ಬೆಂಗಳೂರು:ದೇವರೇ ನನ್ನ ಜೀವ ಉಳಿಸಲು ಮೈತ್ರಿ ಸರ್ಕಾರದ ಅಧಿಕಾರದಿಂದ ಕೆಳಗೆ ಇಳಿಸಿದ್ದಾನೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.
ಜೆಡಿಎಸ್​ ಪ್ರಧಾನ ಕಚೇರಿಯಲ್ಲಿ ಗುರುವಾರ ಮಾತನಾಡಿದ ಎಚ್​ಡಿಕೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ 17 ಜನ (ಅಂದಿನ ಶಾಸಕರು) ಕಾರಣ ಎನ್ನುತ್ತಾರೆ. ನನ್ನ ಅಧಿಕಾರದಿಂದ ತೆಗೆದದ್ದು ಆ 17 ಜನ ಅಲ್ಲ. ಅವರು ನನ್ನ ಜೀವ ಉಳಿಸಿದ ಪುಣ್ಯಾತ್ಮರು. ನನಗೆ ಅವರ ಬಗ್ಗೆ ಯಾವುದೇ ಬೇಜಾರಿಲ್ಲ. ಅವರಿಗೆ ಧನ್ಯವಾದ ಹೇಳುತ್ತೇನೆ. ನಾನು ಸಂತೋಷದಿಂದ ಅಧಿಕಾರವನ್ನು ಬಿಟ್ಟು ಹೊರಗೆ ಬಂದೆ. ಈ ಸಂದಭದಲ್ಲಿ ನನ್ನ ಜೀವ ಉಳಿಯಬೇಕು ಎಂದು ದೇವರೇ ತೆಗೆದುಕೊಂಡ ನಿರ್ಧಾರ ಅದು ಎಂದರು.
ಕಾಂಗ್ರೆಸ್​ನವರೊಬ್ಬರು 2018ರ ಚುನಾವಣೆಯಲ್ಲಿ ಇದು ನನ್ನ ಕೊನೇ ಚುನಾವಣೆ ಎಂದಿದ್ದರು. ಈಗ ಅವರೇ ಮತ್ತೆ ಸಿಎಂ ಆಗಲು ತುದಿಗಾಲ ಮೇಲೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯರ ಹೆಸರು ಹೇಳದೆ ಮಾತಿನಲ್ಲೇ ಎಚ್​ಡಿಕೆ ಚಾಟಿ ಬೀಸಿದರು. ನಾನೀಗ ಬಿಡದಿ ತೋಟದ ಮನೆಯಲ್ಲಿದ್ದೇನೆ. ಇದೇ ನನಗೆ ಕಾಯಂ ಆಸ್ತಿ. ಬದುಕಿರುವವರೆಗೂ ಬಿಡದಿ ತೋಟದ ಮನೆಯೇ ನನ್ನ ಆಸ್ತಿ. ಯಾವ ವೆಸ್ಟ್​ಎಂಡ್ ಇಲ್ಲ ರೈಟ್ ಎಂಡ್ ಇಲ್ಲ. ನನ್ನನ್ನ ಈಗ ಯಾರೂ ದೂರಲು ಆಗುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಹೊಸ ಮನೆಗೆ ಬಂದ ರಾಧಿಕಾ-ಯಶ್​ ದಂಪತಿ: ಗೃಹಪ್ರವೇಶ ಸಡಗರದ ಫೋಟೋಗಳು ಇಲ್ಲಿವೆ

ವರದಕ್ಷಿಣೆಗೆ ಮತ್ತೊಂದು ಬಲಿ: ಆರು ತಿಂಗಳ ಹಿಂದಷ್ಟೇ ಮದ್ವೆ ಆಗಿದ್ದ ಯುವತಿ ಗಂಡನ ಮನೆಯಲ್ಲೇ ದುರಂತ ಸಾವು!

ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

ಅಮ್ಮನ ಕೈತುತ್ತು ತಿನ್ನುತ್ತಿರುವಾಗಲೇ ತಲೆ ಮೇಲೆ ತೆಂಗಿನಕಾಯಿ ಬಿದ್ದು 11 ತಿಂಗಳ ಮಗು ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 8 =
Remember me
