ಶಿವಮೊಗ್ಗ:ನಗರದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಗುರುವಾರ ರಾತ್ರಿ ವಿಷಾಹಾರ ಸೇವನೆಯಿಂದ 20ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪೈಕಿ 11 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಾಲಕಿಯರ ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತಲೆ ಸುತ್ತು, ಉಸಿರಾಟದ ತೊಂದರೆ, ವಾಂತಿ, ಬೇಧಿ ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
10 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿ ರಾತ್ರಿಯೇ ಹಾಸ್ಟೆಲ್‌ಗೆ ಕಳುಹಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಳಿದ 11 ವಿದ್ಯಾರ್ಥಿನಿಯರನ್ನು ಒಳರೋಗಿಗಳನ್ನಾಗಿ ದಾಖಲು ಮಾಡಿಕೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ಅವರನ್ನೂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು. ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
ಹೀಗಿದೆ ಉಪ್ಪಿ ಹೊಸ ಸಿನಿಮಾದ ಫಸ್ಟ್​ ಲುಕ್​… ವಿಭಿನ್ನ ಟೈಟಲ್​ಗೆ ಅಭಿಮಾನಿಗಳು ಫಿದಾ! ಇದರರ್ಥ ಇದೇನಾ?

ಮಗನ ಸಾವಿನ ಹಿಂದೆ ಸೊಸೆ ಕೈವಾಡ? ಅಂತ್ಯಸಂಸ್ಕಾರ ಆಗಿದ್ದ ಶವ ಹೊರತೆಗಿಸಿ ಮರಣೋತ್ತರ ಪರೀಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 13 =
Remember me
