ಅಕ್ಕಿಆಲೂರ(ಹಾವೇರಿ):ಮನೆಯಲ್ಲಿ ಒಂಟಿಯಾಗಿದ್ದ ಅಂಗವಿಕಲ ಯುವತಿ ಮೇಲೆ ಶಿವಮೊಗ್ಗ ಮೂಲದ ಇಬ್ಬರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಪರಾರಿಯಾದ ಘಟನೆ ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಂಗಳವಾರ ಯುವತಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಸಹೋದರ ಮತ್ತು ಸಹೋದರಿಯರು ಶಾಲಾ-ಕಾಲೇಜಿಗೆ ತೆರಳಿದ್ದರು. ಆ ವೇಳೆ ಅಂಗವಿಕಲ ಯುವತಿ ಮನೆ ಮುಂದೆ ಕುಳಿತಿದ್ದಳು. ಅಲ್ಲಿಗೆ ಬಂದ ದುಷ್ಕರ್ಮಿಗಳು ಯುವತಿಯನ್ನು ಮನೆಯೊಳಗೆ ಎಳೆದೊಯ್ದು ಬಾಯಿಗೆ ಬಟ್ಟೆ ಕಟ್ಟಿ, ಅತ್ಯಾಚಾರ ಎಸಗಿದ್ದಾರೆ. ಬಳಿಕ ಯುವತಿಯು ಹರಸಾಹಸಪಟ್ಟು ಬಾಯಿಗೆ ಕಟ್ಟಿದ್ದ ಬಟ್ಟೆ ಕಿತ್ತುಹಾಕಿ ಚೀರಾಡಿದ್ದು, ಅಕ್ಕಪಕ್ಕದ ನಿವಾಸಿಗಳು ಆಗಮಿಸುತ್ತಿದ್ದಂತೆ ಆರೋಪಿಗಳಾದ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮಲ್ಲಾಪುರ ಗ್ರಾಮದ ಪರಶುರಾಮ ಮಂಜಪ್ಪ ಮಡಿವಾಳರ ಮತ್ತು ಆನವಟ್ಟಿಯ ಯಶವಂತ ಪರಾರಿಯಾಗಿದ್ದರು.
ತೀವ್ರ ಅಸ್ವಸ್ಥಳಾದ ಯುವತಿಗೆ ತಿಳವಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಉಪಚಾರಕ್ಕಾಗಿ ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮುಖ ಆರೋಪಿ ಪರಶುರಾಮ ಮಡಿವಾಳರನನ್ನು ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಯಶವಂತನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಆಡೂರ ಪಿಎಸ್​ಐ ಗಡ್ಡೆಪ್ಪ ಗುಂಜಟಗಿ ತಿಳಿಸಿದ್ದಾರೆ.
ಗಂಡನನ್ನು ಬಿಟ್ಟು ಬಾ… ಹಾಸನ ಯುವಕನ ಕಾಟಕ್ಕೆ ಶಿವಮೊಗ್ಗದ ವಿವಾಹಿತೆ ಕಂಗಾಲು!

ತುಮಕೂರಲ್ಲಿ ಶಿಕ್ಷಣ ಸಚಿವ ನಾಗೇಶ್​ರ ಮನೆಗೆ ಬೆಂಕಿ ಹಚ್ಚಲು ಯತ್ನ: ತುರ್ತು ಸುದ್ದಿಗೋಷ್ಠಿ ನಡೆಸಿದ ಗೃಹಸಚಿವ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 17 =
Remember me
