ಬೆಂಗಳೂರು:ಮಾಜಿ ಸಚಿವ ಬಿ.ಜೆ. ಪುಟ್ಟಸ್ವಾಮಿ ಅವರು ಶುಕ್ರವಾರ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ಪುಟ್ಟಸ್ವಾಮಿ ಅವರಿಗೆ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳೆಂದು ನಾಮಕರಣ ಮಾಡಿ ಕೈಲಾಸ ಆಶ್ರಮ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ಜಯೇಂದ್ರಪುರಿ ಮಹಾಸ್ವಾಮಿಗಳು ಸನ್ಯಾಸ ಧೀಕ್ಷೆ ನೀಡಿದರು.
ಮೇ 8ರಂದು ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠಕ್ಕೆ ತೆರಳಲಿದ್ದು, ಮೇ 15ರಂದು ಪ್ರಥಮ ಪೀಠಾಧಿಪತಿಯಾಗಿ ಶ್ರೀ ಪೂರ್ಣಾನಂದ ಪುರಿ ಸ್ವಾಮಿಗಳು ಅಲಂಕೃತಗೊಳ್ಳಿಲಿದ್ದಾರೆ. ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್​.ಯಡಿಯೂರಪ್ಪ, ಮಾಜಿ ಸಿಎಂ ಎಸ್​.ಎಂ. ಕೃಷ್ಣ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಸೇರಿ ಹಲವು ಸಚಿವರು ಭಾಗವಹಿಸಲಿದ್ದಾರೆ. 20 ಮಠಾಧೀಶರು ದಿವ್ಯ ಸಾನಿಧ್ಯ ವಹಿಸಿಲಿದ್ದಾರೆ.
ಬಿ.ಜೆ.ಪುಟ್ಟಸ್ವಾಮಿ ಅವರು ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಏ.30ರಂದು ರಾಜೀನಾಮೆ ನೀಡಿದ್ದರು. ನಾನು ಸಮಾಜ ಸುಧಾರಣಾ ಸ್ವಾಮೀಜಿಯಾಗಿ ದೀಕ್ಷೆ ಪಡೆಯುವೆ ಎಂದು ಈ ಹಿಂದೆ ಹೇಳಿದ್ದರು.
‘ಗೃಹ ಸಚಿವರ ಊರಲ್ಲಿ 2 ದಿನ ದಿವ್ಯಾ ಕಾರು ಇತ್ತು! ಪಿಎಸ್​ಐ ಹುದ್ದೆ ಅಕ್ರಮದ ಆರೋಪಿ ಜತೆ ನೇರ ಸಂಪರ್ಕ ಹೊಂದಿದ್ದರು…’

ನಾದಿನಿ ಜತೆ ಸರಸವಾಡಲು ಪತ್ನಿಯನ್ನೇ ಕೊಂದ! ವಿಚಾರಣೆ ವೇಳೆ ಬಯಲಾಯ್ತು ಅಸಹ್ಯ… ನೆಲಮಂಗಲದಲ್ಲಿ ಹೀನ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + twenty =
Remember me
