ಬೆಂಗಳೂರು:ಶಾಂತಿ ಸಹನೆಯ ಸಾಕಾರಮೂರ್ತಿ, ಪಿತೃವಾಕ್ಯ ಪರಿಪಾಲಕ ಮತ್ತು ಸರ್ವ ಜೀವನಾದರ್ಶಗಳ ಪ್ರತೀಕ ಶ್ರೀರಾಮಚಂದ್ರರ ಚರಿತೆ ನಮಗೆಲ್ಲರಿಗೂ ಪ್ರೇರಣೆ. ಶ್ರೀರಾಮ ಸ್ಮರಣೆ ಮಾಡುತ್ತಾ ಆ ಮಹಾಪುರುಷನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ ಎನ್ನುತ್ತಾ ನಾಡಿನ ಸಮಸ್ತ ಜನತೆಗೆ ಶ್ರೀರಾಮನವಮಿ ಹಬ್ಬದ ಶುಭಾಶಯ ಕೋರಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ನಮ್ಮ ರಾಮ ನಾಮ ಸ್ಮರಣೆ ಮತ್ತೊಬ್ಬರಿಗೆ ತೊಂದರೆ ಉಂಟುಮಾಡಬಾರದು ಎಂದಿದ್ದಾರೆ.
ಎಲ್ಲರೂ ರಾಮಸ್ಮರಣೆ ಮಾಡೋಣ, ಪ್ರತಿಯೊಬ್ಬರ ಹೃದಯದಲ್ಲಿ ಆ ರಾಮನು ಚಿರಸ್ಥಾಯಿಯಾಗಿ ನಿಲ್ಲಬೇಕು ಎನ್ನುವುದೇ ನನ್ನ ಆಶಯ. ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ. ಶೋಭಾಯಾತ್ರೆಯನ್ನು ಹಿಂದುಗಳು ವಾಸ ಮಾಡುವ ಬಡಾವಣೆ, ಬೀದಿಗಳಲ್ಲಿ ಮಾಡಿ, ಅಲ್ಲೆಲ್ಲ ಅರ್ಧ ಗಂಟೆ ಸಾಲದಿದ್ದರೆ, ಒಂದು ಗಂಟೆ ಮಾಡಿ. ಇದಕ್ಕೆ ನನ್ನ ಬೆಂಬಲವಿದೆ ಎಂದು ಕುಮಾರಸ್ವಾಮಿ ಸರಣಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.
ಶ್ರೀರಾಮಚಂದ್ರ ಮಹಾಪ್ರಭು ನಮ್ಮೆಲ್ಲರ ಆರಾಧ್ಯ ದೈವ. ಅಷ್ಟೇ ಅಲ್ಲ; ಮನುಕುಲಕ್ಕೆ ಆದರ್ಶ, ತ್ಯಾಗ, ಸರಳತೆ, ಶಾಂತಿ, ಸಹನೆ, ಮೌಲ್ಯಗಳ ದಿವ್ಯಬೆಳಕು ತೋರಿದ ನಮ್ಮೊಳಗಿನ ದೈವ. ರಾಮರಾಜ್ಯವು ಸರ್ವ ಜನಾಂಗದ ಶಾಂತಿಯ ತೋಟವಾಗಿತ್ತು ಎಂದು ಎಚ್​ಡಿಕೆ ಟ್ವೀಟ್​ ಮಾಡಿದ್ದಾರೆ.
ಒಂದು ಸಮುದಾಯದ ಜನರು ಈಗ ಉಪವಾಸ ಆಚರಣೆಯಲ್ಲಿದ್ದಾರೆ. ಈ ಸಮಯದಲ್ಲಿ ಅವರ ಬಡಾವಣೆಗಳಿಗೆ ಹೋಗಿ ಶಾಂತಿಗೆ ಭಂಗ ತರುವುದು ಬೇಡ. ಅದಕ್ಕೆ ಅವಕಾಶವನ್ನೂ ಕೊಡಬಾರದು ಎಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳಲ್ಲಿ ನನ್ನ ಮನವಿ. 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)April 10, 2022

ಇದಕ್ಕೂ ಮುನ್ನ ಟ್ವೀಟ್​ ಮಾಡಿರುವ ಎಚ್​ಡಿಕೆ, ಧಾರವಾಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನುಗ್ಗೆಕೇರಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಮಭಕ್ತರ ಸೋಗಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮು‌ಸ್ಲಿಮರ ಅಂಗಡಿಗಳನ್ನು ನಾಶಪಡಿಸಿ, ಅವರು ಮಾರಾಟಕ್ಕೆ ಇಟ್ಟಿದ್ದ ಕಲ್ಲಂಗಡಿ ಹಣ್ಣುಗಳನ್ನು ಹಾಳು ಮಾಡಿರುವುದು ಹೇಯ -ಪರಮ ಕಿರಾತಕ ಕೃತ್ಯ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಕೇಸರಿ ಶಾಲು ಧರಿಸಿ ಶ್ರೀರಾಮನವಮಿ ಆಚರಿಸಿದ ಮುಸ್ಲಿಮರು! ಪಾನಕ ಹಂಚಿ ನಾವೆಲ್ಲರೂ ಒಂದೇ ಎಂಬ ಸಂದೇಶ ರವಾನೆ

https://www.vijayavani.net/a-kunigal-bidanagre-basaveshwara-math-panchamukhi-anjaneya-2/
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two + sixteen =
Remember me
