ಬೆಂಗಳೂರು:ರಾಜ್ಯದ ಹಲವೆಡೆ ವರುಣನ ಅಬ್ಬರ ಮುಂದುವರಿದಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಬುಧವಾರವೂ ವಿವಿಧ ಭಾಗಗಳಲ್ಲಿ ಮಳೆಯಾಗಿದ್ದು, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ 13 ಸೆಂ.ಮೀ., ಕೊಪ್ಪದಲ್ಲಿ 11 ಸೆಂ.ಮೀ., ಶಿವಮೊಗ್ಗದ ಲಿಂಗನಮಕ್ಕಿಯಲ್ಲಿ 9 ಸೆಂ.ಮೀ., ಬೆಳಗಾವಿಯ ಲೋಂಡದಲ್ಲಿ 8 ಸೆಂ.ಮೀ., ಕಲಬುರಗಿಯ ಖಜೂರಿಯಲ್ಲಿ 7 ಸೆಂ.ಮೀ. ಹಾಗೂ ಬೀದರ್‌ನ ಔರದ್‌ನಲ್ಲಿ 7 ಸೆಂ.ಮೀ. ಮಳೆಯಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಹಾಗೂ ಕೊಡಗಿನಲ್ಲಿ ಮುಂದಿನ 24 ಗಂಟೆ ಭಾರೀ ಮಳೆ ಬೀಳುವ ಮುನ್ಸೂಚನೆ ಇದೆ. ಹಾಗಾಗಿ ಈ ಭಾಗದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಜು.15ರಿಂದ ಮುಂದಿನ ಮೂರು ದಿನ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದೆ. ಹಾವೇರಿ, ಗದಗ, ಧಾರವಾಡ, ಯಾದಗಿರಿ, ಕಲಬುರಗಿ ಮತ್ತು ವಿಜಯಪುರದಲ್ಲಿ ಮುಂದಿನ 72 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಆಗಾಗ್ಗೆ ಚದುರಿದಂತೆ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಜು.1ರಿಂದ 13ರ ವರೆಗೆ ರಾಜ್ಯಾದ್ಯಂತ ವಾಡಿಕೆಯಂತೆ 110 ಮಿ.ಮೀ. ಮಳೆ ಬದಲಾಗಿ 224 ಮಿ.ಮೀ. ಮಳೆಯಾಗಿದ್ದು, ಶೇ.104 ಹೆಚ್ಚು ಮಳೆ ಸುರಿದಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜೂನ್‌ನಲ್ಲಿ ಮಳೆ ಕೊರತೆ ಅನುಭವಿಸಿದ್ದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಜುಲೈನಲ್ಲಿ ಭರ್ಜರಿ ವರ್ಷಧಾರೆಯಾಗಿದೆ.
ಹೆತ್ತಮ್ಮನ ಸಾವಿನ ನೋವಲ್ಲೇ ಪರೀಕ್ಷೆ ಬರೆದ ಸ್ಫೂರ್ತಿ: ಅಜ್ಜ-ಅಜ್ಜಿಯ ಸಾವು ಮಾಸುವ ಮುನ್ನವೇ ಅಮ್ಮನೂ ದೂರ…

ಕ್ರೇಜಿ ಸ್ಟಾರ್ ರವಿಚಂದ್ರನ್ ಪುತ್ರನಿಗೆ ಕಂಕಣ ಭಾಗ್ಯ: ಮನೋರಂಜನ್​ರ ಕೈಹಿಡಿಯಲಿರುವ ವಧು ಯಾರು?

ಇವರು ನಮ್ಮ ಪಕ್ಷದ ಕಾರ್ಯಕರ್ತ, ಇವರ ಕಾರನ್ನು ಹಿಡಿದು ತೊಂದರೆ ಕೊಡಬಾರದು: ಬಿಜೆಪಿ MLA ಶಿಫಾರಸು

Unavailable on free accounts.Upgradeto redirect links.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × 2 =
Remember me
