ಬೆಂಗಳೂರು:ಪದವಿ ವ್ಯಾಸಂಗದಲ್ಲಿ ಕನ್ನಡ ಆಯ್ಕೆ ವಿದ್ಯಾರ್ಥಿಗೆ ಬಿಟ್ಟದ್ದು, ಒತ್ತಡ ಬೇಡ. ಕನ್ನಡ ಭಾಷೆಯನ್ನು ಆಯ್ಕೆ ಮಾಡಿಕೊಳ್ಳುವ ವಿಚಾರ ವಿದ್ಯಾರ್ಥಿಗಳ ಸ್ವಹಿತಾಸಕ್ತಿಗೆ ಬಿಡಬೇಕು ಎಂದು ಉನ್ನತ ಶಿಕ್ಷಣ ಇಲಾಖೆಯು ಎಲ್ಲ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳಿಗೆ ಸೂಚನೆ ನೀಡಿದೆ.
ಕನ್ನಡ ಆಯ್ಕೆ ಮಾಡಿಕೊಳ್ಳಲಿಚ್ಛಿಸದ ವಿದ್ಯಾರ್ಥಿಗಳಿಗೆ ಒತ್ತಾಯ ಬೇಡವೆಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಈ ಸೂಚನೆ ನೀಡಿದೆ.
ಪದವಿ ಶಿಕ್ಷಣದಲ್ಲಿ ಕನ್ನಡ ಭಾಷಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಲು ಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಅಧ್ಯಯನ ಮಾಡಲು ಒತ್ತಾಯಿಸದಂತೆ ಸರ್ಕಾರಕ್ಕೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ಈ ಮಧ್ಯಂತರ ಆದೇಶವನ್ನು ಕಾಲೇಜುಗಳು ಪಾಲಿಸಬೇಕಾಗಿತ್ತು. ಆದರೆ, ನಮಗೆ ಸರ್ಕಾರದಿಂದ ಯಾವುದೇ ಆದೇಶ ಬಂದಿಲ್ಲವೆಂದು ವಿದ್ಯಾರ್ಥಿಗಳಿಗೆ ಉತ್ತರ ನೀಡುತ್ತಿರುವುದರಿಂದ ಉನ್ನತ ಶಿಕ್ಷಣ ಇಲಾಖೆಯು ಈ ರೀತಿಯ ಸೂಚನೆ ನೀಡಿದೆ.
ವಿಷಯ ಆಯ್ಕೆ ಬಗ್ಗೆ ವಿದ್ಯಾರ್ಥಿಗಳಿಗೆ ಒತ್ತಾಯ ಇರಬಾರದು, ಅದು ಆಯ್ಕೆ ಆಗಿರಬೇಕು. ಈ ವಿಚಾರದ ಬಗ್ಗೆ ಹೈಕೋರ್ಟ್‌ನಿಂದ ಅಂತಿಮ ಆದೇಶ ಬರುವವರೆಗೂ ಮಧ್ಯಂತರ ಆದೇಶವನ್ನೇ ಪಾಲಿಸಬೇಕೆಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಸೂಚಿಸಿದ್ದಾರೆ.
ಹಿನ್ನೆಲೆ ಏನು?:ಕನ್ನಡ ಭಾಷೆ ಕಲಿಕೆ ಕಡ್ಡಾಯಗೊಳಿಸಿರುವ ಸರ್ಕಾರದ ಕ್ರಮ ಪ್ರಶ್ನಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳನ್ನು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ಪೀಠ ಈ ಮಧ್ಯಂತರ ಆದೇಶ ಮಾಡಿತ್ತು.
ಸಾವಲ್ಲೂ ಸಾರ್ಥಕತೆ ಮೆರೆದ ಯುವಕ! ಅಂಗಾಂಗ ದಾನ ಮಾಡಿ ಐವರ ಪ್ರಾಣ ಉಳಿಸಿದ… ಇಂತಹ ಮಹಾನ್​ ದಾನಿಯ 2 ತಿಂಗಳ ಮಗು ಅನಾಥ

ದೇವಸ್ಥಾನ ಜೀರ್ಣೋದ್ಧಾರಕ್ಕೆ ಬಿಡುಗಡೆಯಾಗಿದ್ದ ಅನುದಾನ ಕೊಡೋಕು ಲಂಚ ಕೇಳಿ ಎಸಿಬಿ ಬಲೆಗೆ ಬಿದ್ದ ತಹಸೀಲ್ದಾರ್​!

ಪೂಜೆ ನೆಪದಲ್ಲಿ ಪುರೋಹಿತನನ್ನು ಮನೆಗೆ ಕರೆಸಿಕೊಂಡ ಈ ದಂಪತಿ ಅಸಹ್ಯ ಕೆಲಸ ಮಾಡಿಬಿಟ್ರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 12 =
Remember me
