ಹುಬ್ಬಳ್ಳಿ:ರಾಜ್ಯಸಭೆ ಚುನಾವಣೆಯ 4 ಸ್ಥಾನದಲ್ಲಿ ಬಿಜೆಪಿ-2, ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 1 ಸ್ಥಾನ ಗೆಲ್ಲಲಿವೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ನ 2ನೇ ಅಭ್ಯರ್ಥಿ ಗೆಲ್ಲುವ ಪ್ರಶ್ನೆಯೇ ಇಲ್ಲ. ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ನಮ್ಮಲ್ಲಿ ಯಾವುದೇ ಗೊಂದವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ನನಗೂ ಆತ್ಮೀಯರಿದ್ದಾರೆ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.
ಶನಿವಾರ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಚ್​ಡಿಕೆ, ಆರೋಗ್ಯ ತಪಾಸಣೆಗಾಗಿ 4 ದಿನ ಸಿಂಗಾಪುರಕ್ಕೆ ಹೋಗಿದ್ದೆ. ಶುಕ್ರವಾರ ರಾತ್ರಿ ಬೆಂಗಳೂರಿಗೆ ಬಂದಿದ್ದೇನೆ. ರಾಜ್ಯಸಭಾ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಂಬಂಧ ಕಾಂಗ್ರೆಸ್ ಮುಖಂಡರೊಂದಿಗೆ ನಾನು ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್​ನಲ್ಲಿ 32 ಮತಗಳಿವೆ. ನಾಲ್ಕೈದು ಜನರಿಗೆ ಅಸಮಾಧಾನ ಇರಬಹುದು. ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದ್ದೇವೆ. 2016ರ ವಿದ್ಯಮಾನ ಮರಳಿಸುವುದಿಲ್ಲ ಎಂದು ಎಚ್​ಡಿಕೆ ಹೇಳಿದರು.
ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ಗಡದಿನ್ನಿ, ಹು-ಧಾ ಮಹಾನಗರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಗುರುರಾಜ ಹುಣಸಿಮರದ, ಮುಖಂಡ ತಬ್ರೇಜ್ ಸಂಶಿ ಇದ್ದರು.
ಪ್ರೀತಿಸಿ ಮದ್ವೆಯಾದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು! ಅನುಮಾನ ಹುಟ್ಟಿಸಿದೆ ಆಕೆಯ ಬಲಕಿವಿ ಮಿಸ್ಸಿಂಗ್‌

ಬೆಂಗ್ಳೂರಲ್ಲಿ ಬೆಳ್ಳಂಬೆಳಗ್ಗೆ ಮರಕ್ಕೆ ಡುಕಾಟಿ ಬೈಕ್ ಡಿಕ್ಕಿ: ಸ್ಥಳದಲ್ಲೇ ನಿವೃತ್ತ ಪೊಲೀಸ್ ಅಧಿಕಾರಿ ಪುತ್ರ-ಗೆಳತಿ ದುರ್ಮರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
