ಹೈದರಾಬಾದ್​:ರಾಜಕೀಯವಾಗಿ ಎಲ್ಲರ ಗಮನ ಸೆಳೆದಿದ್ದ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ನಡುವಿನ ಭೇಟಿ- ಮಾತುಕತೆ ಹೈದರಾಬಾದ್​ನಲ್ಲಿ ಭಾನುವಾರ ಸರಿಸುಮಾರು ಮೂರು ಗಂಟೆಗಳ ಕಾಲ ನಡೆಯಿತು.
ಈ ಭೇಟಿಯ ಫಲಶ್ರುತಿಯಾಗಿ ದಸರಾ-ವಿಜಯದಶಮಿಗೆಲ್ಲ ದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳಿಗೆ ಪರ್ಯಾಯ ರಾಜಕೀಯ ಶಕ್ತಿಯೊಂದು ಹೊರಹೊಮ್ಮಲಿದೆ. ಆ ಸಂದರ್ಭದಲ್ಲಿ ತಮ್ಮ ಜತೆಯಕಲ್ಲೇ ಇರಬೇಕು ಎಂದು ಕುಮಾರಸ್ವಾಮಿ ಅವರಿಗೆ ಕೆ.ಚಂದ್ರಶೇಖರ್​ ರಾವ್​ ಮನವಿ ಮಾಡಿದ್ದಾರೆ.
ತೆಲಂಗಾಣ ಮುಖ್ಯಮಂತ್ರಿಗಳ ಅಧಿಕೃತ ನಿವಾಸ “ಪ್ರಗತಿ ಭವನ”ಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಕೆ.ಚಂದ್ರಶೇಖರ್​ ರಾವ್​ ಮತ್ತವರ ಸಂಪುಟ ಸದಸ್ಯರು ಅತ್ಯಂತ ಆದರಪೂರ್ವಕವಾಗಿ ಬರಮಾಡಿಕೊಂಡರು. ಬಳಿಕ ಇಬ್ಬರೂ ನಾಯಕರು ಮಧ್ಯಾಹ್ನದ ಭೋಜನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳನ್ನು ಆತ್ಮೀಯವಾಗಿ ಸತ್ಕರಿಸಿ ಬೆಳ್ಳಿಯ ಸರಸ್ವತಿ ವೀಣೆಯನ್ನು ನೀಡಿ ಗೌರವಿಸಿದರು. ರಾಷ್ಟ್ರ ಮಟ್ಟದಲ್ಲಿ ಹೊರಹೊಮ್ಮಲಿರುವ ಪರ್ಯಾಯ ರಾಜಕೀಯ ಕೂಟದ ಬಗ್ಗೆಯೂ ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡಿದ ಕೆಸಿಆರ್​, ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣದಲ್ಲಿ ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಕೋರಿದರು. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್​ ಪಕ್ಷಗಳಿಗೆ ಪರ್ಯಾಯವಾಗಿ ರೂಪುಗೊಳ್ಳಲಿರುವ ರಾಜಕೀಯ ವ್ಯವಸ್ಥೆ ಹೇಗಿರುತ್ತದೆ? ಅದರ ಧ್ಯೇಯೋದ್ದೇಶಗಳೇನು? ಯಾವ ದಿಕ್ಕಿನಲ್ಲಿ ಕೆಲಸ ಮಾಡಬೇಕು? ಎಂಬ ಮಾಹಿತಿಯನ್ನು ಕೆಸಿಆರ್​ ನೀಡಿದರು.
ದೇಶದಲ್ಲಿರುವ ಆರು ಪ್ರಮುಖ ನಗರಗಳಲ್ಲಿ ಮೂಲಸೌಕರ್ಯ ಕೊರತೆಯಿಂದ ಇಡೀ ದೇಶಕ್ಕೆ ಹಿನ್ನಡೆ ಉಂಟಾಗಿದೆ. ದಿನೇದಿನೆ ನಿರುದ್ಯೋಗ ಹೆಚ್ಚಾಗುತ್ತಿದೆ. ಕೃಷಿ, ಕೈಗಾರಿಕೆಗೆ ಮಾರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಇದೆಲ್ಲವನ್ನು ಸರಿ ಮಾಡುವುದರ ಜತೆಗೆ, ದೇಶದ ಉದ್ದಗಲಕ್ಕೂ ಕೋಮು ಸಾಮರಸ್ಯ ಕಾಪಾಡುವ ನಿಟ್ಟಿನಲ್ಲಿಯೂ ಹೊಸ ರಾಜಕೀಯ ನಿರ್ಣಾಯಕ ಪಾತ್ರ ವಹಿಸುವ ಬಗ್ಗೆಯೂ ಇಬ್ಬರು ನಾಯಕರು ಚರ್ಚೆ ಮಾಡಿದರು.
Met Telangana Chief Minister Sri K. Chandrashekhar Rao at Pragati Bhavan@TelanganaCMO. We had an important and cordial discussion on Karnataka & Telangana State issues besides present political situation in Karnataka. 1/3pic.twitter.com/r3xb8S6ZzF
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)September 11, 2022

ಪ್ರಾದೇಶಿಕ ಪಕ್ಷಗಳಿಂದಲೇ ಬೆಳೆದ ಬಿಜೆಪಿ ಇಂದು ಅದೇ ಪ್ರಾದೇಶಿಕ ಪಕ್ಷಗಳನ್ನು ನುಂಗುತ್ತಿರುವ ಕುಟಿಲ ರಾಜಕಾರಣದ ಬಗ್ಗೆಯೂ ಎಚ್​ಡಿಕೆ ಮತ್ತು ಚಂದ್ರಶೇಖರ್​ ರಾವ್​ ಇಬ್ಬರೂ ಸುದೀರ್ಘವಾಗಿ ಚರ್ಚೆ ನಡೆಸಿದರು.
ಬಿಜೆಪಿ ಆಡಳಿತ ಬಗ್ಗೆ ಚರ್ಚೆ:ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಉಂಟಾಗಿರುವ ಪರಿಸ್ಥಿತಿಗಳು ಹಾಗೂ ಸಾಮಾನ್ಯ ಜನರು ಎದುರಿಸುತ್ತಿರುವ ಸಂಕಷ್ಟಗಳ ಬಗ್ಗೆ ಎಚ್​ಡಿಕೆ ಮತ್ತು ಚಂದ್ರಶೇಖರ್​ ರಾವ್​ ಚರ್ಚೆ ನಡೆಸಿದರು. ಬಿಜೆಪಿ ಪಕ್ಷದ ಅಪಾಯಕಾರಿ ರಾಜಕಾರಣದ ಬಗ್ಗೆಯೂ ಅವರು ವಿವರವಾಗಿ ಮಾತನಾಡಿಕೊಂಡರು.
ಕೆಟಿಆರ್​ ಅವರೊಂದಿಗೂ ಚರ್ಚೆ:ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರೊಂದಿಗೆ ಮಾತುಕತೆಗೆ ಮುನ್ನ ಬೆಳಗ್ಗೆಯೇ ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್​(ಕೆಟಿಆರ್​) ಅವರೊಂದಿಗೆ ಮಾತುಕತೆ ನಡೆಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
