ಉಡುಪಿ:ಬಾರ್ಕೂರಿನ ಚೌಳಿಕೆರೆಗೆ ಭಾನುವಾರ ಮಧ್ಯಾಹ್ನ ಕಾರು ಉರುಳಿ ಉದ್ಯಮಿ ಸಂತೋಷ್ ಶೆಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದರು. ಜೊತೆಗಿದ್ದ ಇವರ ಫ್ಲೈವುಡ್ ಸಂಸ್ಥೆಯ ಉದ್ಯೋಗಿ ಶ್ವೇತಾ ಅಪಘಾತದಿಂದ ಪವಾಡ ಸದೃಶ ರೀತಿ ಬಚಾವಾಗಿದ್ದಾರೆ. ಆದರೆ ಶ್ವೇತಾ ಅವರನ್ನು ಪವಾಡ ಮಾಡಿ ಬದುಕಿಸಿದ್ದು 15 ವರ್ಷದ ಬಾಲಕಿ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.
ನೀರು ತುಂಬಿದ್ದ ಕೆರೆಗೆ ಕಾರು ಬಿದ್ದಾಗ ಇಬ್ಬರೂ ಮುಳುಗಿದ್ದರು. ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದರು. ಯುವತಿಯ ಪ್ರಾಣವಾಯು ಇನ್ನೂ ಉಳಿದಿತ್ತು. 15 ವರ್ಷದ ಬಾಲಕಿಯೊಬ್ಬಳ ಸಮಯಪ್ರಜ್ಞೆಯಿಂದ ಶ್ವೇತಾ ಬದುಕಿ ಬಂದಿದ್ದಾರೆ. ಜೀವನ್ಮರಣ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಯುವತಿ ಕೊನೆಗೂ ಬಚಾವಾಗಿದ್ದಾರೆ.
ಅವರನ್ನು ಬದುಕಿಸಿದ್ದು  ನಮನ ಎಂಬ ಬಾಲಕಿ. ಈಕೆ ಶಾಲೆಯಲ್ಲಿ ಹಾಗೂ ಎನ್‌ಎಸ್‌ಎಸ್ ಶಿಬಿರದಲ್ಲಿ ಕಲಿತಿದ್ದ ಪ್ರಾಥಮಿಕ ಚಿಕಿತ್ಸೆಯನ್ನು ಪ್ರಯೋಗಿಸಿ ಶ್ವೇತಾ ಅವರ ಉಸಿರು ಮರಳುವಂತೆ ಮಾಡಿದ್ದಾರೆ. ಈ ಸಾಹಸ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ.
ಶ್ವೇತಾಳನ್ನು ಮೇಲಕ್ಕೆ ಎತ್ತಿದ ತಕ್ಷಣ ಎದೆಗೆ ಒತ್ತಡ ಹಾಕಿ ಚೇತರಿಸಿಕೊಳ್ಳುವಂತೆ ಮಾಡಿದ್ದಾರೆ. ನೀರು ಕುಡಿದು ಎಚ್ಚರ ತಪ್ಪಿದ್ದ  ಆ ಯುವತಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಯುವತಿಯ ಉಸಿರಾಟಕ್ಕೆ ತೊಂದರೆಯಾಗಿದ್ದ ನೀರನ್ನು ಪ್ರಥಮ ಚಿಕಿತ್ಸೆ ಮೂಲಕ ಹೊರ ಹಾಕಿದ ಬಳಿಕವೇ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಚಿಕಿತ್ಸೆ ನೀಡಿದ ವೈದ್ಯರೂ ನಮನಳ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರಥಮ ಚಿಕಿತ್ಸೆ ನೀಡದಿದ್ದರೆ ಜೀವಕ್ಕೇ ಅಪಾಯ ಇತ್ತು ಎನ್ನುತ್ತಾರೆ.
ಬ್ರಹ್ಮಾವರ ಲಿಟಲ್‌ರಾಕ್ ಶಾಲೆಯಲ್ಲಿ 10 ತರಗತಿ ಕಲಿಯುತ್ತಿರುವ ನಮನ ಹಿರಿಯ ಉಪನ್ಯಾಸಕಿ, ಎನ್‌ಎಸ್‌ಎಸ್ ಅಧಿಕಾರಿ ಸವಿತಾ ಎರ್ಮಾಳ್  ಮತ್ತು ಕುಮಾರ್ ಅವರ ಪುತ್ರಿ.
ರಾಷ್ಟ್ರಪತಿ, ಪ್ರಧಾನಿ, ಸಚಿವರಿಗೆ ಹಣ್ಣು ಕೊಂಡೊಯ್ದ ಅಧಿಕಾರಿಗೆ ಕರೊನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 18 =
Remember me
