ಮಂಗಳೂರು:ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ತಗ್ಗುಪ್ರದೇಶಗಳು ಮಿನಿ ಕೆರೆಯಂತಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಪಿಯುಸಿ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮಳೆಯಿಂದಾಗಿ ತರಗತಿಗೆ ಬರಲು ವಿದ್ಯಾರ್ಥಿಗಳಿಗೆ ತೊಂದರೆಯಾದಲ್ಲಿ ಅಂತಹ ಪ್ರದೇಶದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶಿಸಿದ್ದಾರೆ. ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ಹಾಗೂ ತಾಲೂಕುಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಿ ಎಂದು ತಹಸೀಲ್ದಾರ್ ಮತ್ತು ಬಿಇಒಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬುಧವಾರ ರಾತ್ರಿಯಿಂದಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಿದ್ದು, ಇಂದು ಕೂಡ ಮೋಡ ಕವಿದ ವಾತಾವರಣ ಇದೆ. ಅಲ್ಲಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಅಡಕೆ, ತೆಂಗು ತೋಟಗಳಲ್ಲೂ ಐದಾರು ಅಡಿ ಎತ್ತರದಷ್ಟು ನೀರು ತುಂಬಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಮಾತ್ರವಲ್ಲ, ಉತ್ತರಕನ್ನಡ, ಉಡುಪಿ ಜಿಲ್ಲೆಗಳಲ್ಲೂ ಮಳೆಯಾಗುತ್ತಿದೆ. ಹೊನ್ನಾವರಂ ಕುಮುಟಾ,  ಕಾರವಾಟ, ಅಂಕೋಲಾದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಗದ್ದೆ ಉಳುಮೆ ಮಾಡುತ್ತಿರುವಾಗಲೇ ಹೃದಯಾಘಾತ: ಗದ್ದೆಯಲ್ಲೇ ಟ್ರ್ಯಾಕ್ಟರ್​ ಚಾಲಕ ಸಾವು

ತುಮಕೂರಲ್ಲಿ ಭಯಾನಕ ಗ್ಯಾಂಗ್​: ವಿದ್ಯಾರ್ಥಿಗಳೇ ಟಾರ್ಗೆಟ್​, ಕೆಲ್ಸದ ಆಸೆಗೆ ಫ್ಲ್ಯಾಟ್​​ಗೆ ಹೋದ ಹುಡ್ಗೀರಾ ಪಾಡು ಹೇಳತೀರದು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 2 =
Remember me
