ಮೈಸೂರು:ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸ್ತಾರೆ? ಎಂಬ ಪ್ರಶ್ನೆಗೆ ರಾಮನಗರ ಇಲ್ಲವೇ ಚನ್ನಪಟ್ಟಣ ಕ್ಷೇತ್ರ ಎಂದು ಥಟ್​ ಅಂತ ಜನರು ಪ್ರತಿಕ್ರಿಯಿಸುತ್ತಿದ್ದರು. ಆದರೀಗ ಚಾಮುಂಡೇಶ್ವರಿ ಕ್ಷೇತ್ರಕ್ಕೆ ನಾನೇ ಬರುವೆ ಎನ್ನುವ ಮೂಲಕ ಎಚ್​ಡಿಕೆ ಭಾರೀ ಕುತೂಹಲ ಮೂಡಿಸಿದ್ದಾರೆ.
ಮುಂದಿನ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಯಾರು ಬರ್ತಾರೆ ಎಂದು ಕೇಳಿದ ಕಾರ್ಯಕರ್ತರಿಗೆ ನಾನೇ ಬರುವೆ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ರಾಜಕಾರಣಕ್ಕೆ ಎಚ್​ಡಿಕೆ ಟ್ವಿಸ್ಟ್ ಕೊಟ್ಟಿದ್ದಾರೆ.
ಮೈಸೂರು ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್​ಡಿಕೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಯಾರು ರ್ಬತಾರೆ ಎಂದು ಕಾರ್ಯಕರ್ತರು ಕೇಳುತ್ತಿದ್ದಾರೆ. ನಾನೇ ಈ ಕ್ಷೇತ್ರಕ್ಕೆ ಬರುವುದಾಗಿ ಹೇಳಿರುವೆ ಎಂದು ತಿಳಿಸಿ ಅಚ್ಚರಿ ಮೂಡಿಸಿದರು.
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಜಿ‌.ಟಿ.ದೇವೇಗೌಡರನ್ನು ಹಣಿಯಲು ಎಚ್​ಡಿಕೆ ಮಾಸ್ಟರ್​ ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರದಲ್ಲಿ ನಾಯಕ ಸಮುದಾಯಯೂ ಕೈಹಿಡಿಯುವ ವಿಶ್ವಾಸ ಇದೆ. ಆದರೆ ಜಿಟಿಡಿ- ಸಿದ್ದರಾಮಯ್ಯ ಒಂದಾದರೆ ಗೆಲುವು ಕಷ್ಟ ಎಂಬ ಮಾತೂ ಕೇಳಿಬರುತ್ತಿದೆ. ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಆಗಲೇ ಕ್ಷೇತ್ರದಲ್ಲಿ ರೋಚಕತೆ ಪಡೆದುಕೊಳ್ಳುತ್ತಿದೆ.
ಹಿಜಾಬ್​ ವಿವಾದ: ಸ್ಫೋಟಕ ರಹಸ್ಯ ಬಯಲು, ಎರಡು ತಿಂಗಳ ಹಿಂದೆಯೇ ನಡೆದಿತ್ತು ಮಾಸ್ಟರ್​ ಪ್ಲ್ಯಾನ್…

ಬೆಂಗಳೂರಲ್ಲಿ ಒಣ ಕೊಂಬೆ ಬಿದ್ದು ಕೋಮಾದಲ್ಲಿದ್ದ ಬಾಲಕಿ ಸಾವು: 702 ದಿನ ಸತತ ಚಿಕಿತ್ಸೆಯ ನಂತರವೂ ಬದುಕಲಿಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × four =
Remember me
