ಬೆಂಗಳೂರು:ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಖಾಸಗಿ ಬಸ್ ಅಪಘಾತಕ್ಕೀಡಾಗಿ ಪ್ರಯಾಣಿಕರು ಸಾವನ್ನಪ್ಪಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ. ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಸಿಕ್ಕಿದ್ದು, ಬಸ್ಸಿನ ಟಾಪ್ ಮೇಲೆಯೇ 40ಕ್ಕೂ ಹೆಚ್ಚು ಪ್ರಯಾಣಿಕರು ಕೂತಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ. ಇದು ಸಾರಿಗೆ ಇಲಾಖೆ ನಿರ್ಲಕ್ಷ್ಯದ ಪರಮಾವಧಿ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಸರಣಿ ಟ್ವೀಟ್​ ಮೂಲಕ ಎಚ್​ಡಿಕೆ ಸಂತಾಪ ಸೂಚಿಸಿದ್ದಾರೆ. ಜತೆಗೆ ಚನ್ನಪಟ್ಟಣದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಎಚ್​ಡಿಕೆ, ಪಾವಗಡ ಅತ್ಯಂತ ಬರಗಾಲ ಇರುವ ತಾಲೂಕು. ಬಸ್ ಅವಘಡದಲ್ಲಿ ಕೂಲಿನಾಲಿ ಮಾಡುವ ಜನರಿದ್ದರೆ ಹೆಚ್ಚಿನ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರ ನೀಡಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಸಾರಿಗೆ ಸಚಿವರು ಹಾಗೂ ಸರ್ಕಾರ ಕೂಡಲೇ ಮಾಹಿತಿ ಪಡೆದು ಪರಿಹಾರ ನೀಡುವ ಕಾರ್ಯವಾಗಬೇಕು ಎಂದು ಆಗ್ರಹಿಸಿದ್ದಾರೆ. ಬಸ್ ಅವಘಡದಲ್ಲಿ ಯಾರ ತಪ್ಪಿದೆ? ಎಂದು ಪರಿಶೀಲನೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಕಾರ ಕಠಿಣ ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಾರಿಗೆ ಇಲಾಖೆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
ದುರಂತದಲ್ಲಿ ಜೀವ ಕಳೆದುಕೊಂಡ ಎಲ್ಲ ಅಮೂಲ್ಯ ಜೀವಗಳಿಗೆ ನನ್ನ ಶ್ರದ್ಧಾಂಜಲಿ ಹಾಗೂ ಎಲ್ಲ ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. 5/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 19, 2022

ಪಾವಗಡದಲ್ಲಿ ಭೀಕರ ಅಪಘಾತ: ಸಿಎಂ ಹೇಳಿದ್ದೇನು?

ಪಾವಗಡ ವ್ಯಾಪ್ತಿ ಎಲ್ಲ ಖಾಸಗಿ ಬಸ್‌ಗಳ ಪರವಾನಗಿ ರದ್ದು: 5 ಮಂದಿ ಸಾವಿನ ಬಳಿಕ ಎಚ್ಚೆತ್ತ ಸಾರಿಗೆ ಸಚಿವ

ಪಾವಗಡದಲ್ಲಿ ಭೀಕರ ಅಪಘಾತ: 5ಕ್ಕೇರಿದ ಸಾವಿನ ಸಂಖ್ಯೆ, ಮೃತರೆಲ್ಲರೂ ಶಾಲಾ-ಕಾಲೇಜು ವಿದ್ಯಾರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 9 =
Remember me
