ಬೆಂಗಳೂರು:ಸಂಸದ ತೇಜಸ್ವಿ ಸೂರ್ಯ ಅವರ ಹೆಸರಲ್ಲಿ ಪೂಜೆ ಮಾಡಿ ಪ್ರಸಾದ ತಲುಪಿಸಲು ಹೋದ ಇಬ್ಬರು ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಅವರು ಸ್ವಾರ್ಥಕ್ಕಾಗಿ ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ನಾವು ಲೋಕ ಕಲ್ಯಾಣಾರ್ಥಕ ಮತ್ತು ಸಂಸದ ತೇಜಸ್ವಿ ಸೂರ್ಯ ಅವರಿಗೆ ಒಳ್ಳೆಯ ಬುದ್ಧಿ ಬರಲೆಂದು ಪೂಜೆ ಮಾಡಿ ಪ್ರಸಾದವನ್ನು ಸಂಸದರಿಗೆ ಕಳುಹಿಸುವಾಗ ಪೊಲೀಸರ ಮೂಲಕ ಅಡ್ಡಿಪಡಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಡಾ.ಶಂಕರ್ ಗುಹಾ ದ್ವಾರಕನಾಥ್ ಬೆಳ್ಳೂರು ಆಕ್ರೋಶ ಹೊರಹಾಕಿದ್ದಾರೆ.

ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಮಣ್ಯ ಅವರಿಗೆ ಒಳ್ಳೆಯ ಬುದ್ಧಿ ಬರಲಿ ಎಂದು ಪಂಚದುರ್ಗಾ ಪೂಜೆ ನಡೆಸಲಾಯಿತು. ದ್ವೇಷದ ಭಾವನೆ ಬಿಟ್ಟು ಪ್ರೇಮದ ಭಾವನೆ ಮೂಡಲಿ. ಸಮಾಜದಲ್ಲಿ ಶಾಂತಿ ಕಾಪಡುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಲಿ ಎಂದು ಪಂಚದುರ್ಗಾ ಪೂಜೆಯನ್ನು ಮಾಡಿದೆವು. ಪೂಜೆ ಬಳಿಕ ಪಂಚ ಪುಷ್ಪ ಪ್ರಸಾದವನ್ನು ಸಂಸದರಿಗೆ ಕೊರಿಯರ್ ಮೂಲಕ ಕಳುಹಿಸಲು ಮುಂದಾದಾಗ ಪೊಲೀಸರು ಅಡ್ಡಿಪಡಿಸಿದ್ದಾರೆ. ಇಬ್ಬರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂದು ಡಾ.ಶಂಕರ್ ಗುಹಾ ದ್ವಾರಕನಾಥ್ ಅಸಮಾಧಾನ ಹೊರಹಾಕಿದ್ದಾರೆ. ಸಂಸದರು ಮತ್ತು ಶಾಸಕರು ಅಧಿಕಾರ ಬಳಸಿಕೊಂಡು ನಮ್ಮನ್ನು ಹೆದರಿಸುತ್ತಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಜಗ್ಗಲ್ಲ. ನಮಗೆ ಭಯವಿಲ್ಲ. ಸಮಾಜದಲ್ಲಿ ಶಾಂತಿ ಕಾಪಾಡಿಕೊಳ್ಳಬೇಕು ಅನ್ನೋ ಉದ್ದೇಶದಿಂದ ಈ ಪೂಜೆಯನ್ನು ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಮಂಗಳೂರಿನ ಪ್ರವೀಣ್ ನೆಟ್ಟಾರ್ ಕೊಲೆ ಸಂಬಂಧ ತೇಜಸ್ವಿ ಸೂರ್ಯ, “ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು” ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಹಾಗೂ ಸಂಸದರಿಗೆ ಮತ್ತು ಶಾಸಕರಿಗೆ ಒಳ್ಳೆಯ ಮನಸ್ಥಿತಿಯನ್ನು ದೇವರು ದಯಪಾಲಿಸಲಿ. ಸಂಸದರಲ್ಲಿ ದ್ವೇಷ, ಕ್ಲೇಶ, ದುಷ್ಟ ಬುದ್ಧಿಗಳು ದೂರವಾಗಲಿ ಎಂದು ಬನಶಂಕರಿಯ ಬ್ಯಾಂಕ್ ಕಾಲನಿಯ ಡಾ.ಶಂಕರ್ ಗುಹಾ ದ್ವಾರಕಾನಾಥ ಕಚೇರಿಯಲ್ಲಿ ಶುಭಕೃತ್ ನಾಮ ಸಂವತ್ಸರದ ಶ್ರಾವಣ ಮಾಸದಲ್ಲಿ ಶುಕ್ಲಪಕ್ಷದ ದ್ವಾದಶಿ ತಿಥಿಯಂದು ಪಂಚ ಪುಷ್ಪಗಳಲ್ಲಿ ವಿಶೇಷ ಪಂಚದುರ್ಗಾ ಮಹಾಪೂಜೆಯನ್ನು ಮಾಡಲಾಗಿದೆ. ಬಳಿಕ ದ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಪೂಜೆಯಲ್ಲಿ ಬಸವನಗುಡಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಬಿಹಾರ ಸಿಎಂ ನಿತೀಶ್​ಕುಮಾರ್​ ರಾಜೀನಾಮೆ: ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಪತನ

ಡೆತ್​ನೋಟ್​ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ: ಹುಟ್ಟು ಹಬ್ಬದ ದಿನವೇ ದುರಂತ ಅಂತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 15 =
Remember me
