ಬೆಂಗಳೂರು:ಒಂದು ಸಂಸ್ಥೆ ಸುವರ್ಣ ಮಹೋತ್ಸವ ಆಚರಿಸುವುದು ಸಾಧನೆಯ ಸಂಕೇತ‌. ಅರಣ್ಯ ಸಂಪತ್ತನ್ನು ನಾಗರಿಕ ಸಮಾಜಕ್ಕೆ ಬಳಸಿಕೊಳ್ಳಲಾಗುತ್ತಿದೆ. ನಿಗಮದ ಆರಂಭದಲ್ಲಿ ಅರಣ್ಯ ವಿಸ್ತೀರ್ಣ ಶೇ.33ಕ್ಕಿಂತ ಹೆಚ್ಚಿತ್ತು. ನಮ್ಮ ಪರಿಸರ ಸಮತೋಲನ ಆಗಬೇಕಾದರೆ ಅರಣ್ಯದ ವಿಸ್ತೀರ್ಣ ಕೂಡ ಹೆಚ್ಚಾಗಬೇಕು. ಹಾಗಾಗಿ ನಿಗಮದಲ್ಲಿ ಬದಲಾವಣೆ ಅತ್ಯಗತ್ಯ. ನೀಲಗಿರಿ, ಅಕೇಶಿಯ ಬಿಟ್ಟು, ಹೊಸ ತಳಿ ಬೆಳೆಯಲು ಚಿಂತನೆ ನಡೆಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಅರಣ್ಯ ಅಭಿವೃದ್ಧಿ ನಿಗಮದ ಸುವರ್ಣ ಮಹೋತ್ಸವಕ್ಕೆ ಶನಿವಾರ ಚಾಲನೆ ನೀಡಿದ ಸಿಎಂ, ಹೊಸದಾಗಿ ಹಸಿರು ಬಜೆಟ್ ಮಾಡಲಾಗಿದೆ. ಸರ್ಕಾರದಿಂದ ನೂರು ಕೋಟಿ ರೂ. ನೀಡುತ್ತೇನೆ. ಪರಿಸರಕ್ಕೆ ಬೇಕಾದ ರೀತಿಯಲ್ಲಿ ಕಾರ್ಯಕ್ರಮ ಮಾಡಬೇಕು. ಹಸಿರು ಪ್ರದೇಶ ನಿರ್ಮಾಣಕ್ಕೆ ಹೆಚ್ಚಿನ ಗಮನ ಹರಿಸಬೇಕು. ಸರ್ಕಾರದಿಂದ ಬೆಂಬಲ ಇರುತ್ತೆ ಎಂದರು.
ಅರಣ್ಯ ಸಚಿವ ಉಮೇಶ್ ಕತ್ತಿ, ಕಂದಾಯ ಸಚಿವ ಆರ್.ಅಶೋಕ್, ಸಂಸದ ಪಿ.ಸಿ. ಮೋಹನ್, ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ತಾರಾ ಅನುರಾಧಾ ಸೇರಿದಂತೆ ಹಲವರು ಇದ್ದರು.
ಸಿದ್ದುಗೆ ಸಿಕ್ತು ಸೇಫ್​ ಝೋನ್​… ಪದೇಪದೆ ಯತೀಂದ್ರ ಭೇಟಿ, ಸಿದ್ದುಗಾಗಿ ನನ್ನ ಕ್ಷೇತ್ರವನ್ನೇ ಬಿಟ್ಟುಕೊಡ್ತೀನಿ ಎಂದ ಶಾಸಕ

ಕಂಠದಲ್ಲಿ ಶ್ರೀಕೃಷ್ಣ! ಗಂಟಲು ನೋವೆಂದು ಆಸ್ಪತ್ರೆಗೆ ಹೋದ ವ್ಯಕ್ತಿಗೆ ಕಾದಿತ್ತು ಶಾಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 6 =
Remember me
