ದಕ್ಷಿಣ ಕನ್ನಡ:ಪ್ರೀತಿಸುವ ನಾಟಕವಾಡಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೇ ತಂದೆ-ತಾಯಿಯನ್ನೂ ಕೊಲೆ ಮಾಡುವುದಾಗಿಯೂ ಆಕೆಗೆ ಬೆದರಿಕೆ ಹಾಕಿದ್ದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ.
ವೆನ್ಲಾಕ್ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಡಾ.ಅನುಷ್ ನಾಯ್ಕ(35) ಬಂಧಿತ. ಮಾಣಿ ನಿವಾಸಿಯಾದ ಡಾ. ಅನುಷ್​ ನಾಯ್ಕ, 2021ರ ಮಾ.6ರಂದು ಮಾಣಿ ಸರ್ಕಾರಿ ಆಸ್ಪತ್ರೆ ಬಳಿ ಬಾಲಕಿಯೊಬ್ಬಳನ್ನು ಪರಿಚಯ ಮಾಡಿಕೊಂಡಿದ್ದ. ಆಕೆಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಳ್ಳಲು ನಾಟಕವಾಡಿದ್ದ. ಆಕೆಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದ.
ಕಳೆದ ಮೇ ತಿಂಗಳಿನಲ್ಲಿ ವೈದ್ಯನಿಗೆ ಮದುವೆಯಾದ ವಿಚಾರ ತಿಳಿದ ಬಳಿಕ ಬಾಲಕಿ ಆತನೊಂದಿಗೆ ಮೊಬೈಲ್​ ಸಂಪರ್ಕ ಕಡಿದುಕೊಂಡಿದ್ದಳು. ಈ ಕೋಪದಿಂದ ಆರೋಪಿ “ನಿನ್ನ ಜತೆಗೆ ನಿನ್ನ ತಂದೆ, ತಾಯಿಯನ್ನೂ ಕೊಲೆ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ. ಈ ವಿಚಾರವನ್ನ ಮನೆಯಲ್ಲಿ ಬಾಲಕಿ ಹೇಳಿದ್ದಳು. ಸಂತ್ರಸ್ತೆಯ ತಾಯಿ ಬಂಟ್ವಾಳ ಠಾಣೆಗೆ ದೂರು ನೀಡಿದ್ದು, ಪೋಕ್ಸೋ ಕೇಸು ದಾಖಲಿಸಿಕೊಂಡ ಪೊಲೀಸರು ಮನೆಯಲ್ಲಿದ್ದ ಆರೋಪಿಯನ್ನು ಬಂಧಿಸಿದ್ದಾರೆ.
ಧಾರಾಕಾರ ಮಳೆಗೆ ಮನೆ ಗೋಡೆ ಕುಸಿತ: ಮಲಗಿದ್ದಲ್ಲೇ ಶವವಾದ ತಾಯಿ-ಮಗಳು
33 ವರ್ಷದ ಪುರುಷನಿಗೂ ಪಿರಿಯಡ್ಸ್​! ಕಿಬ್ಬೊಟ್ಟೆ ನೋವೆಂದು ಆಸ್ಪತ್ರೆಗೆ ಹೋದವನಿಗೆ ಕಾದಿತ್ತು ಆಘಾತ…
ದಾಂಡೇಲಿಯಲ್ಲಿ ಮಗನಿಂದಲೇ ತಾಯಿ ಮೇಲೆ ಅತ್ಯಾಚಾರ: ಒಂದೇ ದಿನ 2 ಬಾರಿ ಬಲತ್ಕಾರ



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + ten =
Remember me
