ಬೆಂಗಳೂರು:ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೂಲಕ ರಾಜ್ಯ ಸರ್ಕಾರ ಹಲವು ಮಹತ್ತರ ಯೋಜನೆಗಳನ್ನು ಕೈಗೊಂಡಿದೆ.
ರಾಜ್ಯದಲ್ಲಿ 60 ಲಕ್ಷ ಮಕ್ಕಳ ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಇದನ್ನು ತಡೆಗಟ್ಟುವ ಸಲುವಾಗಿ ‘ಸಮಗ್ರ ಶಿಶು ಅಭಿವೃದ್ಧಿ (ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್​ವೆುಂಟ್)ಯೋಜನೆ’ಯಡಿ ರಾಜ್ಯಾದ್ಯಂತ 137 ಎಂಎಸ್​ಪಿಟಿಸಿ (ಅಂಗನವಾಡಿ ಕೇಂದ್ರಗಳಿಗೆ ಪೌಷ್ಟಿಕ ಆಹಾರಗಳ ಸರಬರಾಜುದಾರರು) ಮೂಲಕ 60 ಸಾವಿರ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲಾಗುತ್ತಿದೆ. ಈ ಕಾರ್ಯಕ್ರಮ ಸಮರ್ಪಕವಾಗಿ ನಡೆಯುತ್ತಿರುವ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರಂತರವಾಗಿ ಎಂಎಸ್​ಪಿಟಿಸಿ ಹಾಗೂ ಅಂಗನವಾಡಿ ಕೇಂದ್ರಗಳ ಉಸ್ತುವಾರಿ ಹಾಗೂ ತಪಾಸಣೆ ಕಾರ್ಯಗಳನ್ನು ಕೈಗೊಳ್ಳುತ್ತಿವೆ. ಕಾಲ ಕಾಲಕ್ಕೆ ಸಮೀಕ್ಷೆ ನಡೆಸಿ ವರದಿಯನ್ನೂ ನೀಡಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಸಮೀಕ್ಷೆ ವರದಿಯ ವಿವರಗಳು:
ನ್ಯಾಯಾಲಯದ ಆದೇಶ ಪಾಲನೆ
ನ್ಯಾಯಾಲಯದ ಆದೇಶದ ಮೇರೆಗೆ ರಾಜ್ಯದಲ್ಲಿ ಪ್ರಸ್ತುತ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ಪದ್ಧತಿಯನ್ನು ಬದಲಾಯಿಸಿ ಆಹಾರ ಪದಾರ್ಥಗಳ ಬಲವರ್ಧನೆಯ ಸೂತ್ರದ ಅನುಷ್ಠಾನಗೊಳಿಸಲಾಗಿದೆ. ಇದಕ್ಕಾಗಿ ಎಂಎಸ್​ಪಿಟಿಸಿಗಳು ಬಿ.ಐ.ಎಸ್. ಪರವಾನಿಗೆ ಹೊಂದಿರುವ ಮಹಿಳಾ ಗುಂಪುಗಳ ಸಹಾಯವನ್ನು ಪಡೆಯಲು 2021ರ ಮೇ 5ರಂದು ಹೊರಡಿಸಿರುವ ಆದೇಶದಂತೆ ಒಪ್ಪಂದ ಮಾಡಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ. ನ್ಯಾಯಾಲಯದ ಸೂಚನೆಯಂತೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಯೋಜನೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಿದ್ದು ಜತೆಗೆ ಕಾಲ ಕಾಲಕ್ಕೆ ಅನುಸರಣಾ ವರದಿಯನ್ನೂ ಸಲ್ಲಿಸುತ್ತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − twelve =
Remember me
