ಬೆಂಗಳೂರು:ಒಂದು ವಾರದಿಂದ ಮಂಡ್ಯ ಸಂಸದೆ ಸುಮಲತಾ ಮತ್ತು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ರಾಜ್ಯಾದ್ಯಂತ ಭಾರಿ ಸದ್ದು ಮಾಡಿದೆ. ಇದೀಗ ಈ ಕದನಕ್ಕೆ ಎಚ್​ಡಿಕೆ ವಿರಾಮ ಘೋಷಿಸಿದ್ದು, ನನ್ನ ಮೇಲಿನ ಆರೋಪಗಳಿಗೆ ಜನರೇ ಉತ್ತರ ಕೊಡುತ್ತಾರೆ ಎನ್ನುವ ಮೂಲಕ ಮುಂದಿನ ಚುನಾವಣೆಯಲ್ಲಿ ಸೋಲಿಸುವ ಬಗ್ಗೆ ಪರೋಕ್ಷವಾಗಿ ಸುಮಲತಾಗೆ ಎಚ್ಚರಿಸಿದ್ದಾರೆ.
‘ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದು ಎಚ್​ಡಿಎಕ ಸರಣಿ ಟ್ವೀಟ್​ ಮಾಡಿದ್ದಾರೆ.
‘ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’.
‘ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’.
ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ.4/4
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)July 10, 2021

‘ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಿಯಕರನ ಮನೆಯಲ್ಲಿ ಯುವತಿ ಶವ ಪತ್ತೆ! ಮೃತಳ ಪೋಷಕರಿಂದ ನಡೆದೇ ಹೋಯ್ತು ಘೋರ ದುರಂತ

‘ಲೈಂಗಿಕ ಉತ್ಸವ’ದಲ್ಲಿ ಮಿಂದೆದ್ದ ನೂರಾರು ಜೋಡಿಗಳು! ನಾಲ್ಕು ದಿನ ನಡೆಯಿತು ಸೆಕ್ಸ್​ ಫೆಸ್ಟಿವಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 3 =
Remember me
