ಬೆಂಗಳೂರು:ಕನ್ನಡ ಕಾರ್ಯಕ್ರಮಗಳನ್ನು ನೀಡುತ್ತಿರುವ ‘101.3 FM Rainbow ಕನ್ನಡ ಕಾಮನಬಿಲ್ಲುʼ ರೇಡಿಯೋ ವಾಹಿನಿಯ ಕತ್ತು ಕುಯ್ಯುವ ಕೆಲಸಕ್ಕೆ ಕೇಂದ್ರ ಸರ್ಕಾರ ಹೊರಟಿದೆ. ಇದು ಅಕ್ಷಮ್ಯ. ಕನ್ನಡಕ್ಕೆ ಕೊಡಲಿ ಪೆಟ್ಟು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರ್ಕಾರ ಮಾಡುತ್ತಿದೆ. ‘ರೈನ್​ ಬೋ ಕನ್ನಡ ಕಾಮನಬಿಲ್ಲು’ ಕೇವಲ ರೇಡಿಯೋ ವಾಹಿನಿ ಮಾತ್ರವಲ್ಲ, ಕನ್ನಡಿಗರ ಹೃದಯಬಡಿತ, ಕನ್ನಡದ ಅಸ್ಮಿತೆ ಕೂಡ. ಆದರೆ, ಕೇಂದ್ರ ಸರ್ಕಾರ ಕನ್ನಡಿಗರ ಭಾವನೆಗಳ ಜತೆ ಚೆಲ್ಲಾಟ ಆಡುತ್ತಿದೆ. ಅಧಿಕಾರಿಗಳ ಮೂಲಕ ಕನ್ನಡಮ್ಮನ ರಕ್ತ ಬಗೆಯುವ ಹೀನ ಕೆಲಸ ಮಾಡುತ್ತಿದೆ. ಈ ಹಿಂದೆ ಕನ್ನಡಿಗರ ಮನೆಮನದಲ್ಲಿ ತುಂಬಿದ್ದ ‘ಅಮೃತವರ್ಷಿಣಿ’ಯನ್ನು ಮುಗಿಸಲಾಯಿತು. ಈಗ ಕನ್ನಡ ಕಾಮನಬಿಲ್ಲನ್ನು ಮುಗಿಸಲು ಹೊರಟಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕನ್ನಡ ವಿರೋಧಿ ಕೇಂದ್ರ ಸರ್ಕಾರ, ಕನ್ನಡದ್ರೋಹಿ ಅಧಿಕಾರಿಗಳ ಕಪಿಮುಷ್ಠಿಯಲ್ಲಿ ಸಿಲುಕಿರುವ ಕನ್ನಡದ ಆಕ್ರಂದನವನ್ನು ಇನ್ನು ಸಹಿಸಲು ಸಾಧ್ಯವಿಲ್ಲ. ಆಯಕಟ್ಟಿನಲ್ಲಿ ಕೂತಿರುವ ಹಿರಿಯ ಅಧಿಕಾರಿಗಳು ಸಾವಿರಾರು ವರ್ಷಗಳ ಅಭಿಜಾತ ಭಾಷೆ ಕನ್ನಡದ ಮೇಲೆ ದಾಳಿ ನಡೆಸಿ ಕ್ರೂರವಾಗಿ ವಧೆ ಮಾಡುತ್ತಿದ್ದಾರೆ. ಕನ್ನಡನಾಡನ್ನು ಉದ್ಧಾರ ಮಾಡುತ್ತೇವೆಂದು ಗೆದ್ದುಹೋದ ಸಂಸದ ಮಹಾಶಯರು ಕನ್ನಡಕ್ಕೆ ಆಗುತ್ತಿರುವ ಅನ್ಯಾಯವನ್ನು ಸಹಿಸುತ್ತಿರುವುದು ಹೊಣೆಗೇಡಿತನವೇ ಸರಿ ಎಂದು ಎಚ್​ಡಿಕೆ ಟೀಕಿಸಿದ್ದಾರೆ.
ಕನ್ನಡಿಗರು ಸಹಿಷ್ಣುಗಳು, ಸೌಮ್ಯರು ಹೌದು. ಹಾಗೆಂದು, ತಾಯಿಭಾಷೆಗೆ ಕೊಳ್ಳಿ ಇಡುತ್ತಿರುವ ‘ಭಾಷಾಂತಕ’ರನ್ನು ನೋಡುತ್ತಾ ಸುಮ್ಮನೆ ಕೂರಲಾರರು, ನೆನಪಿರಲಿ. ಸಂಸದರೆಲ್ಲರೂ ದನಿಯೆತ್ತಿ ಈ ರೇಡಿಯೋ ವಾಹಿನಿಯನ್ನು ಉಳಿಸಬೇಕು. ಮುಚ್ಚುವುದು ಅಥವಾ ಇನ್ನೊಂದರಲ್ಲಿ ವಿಲೀನ ಮಾಡುವುದನ್ನು ಸಹಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್​ಡಿಕೆ ಎಚ್ಚರಿಸಿದ್ದಾರೆ.
ಎಫ್​ಎಂ ರೈನ್​ ಬೋ ನ ಬಹುತೇಕ ನಿರೂಪಕರು ಅರೆಕಾಲಿಕ ಉದ್ಯೋಗಿಗಳು. ಸ್ಪಷ್ಟ ಕನ್ನಡ, ಅಚ್ಚ ಕನ್ನಡದ ರಾಯಭಾರಿಗಳು. ಅರ್ಥಪೂರ್ಣ ಕಾರ್ಯಕ್ರಮ, ಸುಶ್ರಾವ್ಯ ಹಾಡುಗಳ ಮೂಲಕ ಕೇಳುಗರೊಂದಿಗೆ ಸಂವಾದಿಯಾದವರು. ಈಗ ವಾಹಿನಿಯನ್ನೇ ನಿಲ್ಲಿಸುವ ಒಳಸಂಚು ಇವರೆಲ್ಲರಿಗೂ ಆಗುವ ಅನ್ಯಾಯ ಹಾಗೂ ಕನ್ನಡ, ಕನ್ನಡಿಗರಿಗೆ ಮಾಡುವ ಅಪಚಾರ. ಕನ್ನಡಿಗರಿಗೆ ಕಿರುಕುಳ ನೀಡಿ ವಿಕೃತ ಸಂತೋಷಪಡುವ ಮನಃಸ್ಥಿತಿ ಅಳಿಯಲಿ. ಭಾರತ ಒಕ್ಕೂಟ ರಾಜ್ಯಗಳ ಆಗರ ಎನ್ನುವುದು ನೆನಪಿರಲಿ ಎಂದು ಕುಮಾರಸ್ವಾಮಿ ಎಚ್ಚರಿಸಿದ್ದಾರೆ.
ವೈದ್ಯರ ಎಡವಟ್ಟು: ಜ್ವರ, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದ ಯುವಕನಿಗೆ ಕಾಲು ಕತ್ತರಿಸುವ ಹಂತಕ್ಕೆ ಸೋಂಕು

ಶಾಲೆಯಲ್ಲೇ ವಿದ್ಯಾರ್ಥಿನಿ ಜತೆ ಮುಖ್ಯಶಿಕ್ಷಕ ರೊಮಾನ್ಸ್​! ತಬ್ಬಿಕೊಂಡು ಮುತ್ತಿಡುತ್ತಿರುವ ವಿಡಿಯೋ ವೈರಲ್​, ಎಚ್​.ಡಿ.ಕೋಟೆಯಲ್ಲಿ ಘಟನೆ

ಒಲ್ಲೆ ಎಂದರೂ ಅಣ್ಣನ ಎದುರೇ ‘ಬಾ.. ಮೊದಲಿನಂತೆ ನನ್ನ ಜತೆಗಿರು ಬಾ..’ ಎಂದು ಸೋದರಿಯನ್ನ ಪೀಡಿಸುತ್ತಿದ್ದ… ನಡೆದೇ ಹೋಯ್ತು ಘೋರ ಕೃತ್ಯ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:17 − 4 =
Remember me
