ತುರುವೇಕೆರೆ:ಮದ್ವೆಯಾದ 11 ದಿನಕ್ಕೆ ವರ ದುರಂತ ಅಂತ್ಯ ಕಂಡಿದ್ದು, ವಧುವಿನ ಸ್ಥಿತಿ ಚಿಂತಾಜನಕವಾಗಿದೆ. ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಶೋಕ ಮಡುಗಟ್ಟಿದ್ದು, ಕುಟುಂಬಸ್ಥರ ಗೋಳಾಟ ನೋಡಿದ್ರೆ ಕರುಳು ಹಿಂಡುತ್ತೆ.
ಅರಸೀಕೆರೆ ತಾಲೂಕು ಕಾಮ್ಲಾಪುರದ ನಂಜುಂಡಯ್ಯ ಅವರ ಪುತ್ರ ಪ್ರಸನ್ನಗೂ ಮತ್ತು ಮಂದಾರಗೂ 10 ದಿನದ ಹಿಂದೆ ಮದುವೆ ಆಗಿತ್ತು. ಪ್ರಸನ್ನ ಮತ್ತು ಮಂದಾರ ಕಾಮ್ಲಾಪುರದಿಂದ ಮನೆಗೆ ಬೇಕಾದ ವಸ್ತುಗಳನ್ನು ಕೊಂಡುಕೊಂಡು ಹಾಲಿ ವಾಸವಾಗಿರುವ ಬೆಂಗಳೂರಿನ ಸರ್ಜಾಪುರ ರಸ್ತೆಯ ಕೈಗೊಂಡನಹಳ್ಳಿಗೆ ಕಾರಿನಲ್ಲಿ ಗುರುವಾರ ತೆರಳುತ್ತಿದ್ದರು. ಲಾರಿ ರೂಪದಲ್ಲಿ ಬಂದ ಜವರಾಯ, ನವವಿವಾಹಿತರ ಬಾಳಿಗೆ ಕೊಳ್ಳಿ ಇಟ್ಟಿದ್ದಾನೆ.
ತುಮಕೂರು ಜಿಲ್ಲೆ ತುರುವೇಕರೆ ತಾಲೂಕಿನ ಮಾಯಸಂದ್ರ ಹೋಬಳಿಯ ಚಿಕ್ಕಶೆಟ್ಟಿಕೆರೆ ಬಳಿ ನವವಿವಾಹಿತರು ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ನವವಿವಾಹಿತ ಪ್ರಸನ್ನ(27) ಮತ್ತು ಕಾರು ಚಾಲಕ ಬೆಂಗಳೂರಿನ ಕೈಗೊಂಡನಹಳ್ಳಿಯ ಚನ್ನಯ್ಯ(32) ಸ್ಥಳದಲ್ಲೇ ಮೃತಪಟ್ಟರೆ, ಸಂತೋಷ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಪ್ರಸನ್ನನ ಪತ್ನಿ ಮಂದಾರ ತೀವ್ರ ಗಾಯಗೊಂಡು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾರು ಜಖಂಗೊಂಡಿದ್ದು, ಲಾರಿಯ ಒಂದು ಭಾಗ ನಜ್ಜುಗುಜ್ಜಾಗಿದೆ. ಲಾರಿ ಚಾಲಕ ಪರಾರಿಯಾಗಿದ್ದು, ತುರುವೇಕರೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಜೆಡಿಎಸ್​ ಪಕ್ಷವನ್ನೇ ವಿಸರ್ಜನೆ ಮಾಡ್ತೀವಿ, ಮತ್ತೆ ಮತ ಕೇಳಲು ಬರಲ್ಲ: ಸವಾಲು ಸ್ವೀಕರಿಸುತ್ತಲೇ ಎಚ್​ಡಿಕೆ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − ten =
Remember me
