ಬೆಂಗಳೂರು:ಶಾಲಾ ಶಿಕ್ಷಕಿಯ ಮೊಬೈಲ್​ಫೋನ್​ಗೆ ಹಳೇ ವಿದ್ಯಾರ್ಥಿಯ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳ, ಕಡಿಮೆ ಬೆಲೆಗೆ ಲ್ಯಾಪ್‌ಟಾಪ್ ಕೊಡುವುದಾಗಿ ಹೇಳಿ 14 ಸಾವಿರ ರೂ. ಪಡೆದು ಮೋಸ ಮಾಡಿದ್ದಾನೆ.
ಜಯನಗರ 3ನೇ ಹಂತದ ಶಿಕ್ಷಕಿ ವಂಚನೆಗೆ ಒಳಗಾದವರು. ಕೆಲ ದಿನಗಳ ಹಿಂದೆ ಶಿಕ್ಷಕಿಗೆ ಕರೆ ಮಾಡಿದ ಅಪರಿಚಿತ, ‘ನಾನು ನಿಮ್ಮ ಶಾಲೆಯ ಹಳೆಯ ವಿದ್ಯಾರ್ಥಿ. ಈಗ ನಾನು ಬೆಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಕಚೇರಿಯಲ್ಲಿ ಅಧಿಕಾರಿಯಾಗಿದ್ದೇನೆ. ನಿಮಗೆ ಲ್ಯಾಪ್‌ಟಾಪ್, ಟಿವಿ ಕಡಿಮೆ ಬೆಲೆಗೆ ಕೊಡುತ್ತೇನೆ’ ಎಂದು ನಂಬಿಸಿದ್ದಾನೆ. ಹಳೆಯ ವಿದ್ಯಾರ್ಥಿ ಎಂಬ ಕಾರಣಕ್ಕೆ ಶಿಕ್ಷಕಿ ಸಹ ನಂಬಿ ಖರೀದಿಸಲು ಇಚ್ಛಿಸಿದ್ದರು.
ಅಪರಿಚಿತ ವ್ಯಕ್ತಿ, ಮುಂಗಡವಾಗಿ ಹಣ ಕೊಡಬೇಕೆಂದು ಹೇಳಿ ಹಂತ ಹಂತವಾಗಿ 14 ಸಾವಿರ ರೂ. ತನ್ನ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಸಿಕೊಂಡಿದ್ದಾನೆ. ಆದರೆ, ಲ್ಯಾಪ್‌ಟಾಪ್ ಮತ್ತು ಟಿವಿ ಮಾತ್ರ ಪಾರ್ಸೆಲ್ ಮಾಡಿಲ್ಲ. ಕೊನೆಗೆ ಶಿಕ್ಷಕಿ ವಂಚನೆಗೆ ಒಳಗಾಗಿರುವುದು ಗೊತ್ತಾಗಿ ದಕ್ಷಿಣ ವಿಭಾಗ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಇದರ ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡಿಯಾ ಟ್ರೆಂಡಿಂಗ್​ನಲ್ಲಿ #DrRajkumar; ಡಾ.ರಾಜ್​ಗೆ ಜನ್ಮದಿನದ ಶುಭಾಶಯಗಳ ಸುರಿಮಳೆ..

ಬೆಂಕಿಯಲ್ಲಿ ಸುಟ್ಟುಹೋದ ಪ್ರೇಮಿಗಳು; ಪ್ರೇಮಿಯಿಂದಲೇ ಕೊಲೆ-ಆತ್ಮಹತ್ಯೆ?!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 13 =
Remember me
