ಬೆಂಗಳೂರು:ರಾಜ್ಯದ ಎಲ್ಲ ಖಾಸಗಿ ಶಾಲೆಗಳು ಮುಂದಿನ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ಪ್ರತಿ ವರ್ಷ ಡಿಸೆಂಬರ್​ ಅಂತ್ಯದೊಳಗೆ ಶಾಲೆಯ ಸೂಚನಾ ಫಲಕ ಹಾಗೂ ಇಲಾಖಾ ವೆಬ್​ಸೈಟ್​ನಲ್ಲಿ ಪ್ರಕಟಿಸಿ ಅದರಂತೆ ಶುಲ್ಕವನ್ನು ಪಡೆಯಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸೂಚಿಸಿದೆ.
ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಒಂದೇ ಮಾನದಂಡದ ರೂಪದಲ್ಲಿ ಬೋಧನಾ ಶುಲ್ಕ ಹಾಗೂ ಇತರ ಶುಲ್ಕಗಳನ್ನು ಲೆಕ್ಕಾಚಾರ ಮಾಡಿ ಪಡೆದುಕೊಳ್ಳಲು ಹೈಕೋರ್ಟ್​ ನಿರ್ದೇಶನ ನೀಡಿದೆ. ಆ ಪ್ರಕಾರ ಎಲ್ಲ ಶಾಲೆಗಳು ಡಿಸೆಂಬರ್​ನೊಳಗೆ ವಿವರಗಳನ್ನು ಪ್ರಕಟಿಸುವಂತೆ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ.
ಏನಿದು ಪ್ರಕರಣ?:ಖಾಸಗಿ ಶಾಲೆಗಳು ತಮ್ಮ ಮನಬಂದಂತೆ ಶುಲ್ಕ ಪಡೆಯುತ್ತಿವೆ. ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸುತ್ತಿಲ್ಲವೆಂದು ಆರೋಪಿಸಿ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಲಾಗಿತ್ತು. 2018-19ನೇ ಸಾಲಿನ ಶೈಕ್ಷಣಿಕ ದಾಖಲಾತಿ ಪ್ರಕ್ರಿಯೆ ವೇಳೆ ಮಾರ್ಚ್ ತಿಂಗಳಿನಿಂದಲೇ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮುಂಬರುವ ಶೈಕ್ಷಣಿಕ ವರ್ಷದ ಶುಲ್ಕವನ್ನು ಪಾಲಕರಿಂದ ಪಾವತಿಸಿಕೊಳ್ಳುತ್ತಿವೆ ಎಂದು ಪ್ರಕರಣ ದಾಖಲಿಸಲಾಗಿತ್ತು.
ವಿಚಾರಣೆ ನಡೆಸಿದ ಹೈಕೋರ್ಟ್ 2022ರ ಮೇ 23ರಂದು ನೀಡಿರುವ ತೀರ್ಪಿನ ಪ್ರಕಾರ ಹಾಗೂ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಉಲ್ಲೇಖಿಸಿರುವ ಮಾರ್ಗಸೂಚಿಯಂತೆ 2019-20ನೇ ಸಾಲಿನಿಂದ ಶುಲ್ಕ ನಿಗದಿ ಆದೇಶವು ಜಾರಿಗೆ ಬಂದಿದೆ. ಅದರಂತೆ ಎಲ್ಲ ಖಾಸಗಿ ಶಾಲೆಗಳು ಮುಂಬರುವ ವರ್ಷದ ಶುಲ್ಕದ ಮಾಹಿತಿಯನ್ನು ಪ್ರತಿ ವರ್ಷದ ಡಿಸೆಂಬರ್‌ನಲ್ಲಿಯೇ ಪ್ರಕಟಿಸುವಂತೆ ಸೂಚಿಸಲಾಗಿದೆ.
ರಾಜ್ಯದಲ್ಲಿ ಮತ್ತೆ ಮಳೆ ಬಿರುಸು, ನಾಳೆ 9 ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್

ರಾಜ್ಯಮಟ್ಟದ ಕಬ್ಬಡಿ ಪಂದ್ಯ ಆಟವಾಡುತ್ತಲೇ ಹಾರಿಹೋಯ್ತು ಆಟಗಾರನ ಪ್ರಾಣಪಕ್ಷಿ! ಮನಕಲಕುತ್ತೆ ಸಾವಿನ ಆ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 4 =
Remember me
