|ಕೀರ್ತಿನಾರಾಯಣ ಸಿ. ಬೆಂಗಳೂರುಸರ್ಕಾರಿ ನೌಕರರ ವಿರುದ್ಧದ ಭ್ರಷ್ಟಾಚಾರ ಹಾಗೂ ಇತರೆ ಆರೋಪ ಗಳಿಗೆ ಸಂಬಂಧಿಸಿದಂತೆ ಇನ್ನುಮುಂದೆ ಸಕ್ಷಮ ಪ್ರಾಧಿಕಾರದ ಹಂತದ ಇಲಾಖಾ ವಿಚಾರಣೆಯನ್ನು ಮುಕ್ತಾಯಗೊಳಿಸಿದ ನಂತರವೇ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಪ್ರಕರಣದ ವಾಸ್ತವ ಸ್ಥಿತಿಯನ್ನು ಪರಿಶೀಲನೆ ನಡೆಸದೆಯೇ ತನಿಖೆಗೆ ಆದೇಶಿಸುತ್ತಿರುವ ಕ್ರಮಕ್ಕೆ ಖುದ್ದು ಲೋಕಾಯುಕ್ತ ಸಂಸ್ಥೆಯೇ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕಲಂ 12(3) ಪ್ರಕಾರ ಸರ್ಕಾರಿ ನೌಕರರ ವಿರುದ್ಧ ಆಪಾದನೆಗಳಿಗೆ ಸಂಬಂಧಪಟ್ಟಂತೆ ತನಿಖೆ ನಡೆಸುವ ಲೋಕಾ ಯುಕ್ತ ಸಂಸ್ಥೆ, ಸಕ್ಷಮ ಪ್ರಾಧಿಕಾರವಾದ ಸರ್ಕಾರಕ್ಕೆ ಶಿಫಾರಸುಗಳ ತನಿಖಾ ವರದಿಯನ್ನು ಸಲ್ಲಿಸುತ್ತದೆ. ಸರ್ಕಾರ ತನಿಖಾ ವರದಿಯನ್ನು ಪರಿಶೀಲಿಸಿದ ನಂತರ ಆರೋಪದ ಗಂಭೀರತೆಯನ್ನು ಪರಿಗಣಿಸಿ ಲಘು ದಂಡನೆ ವಿಧಿಸಬಹುದಾದ ಪ್ರಕರಣವಾಗಿದ್ದಲ್ಲಿ ಸಕ್ಷಮ ಪ್ರಾಧಿ ಕಾರಿಗೆ ವಿಚಾರಣೆ ನಡೆಸಲು ನಿರ್ದೇಶಿಸಬಹುದು.
ಕಠಿಣ ದಂಡನೆ ವಿಧಿಸಬಹುದಾದ ಪ್ರಕರಣವೆಂದು ಕಂಡರೆ ನಿಯಮ 14ಎ ಅನ್ವಯ ಲೋಕಾಯುಕ್ತ ಅಥವಾ ಉಪ ಲೊಕಾಯುಕ್ತರಿಗೆ ವಹಿಸಬಹುದು. ಆದರೆ, ಲೋಕಾಯುಕ್ತ ಸಂಸ್ಥೆಗೆ ವಹಿಸುವ ಸಂದರ್ಭದಲ್ಲಿ ಅದೇ ಆರೋಪಗಳಿಗೆ ಸಂಬಂಧಿಸಿದಂತೆ ಈಗಾಗಲೇ ಇಲಾಖಾ ವಿಚಾರಣೆ ನಡೆಯುತ್ತಿದ್ದರೆ ಅಥವಾ ಮುಕ್ತಾಯಗೊಂಡಿದ್ದರೂ ಸಹ ಅದನ್ನು ನಿಯಮಾನುಸಾರ ಪರಿಶೀಲನೆ ಮಾಡದೆ ಲೋಕಾಯುಕ್ತ ತನಿಖೆಗೆ ವಹಿಸಲಾಗುತ್ತಿದೆ. ಇದಕ್ಕೆ ಲೋಕಾಯುಕ್ತ ಸಂಸ್ಥೆ ಆಕ್ಷೇಪ ವ್ಯಕ್ತಪಡಿಸಿ, 2023 ಫೆ.8ರಂದು ಸರ್ಕಾರಕ್ಕೆ ಪತ್ರ ಬರೆದಿದೆ. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆಗೆ ಆದೇಶಿಸುವ ಮುನ್ನ ಕಡ್ಡಾಯವಾಗಿ ಪಾಲಿಸಬೇಕದ ಸೂಚನೆಗಳನ್ನು ಸರ್ಕಾರದ ಎಲ್ಲ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ನೀಡಿದೆ.
ಲೋಕಾ ವ್ಯಾಪ್ತಿಗಿಲ್ಲ ಪೊಲೀಸ್ ಇಲಾಖೆ: ಪೊಲೀಸ್ ಇಲಾಖೆ ಹೊರತುಪಡಿಸಿ ಕೆಸಿಎಸ್​ಆರ್ ನಿಯಮಗಳಿಗೆ ಒಳಪಡುವ ಎಲ್ಲ ಸರ್ಕಾರಿ ನೌಕರರ ವಿರುದ್ಧ ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತಕ್ಕೆ ಇದೆ. ಆದರೆ, ಪೊಲೀಸರ ವಿರುದ್ಧದ ಆರೋಪ ದೃಢಪಟ್ಟರೂ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ತನಿಖಾ ವರದಿ ಕೊಡಲಾಗುತ್ತದೆ. ತನಿಖೆಯನ್ನೂ ಅವರೇ ಮಾಡಬೇಕಾಗುತ್ತದೆ ಎಂದು ಲೋಕಾಯುಕ್ತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಲೋಕಾಯುಕ್ತ ತನಿಖೆ ನಡೆಸಿದ ಪ್ರಕರಣಗಳಲ್ಲಿ ಸರ್ಕಾರಕ್ಕೆ ತನಿಖಾ ವರದಿಯನ್ನು ಸಲ್ಲಿಸಲಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಮಾತ್ರವೇ ಸಕ್ಷಮ ಪ್ರಾಧಿಕಾರವಾದ ಸರ್ಕಾರ ಪರಿಶೀಲನೆ ನಡೆಸಿದ ಬಳಿಕ ಲೋಕಾಯುಕ್ತ ತನಿಖೆಗೆ ವಹಿಸುತ್ತದೆ. ಲೋಕಾಯುಕ್ತ ತನಿಖೆ ನಡೆಸದ ಪ್ರಕರಣಗಳನ್ನು ತನಿಖೆಗೆ ವಹಿಸಲು ಕೇಳುವುದಿಲ್ಲ.
| ಬಿ.ಎಸ್. ಪಾಟೀಲ್ ಲೋಕಾಯುಕ್ತ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eleven =
Remember me
