ಚಿಕ್ಕಬಳ್ಳಾಪುರ:ಕಳೆದ ವರ್ಷದಂತೆ ಈ ಬಾರಿಯೂ ಕರೊನಾ ಭೀತಿಗೆ ಹೆದರಿ ಆತ್ಮಹತ್ಯೆ ಹಾದಿ ಹಿಡಿಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಂದು ಬೆಳಗಿನಜಾವ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆ ಆವರಣದಲ್ಲೇ ಮರಕ್ಕೆ ನೇಣುಬಿಗಿದುಕೊಂಡು ಸೋಂಕಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿತ್ತು.
ಇದೀಗ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರಲ್ಲಿ ಯುವಕನೊಬ್ಬ ಪಿನಾಕಿನಿ ನದಿ ಕಾಲುವೆ ಬಳಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗೌರಿಬಿದನೂರು ತಾಲೂಕಿನ ವೇದಲವೇಣಿ ನಿವಾಸಿ ಶಿವಾನಂದ ಮೃತ ದುರ್ದೈವಿ.ಇದನ್ನೂ ಓದಿರಿಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ
ಇತ್ತೀಚಿಗೆ ಶಿವಾನಂದ ಕೋವಿಡ್​ ಪರೀಕ್ಷೆಗೆ ಒಳಗಾಗಿದ್ದ. ವರದಿಯಲ್ಲಿ ಪಾಸಿಟಿವ್​ ಬಂದಿದ್ದೇ ತಡ ಜಿಗುಪ್ಸೆಗೊಂಡ ಯುವಕ ಮೊಬೈಲ್​ ಸ್ವಿಚ್ಡ್​ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದ. ಕರೊನಾ ಸೋಂಕು ಕಾಣಿಸಿಕೊಂಡಿದ್ದರಿಂದ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.
ಗೌರಿಬಿದನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಯುಕವನು ಇತ್ತೀಚೆಗಷ್ಟೆ ಬೈಕ್ ಕಳವು ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ.
ಕಾರಿನಲ್ಲೇ ಟಿವಿ ಸೀರಿಯಲ್​ ನಟಿಯ ಬೆತ್ತಲೆ ದೃಶ್ಯ ಸೆರೆ! ಮುಂದೆ ಆಗಿದ್ದೆಲ್ಲವೂ ಅವಾಂತರ

ಟಾಟಾ ಏಸ್​ ಪಲ್ಟಿ: ಮಗು ಸೇರಿ ಮೂವರು ಸ್ಥಳದಲ್ಲೇ ಸಾವು, 9 ಜನರ ಸ್ಥಿತಿ ಗಂಭೀರ

ಸಿನಿಮಾ ಮತ್ತು ರಾಜಕೀಯಕ್ಕೆ ಶಾಶ್ವತ ಗುಡ್ ​ಬೈ ಹೇಳಿದ ರಮ್ಯಾ! ಇನ್ನೆಂದೂ ಬಣ್ಣದ ಲೋಕಕ್ಕೆ ಬರಲ್ಲ ಎಂದ ಮೋಹಕ ತಾರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
