಕ್ಕೆ ವಿಸ್ತರಿಸುವ ಬಗ್ಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಈ ಬಗ್ಗೆ ಡಿಪಿಆರ್ ತಯಾರಿಸಲು ಹಣ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ರೇಷನ್ ಕಿಟ್ ವಿತರಣೆ:ರಾಜ್ಯದಲ್ಲಿ ಮಳೆಯಿಂದಾಗಿ 32 ಮಂದಿ ಜೀವ ಕಳೆದುಕೊಂಡಿದ್ದು, ಐದು ಮಂದಿ ನಾಪತ್ತೆಯಾಗಿದ್ದಾರೆ. ಮೂವತ್ತನಾಲ್ಕು ಮಂದಿ ಗಾಯಗೊಂಡಿದ್ದಾರೆ. 300 ಮಂದಿಯನ್ನು ರಕ್ಷಿಸಲಾಗಿದೆ. ಸುಮಾರು 12 ಪರಿಹಾರ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ. ಸಂತ್ರಸ್ತರಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲಾಗುವುದು. ಹೀಗಾಗಿ ಎಲ್ಲರಿಗೂ ಮೊಟ್ಟೆ ವ್ಯವಸ್ಥೆ ಮಾಡಲಾಗಿದೆ. ಪರಿಹಾರ ಕೇಂದ್ರಕ್ಕೆ ಬಾರದೆ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿರುವ ಸಂತ್ರಸ್ತರಿಗೆ ರೇಷನ್ ಕಿಟ್ ವಿತರಿಸಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು.
ಮೂರು ಜಿಲ್ಲೆಗಳಲ್ಲಿ ಒಟ್ಟು 1062 ಮನೆಗಳಿಗೆ ಹಾನಿಯಾಗಿದೆ. 2387 ಕಿ.ಮೀ. ರಸ್ತೆಗಳು, 168 ಸೇತುವೆ ಮಳೆಗೆ ಹಾನಿಗೊಳಗಾಗಿವೆ. ಹಾನಿಗೊಳಗಾಗಿರುವ ಮನೆಗಳನ್ನು ಮೂರು ರೀತಿಯಲ್ಲಿ ವಿಂಗಡಿಸಲಾಗಿದ್ದು, ಸಂಪೂರ್ಣ ಹಾನಿಯಾಗಿರುವ ಮನೆಗೆ 5 ಲಕ್ಷ ರೂ., ಬಿ ಕೆಟಗರಿಯಲ್ಲಿ ಇರುವ ಮನೆಗೆ ಮೂರು ಲಕ್ಷ ರೂ., ಸಿ ಕೆಟಗರಿಯ ಮನೆಗೆ 50 ಸಾವಿರ ರೂ. ಪರಿಹಾರ ನಿಡಲಾಗುವುದು. ಮನೆ ಸಂಪೂರ್ಣ ಹಾನಿಯಾದರೆ ತಕ್ಷಣ 10 ಸಾವಿರ ರೂ. ಪರಿಹಾರ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದರು.
ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನಿಗೆ ಕಂಕಣ ಭಾಗ್ಯ: ಮನೋರಂಜನ್​ರ ಕೈಹಿಡಿಯಲಿರುವ ವಧು ಯಾರು?

ಇವರು ನಮ್ಮ ಪಕ್ಷದ ಕಾರ್ಯಕರ್ತ, ಇವರ ಕಾರನ್ನು ಹಿಡಿದು ತೊಂದರೆ ಕೊಡಬಾರದು: ಬಿಜೆಪಿ MLA ಶಿಫಾರಸು

ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
