ಬೆಂಗಳೂರು: ಬೆಂಗಳೂರು, ಮಂಡ್ಯ, ರಾಮನಗರದಲ್ಲಿ ಶುಕ್ರವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರು-ಮೈಸೂರು ರಸ್ತೆಯ ತಗ್ಗುಪದೇಶದಲ್ಲಿ ನೀರು ನಿಂತಿದ್ದು, ಶನಿವಾರ ಬೆಳ್ಳಂಬೆಳಗ್ಗೆ ಕಿಲೋ ಮೀಟರ್​ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಪ್ರಯಾಣಿಕರು ಟ್ರಾಫಿಕ್ ಕಿರಿಕಿರಿ ಅನುಭವಿಸಿದ್ದಾರೆ. ಇನ್ನು ಟ್ರಾಫಿಕ್​ ಸಮಸ್ಯೆ ಇದ್ದ ಕಾರಣಕ್ಕೆ ರಾಜರಾಜೇಶ್ವರಿ ಇಂಜಿನಿಯರಿಂಗ್ ಕಾಲೇಜಿನ ಪರೀಕ್ಷೆಯನ್ನು ಮುಂದೂಡಲಾಗಿದೆ.
ರಸ್ತೆಗಳ ಮೇಲೆ 2-3 ಅಡಿ ನೀರು ನಿಂತ್ತಿದ್ದ ಪರಿಣಾಮ ವಾಹನ ಸವಾರರು ಪರದಾಡಿದರು. ಕೆಲ ವೃತ್ತಗಳಲ್ಲಿ ವಾಹನಗಳು ಮುಂದಕ್ಕೆ ಹೋಗಲು ಸಾಧ್ಯವಾಗದೆ ಸವಾರರು ಹೈರಾಣಾದರು. ಕೆಲಸ ಮುಗಿಸಿ ಮನೆಗೆ ಹೋಗುವ ಧಾವಂತದಲ್ಲಿದ್ದ ಜನರು ಶುಕ್ರವಾರ ಸಂಕಷ್ಟ ಅನುಭವಿಸಿದ್ದು ಮಾತ್ರವಲ್ಲ, ಶನಿವಾರ ಬೆಳಗ್ಗೆ ಕೆಲಸಕ್ಕೆ, ಶಾಲಾ-ಕಾಲೇಜಿಗೆ ತೆರಳುವವರ ಪರಿಸ್ಥಿಯೂ ಇದೇ ಆಗಿತ್ತು.ಚನ್ನಪಟ್ಟಣದ ಶೇರ್ವಾ ಸರ್ಕಲ್ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ಡಕ್ ಕುಸಿಯುವ ಹಂತದಲ್ಲಿದೆ. ಕೆರೆ ಕೋಡಿ ಬಿದ್ದ ಪರಿಣಾಮ ಡಕ್​ ಶಿಥಿಲಗೊಂಡಿದ್ದು, ಅಪಾಯವನ್ನೂ ಲೆಕ್ಕಿಸದೆ ವಾಹನಗಳು ಸಂಚರಿಸುತ್ತಿವೆ. ಚನ್ನಪಟ್ಟಣ ನಗರ ಪ್ರದೇಶದಲ್ಲಿರುವ ಕುಡಿನೀರು ಕಟ್ಟೆ ತುಂಬಿ ಹರಿಯುತ್ತಿದ್ದು, ಬೀಡಿ ಕಾಲನಿ ಸಂಪೂರ್ಣ ಜಲಾವೃತಗೊಂಡಿದೆ.

ವರುಣಾರ್ಭಟಕ್ಕೆ ಮಂಡ್ಯ ತಾಲೂಕಿನ ದೊಡ್ಡಗರುಡನಹಳ್ಳಿಯಲ್ಲಿ ಕೆರೆ ಮತ್ತು ನಾಲೆ ಏರಿ ಹೊಡೆದು ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದೆ. ಕೆರೆಗೆ ಹೊಂದಿಕೊಂಡಂತೆ ವಿಶ್ವೇಶ್ವರಯ್ಯ ನಾಲೆಯಿದೆ. ದೊಡ್ಡಗರುಡನಹಳ್ಳಿ-ಶಿವಳ್ಳಿ ನಡುವೆ ಸಂಚಾರ ಸ್ಥಗಿತಗೊಂಡಿದೆ.
ಕುಣಿಗಲ್​ನಲ್ಲಿ ಕಿರಿಯ ಇಂಜಿನಿಯರ್​ ಮಾಡಿಸಿದ್ದ ರಸ್ತೆಯೇ ಮಾಯ!

ಚಾಮರಾಜಪೇಟೆ ಆಟದ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್​ ಸಿಗ್ನಲ್​ ಕೊಟ್ಟ ಹೈಕೋರ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 15 =
Remember me
