ಬೆಂಗಳೂರು:ಹಿಂದೂಗಳಾದ ನಾವು ನಮ್ಮ ದೇವರಿಗೆ ಭಕ್ತಿಯಿಂದ ಸಲ್ಲಿಸುವ ಸೇವೆಗಳಿಗೆ ಮುಸ್ಲಿಮರು ಸೇರಿ ಅನ್ಯ ಧರ್ಮದ ಯಾರಿಂದಲೂ ಆಕ್ಷೇಪ ಇಲ್ಲದಿರುವಾಗ ಮಸೀದಿಗಳ ಧ್ವನಿವರ್ಧಕಗಳ ಬಗ್ಗೆ ತಕರಾರು ತೆಗೆಯುವುದು ಏಕೆ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಅಗತ್ಯಬಿದ್ದರೆ, ಶಬ್ದದ ಪ್ರಮಾಣವನ್ನು ವೈಜ್ಞಾನಿಕವಾಗಿ ಚಿಂತಿಸಿ ಕಡಿಮೆ ಮಾಡಲಿ. ಆ ಬಗ್ಗೆ ಮುಸ್ಲಿಂ ಧರ್ಮಗುರುಗಳೂ ಆಲೋಚನೆ ಮಾಡಲಿ ಎಂದು ಸಲಹೆ ನೀಡಿದ್ದಾರೆ.
ನಸುಕಿನಲ್ಲಿ ಸುಪ್ರಭಾತ- ಅಲ್ಲಾಹ್ ಕೂಗುವ ಪರಿಪಾಠ ನಿನ್ನೆ-ಇಂದಿನದಲ್ಲ. ಅನಾದಿ ಕಾಲದಿಂದಲೂ, ಧರ್ಮಗಳು ಹುಟ್ಟಿದಾಗಿನಿಂದಲೂ ನಡೆದುಕೊಂಡೇ ಬಂದಿವೆ. ದೇವಾಲಯಗಳಲ್ಲಿ ಮಹಾ ಮಂಗಳಾರತಿ ಸಂದರ್ಭಗಳಲ್ಲಿ ಢಮರುಗ, ಜಾಗಟೆ, ಘಂಟೆ ಇತ್ಯಾದಿಗಳನ್ನು ಭಾರಿಸುವ ಸಂಪ್ರದಾಯ ಇದ್ದೇ ಇದೆ. ಶಿವನಿಗೆ ಪ್ರಿಯವಾದ ಢಮರುಗ ಯಾರಿಗಾದರೂ ಕಿರಿಕಿರಿ ಮಾಡಿದೆಯೇ? ಇಲ್ಲವಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಭಾರತೀಯ ಸಂವಿಧಾನವು ಜಗತ್ತಿನ ಸರ್ವಶ್ರೇಷ್ಠ ಸಂವಿಧಾನ. ಅದರಲ್ಲಿ ಅಡಕವಾಗಿರುವ ಸಹಿಷ್ಣುತೆಯ ಆಶಯಕ್ಕೆ ಧಕ್ಕೆ ತರುವುದು ಬೇಡ. ಸಂಸತ್ತಿನಲ್ಲಿರುವ ಸಂವಿಧಾನ ಪ್ರತಿಗೆ ಶಿರಬಾಗಿ ನಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ಆಶಯವನ್ನು ಹಿಂದೂ ಸಂಘಟನೆಗಳು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ನಾಯಕರು ಮೋದಿ ಅವರ ಮೇಲ್ಪಂಕ್ತಿಯನ್ನು ಗೌರವಿಸಬೇಕು. ಮಕ್ಕಳಲ್ಲಿ ಸಾತ್ವಿಕ ಸಂಸ್ಕಾರ ಬೆಳೆಸೋಣ. ಅದರ ಹೊರತಾಗಿ ಇನ್ನೊಂದು ಧರ್ಮದ ನಂಬಿಕೆಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸೋಣ. ಕರ್ನಾಟಕ ಸರ್ವಜನಾಂಗದ ಶಾಂತಿಯ ತೋಟ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಆಜಾನ್​ಗೆ ​ಪ್ರತಿಯಾಗಿ ರಾಮತಾರಕ ಮಂತ್ರ: ಬೆಳ್ಳಂಬೆಳಗ್ಗೆ ರಾಮನಾಮ ಮೊಳಗಿಸಿದ ಕಾಳಿ ಮಠದ ಸ್ವಾಮೀಜಿ

SSLC ಎಕ್ಸಾಂ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸಾವು: ಬಸ್​ ಇದ್ದಿದ್ರೆ ನನ್ನ ತಮ್ಮ ಸಾಯುತ್ತಿರಲಿಲ್ಲ… ಮನಕಲಕುತ್ತೆ ಅಕ್ಕನ ಗೋಳಾಟ

ಮೇಕೆ ಜೊತೆ ಯುವಕನ ಮದ್ವೆ! ಕುಟುಂಬಸ್ಥರ ಸಮ್ಮುಖದಲ್ಲೇ ತಾಳಿ ಕಟ್ಟಿದ… ಕಾರಣ ಕೇಳಿದ್ರೆ ಹುಬ್ಬೇರಿಸ್ತೀರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 9 =
Remember me
