ಬೆಂಗಳೂರು:ನ.3ರಿಂದ ನ.6ರವರೆಗೆ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ (ಜಿಕೆವಿಕೆ) ಕೃಷಿ ಜಾತ್ರೆ ನಡೆಯಲಿದೆ. ತೋಟಗಾರಿಕೆ, ರೇಷ್ಮೆ, ಅರಣ್ಯ, ಕೃಷಿ ಸೇರಿ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯ ವತಿಯಿಂದ 4 ದಿನಗಳ ಕಾಲ ‘ಕೃಷಿಮೇಳ-2022’ ನಡೆಯಲಿದ್ದು, ಭರದಿಂದ ಸಿದ್ಧತೆ ನಡೆಯುತ್ತಿದೆ.
ಈ ಕುರಿತು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿವಿ ಕುಲಪತಿ ಡಾ.ಕೆ.ಸಿ.ನಾರಾಯಣಸ್ವಾಮಿ, ಕೃಷಿ ವಿವಿ ಹೊಸದಾಗಿ ಅಭಿವೃದ್ಧಿ ಪಡಿಸಿರುವ ಭತ್ತ, ಮುಸುಕಿನ ಜೋಳ, ಅವರೆ ಸೇರಿ 9 ತಳಿಗಳನ್ನು ಮೇಳದಲ್ಲಿ ಬಿಡುಗಡೆ ಮಾಡಲಾಗುವುದು. ಕೃಷಿ ಸಾಧಕರಿಗೆ ಪುರಸ್ಕಾರ, ಜಿಲ್ಲಾ ಮತ್ತು ತಾಲೂಕು ಮಟ್ಟದ ರೈತ ಪ್ರಶಸ್ತಿ. ಕೃಷಿ ವಸ್ತು ಪ್ರದರ್ಶನ ಮಳಿಗೆಗಳು, ಕೃಷಿ ಸಂಬಂಧಿಸಿದ ವಿಷಯಗಳ ಬಗ್ಗೆ ವಿಚಾರಗೋಷ್ಠಿಯಲ್ಲಿ ತಜ್ಞರು ಮಾತನಾಡಲಿದ್ದಾರೆ ಎಂದು ವಿವರಿಸಿದರು.
ವಿವಿಧ ತಳಿಯ ಹಸುಗಳು, ಕೋಳಿ, ಕುರಿಗಳು, ತರೇಹವಾರಿ ಹೂವುಗಳು, ತರಕಾರಿ, ಸಿರಿಧಾನ್ಯ, ಮಾವು, ಹಲಸು, ಟ್ರ್ಯಾಕ್ಟರ್​- ಟಿಲ್ಲರ್​, ಕೃಷಿ ಚಟುವಟಿಕೆಗಳನ್ನ ಕಣ್ತುಂಬಿಕೊಳ್ಳುತ್ತಾ ಕೃಷಿ ಜಾತ್ರೆಯಲ್ಲಿ ಮಿಂದೇಳಲು ಸಾವಿರಾರು ಜನ ಆಗಮಿಸುವ ನಿರೀಕ್ಷೆ ಇದೆ.
ಬಾಲಿವುಡ್​ ನಟ ಅರುಣ್​ ಬಾಲಿ ವಿಧಿವಶ

ಲವ್​ ಜಿಹಾದ್​ ಬಲೆಗೆ ಕನ್ನಡದ ನಟಿ? ಕಣ್ಣೀರಿಟ್ಟು ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ದಿವ್ಯಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 12 =
Remember me
