ಹಾಸನ:ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನ ಪಡೆಯಲು ದಿನೇ ದಿನೆ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದರ್ಶನದ ಅವಧಿಯನ್ನು ಹೆಚ್ಚಿಸಲಾಗಿದೆ.
ಬುಧವಾರ ಸಂಜೆ ಹಾಸನಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಭಕ್ತರ ಸಂಖ್ಯೆ ಹೆಚ್ಚುತ್ತಿರುವುದರಿಂದ ನೂಕುನುಗ್ಗಲು ಉಂಟಾಗುತ್ತಿದೆ. ಹಾಗಾಗಿ ಪೂಜೆ ಮತ್ತು ನೈವೇದ್ಯಕ್ಕಾಗಿ ಒಂದು ಗಂಟೆ ಮಾತ್ರ ಗರ್ಭಗುಡಿ ಬಾಗಿಲು ಮುಚ್ಚುವಂತೆ ಸೂಚಿಸಲಾಗಿದೆ. ಮೊದಲು ಪೂಜೆ ಮತ್ತು ನೈವೇದ್ಯಕ್ಕಾಗಿ 2 ಗಂಟೆಗಳ ಕಾಲ ಬಾಗಿಲು ಮುಚ್ಚಲಾಗುತ್ತಿತ್ತು. ಇನ್ಮುಂದೆ ಒಂದು ಗಂಟೆ ಮಾತ್ರ ಬಾಗಿಲು ಮುಚ್ಚಲು ತಿಳಿಸಲಾಗಿದೆ. ದರ್ಶನದ ಅವಧಿ ಹೆಚ್ಚಲಿದೆ ಎಂದರು.
ಅಲ್ಲದೆ, ದೂರದ ಊರುಗಳಿಂದ ಭಕ್ತರು ಬರುವುದರಿಂದ ರಾತ್ರಿ ವೇಳೆ 10 ಗಂಟೆಗೆ ಬಾಗಿಲು ಹಾಕದೆ ಭಕ್ತರು ಇರುವವರೆಗೆ ದೇವಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲು ಸೂಚನೆ ನೀಡಲಾಗಿದೆ. ಅರ್ಚಕರು ಮತ್ತು ದೇವಾಲಯದ ಆಡಳಿತ ಮಂಡಳಿಯೊಂದಿಗೆ ಮಾತನಾಡಿ ದರ್ಶನ ಅವಧಿ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಅ.13 ರಂದು ದೇವಿಯ ಗರ್ಭಗುಡಿಯ ಬಾಗಿಲು ತೆರೆದ ದಿನದಿಂದ ಭಕ್ತರ ಸಂಖ್ಯೆ ಹೆಚ್ಚುತ್ತಲೇ ಇದೆ. ದೇವಿಯ ಗರ್ಭಗುಡಿಯ ಬಾಗಿಲು ಮುಚ್ಚಲು ಇನ್ನು 7 ದಿನಗಳು ಮಾತ್ರ ಬಾಕಿ ಇದೆ.
ನ.1ರಂದು ಪಂಚರತ್ನ ರಥಯಾತ್ರೆಗೆ ಮುಳಬಾಗಿಲಿನಲ್ಲಿ ಚಾಲನೆ: ಸ್ಥಳ ಬದಲಾವಣೆಗೆ ಎಚ್​ಡಿಕೆ ಕೊಟ್ಟ ಕಾರಣ ಇಲ್ಲಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
