ಬೆಂಗಳೂರು:ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು, ಹಲವೆಡೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರಸ್ತೆ ಸಂಪರ್ಕ ಕಡಿತ, ಮನೆಗಳ ಕುಸಿತ, ಮನೆಯೊಳಗೆ ನೀರು ನುಗ್ಗಿ, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನದಿಗಳಿಗೆ ಒಳಹರಿವು ಹೆಚ್ಚಾಗಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಭೀತಿ ಆವರಿಸಿದೆ.
ಕೊಡಗು ಜಿಲ್ಲೆ ತಲಕಾವೇರಿ- ಭಾಗಮಂಡಲ ವ್ಯಾಪ್ತಿಯಲ್ಲಿ ಹೆಚ್ಚು ಮಳೆಯಾಗಿದ್ದು, ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಹಲವೆಡೆ ವಿದ್ಯುತ್ ಕಂಬಗಳು ಬಿದ್ದಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಭಾಗಮಂಡಲ- ನಾಪೋಕ್ಲು ರಸ್ತೆ ಸಂಪರ್ಕ ಕಡಿತಗೊಂಡಿದೆ. ಕಾವೇರಿ, ಲಕ್ಷ್ಮಣತೀರ್ಥ ನದಿ ತುಂಬಿ ಹರಿಯುತ್ತಿದೆ.ಇದನ್ನೂ ಓದಿರಿಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಚಿಕ್ಕಮಗಳೂರು, ಮೂಡಿಗೆರೆ, ಶೃಂಗೇರಿ, ಕೊಪ್ಪ ತಾಲೂಕಿನಲ್ಲೂ ಧಾರಾಕಾರ ಮಳೆಯಾಗಿದೆ. ಕೊಪ್ಪ ತಾಲೂಕಿನ ಗುಡ್ಡೆತೋಟ ಸಮೀಪ ಧರೆ ಕುಸಿದು ರಾಜ್ಯ ಹೆದ್ದಾರಿ ರಸ್ತೆಗೆ ಮಣ್ಣು ಬಿದ್ದಿದೆ.ಕಾವೇರಿ ಜಲಾನಯನ ಪ್ರದೇಶದಲ್ಲೂ ಮಳೆಯಾಗಿದ್ದು, ಕೆಆರ್​ಎಸ್​ಗೆ ಒಳ ಹರಿವು ಹೆಚ್ಚಾಗಿದೆ.

ಬಾಗಲಕೋಟೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಧೋಳ ತಾಲೂಕಿನ ಘಟಪ್ರಭಾ ನದಿ ದಡದ ಮೇಲಿರುವ ಹೊಳೆಬಸವೇಶ್ವರ ದೇವಸ್ಥಾನ ಜಲಾವೃತಗೊಂಡಿದೆ. ಮುಧೋಳ ತಾಲೂಕಿನ ಮಿರ್ಜಿ ಬ್ಯಾರೇಜ್ ಜತೆಗೆ ಜಾಲಿಬೇರ ಬ್ಯಾರೇಜ್ ಸಂಪೂರ್ಣ ಜಲಾವೃತಗೊಂಡಿದೆ.
ಬೆಳಗಾವಿಯಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರಿ ಏರಿಕೆ ಆಗಿದೆ. ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಯಡೂರು – ಕಲ್ಲೋಳ ಸೇತುವೆ ಜಲಾವೃತಗೊಂಡಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಆಗಿದೆ. ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ತಾಲೂಕುಗಳ ಜತ್ರಾಟ- ಭೀವಶಿ, ಭೋಜ – ಕಾರದಗಾ, ಅಕ್ಕೋಳ – ಸಿದ್ನಾಳ, ನಾಗನೂರು – ಗೋಟೂರ, ಹುನ್ನರಗಿ-ಮಮದಾಪೂರ, ಭೋಜವಾಡಿ- ಕುನ್ನೂರ, ಯಡೂರು- ಕಲ್ಲೋಳ ಸೇತುವೆಗಳು‌ ಮುಳುಗಡೆಯಾಗಿವೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿವಪುರ ತಾಂಡದಲ್ಲಿ ಅರ್ಜುನ್ ಶೀಲಾಪ್ಪ ನಾಯ್ಕ್ ಎಂಬುವವರ ಮನೆ ಕುಸಿದಿದ್ದು, ಕುಟುಂಬ ಬೇರೆಡೆಗೆ ಸ್ಥಳಾಂತರಗೊಂಡಿದೆ.

ಹಾಸನ ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಮಳೆ-ಗಾಳಿಗೆ ಕೆಲವೆಡೆ ಛಾವಣಿಗಳು ಕುಸಿದಿವೆ. ಸಕಲೇಶಪುರದ ಹೆತ್ತೂರು ಗ್ರಾಮದಲ್ಲಿ ಗದ್ದೆ ಸಮೀಪ ಭೂ ಕುಸಿತ ಆಗಿದೆ. ಹೇಮಾವತಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ. ಹೀಗೆ ವಿಜಯಪುರ, ದಾವಣಗೆರೆ, ತುಮಕೂರು ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮೋಡಮುಸುಕಿದ ವಾತಾವರಣ ಇದೆ.
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ
5 ದಿನದ ಬಾಣಂತಿ ಕರೊನಾಗೆ ಬಲಿ! ಅಯ್ಯೋ, ವಿಧಿಯೇ ನೀನೆಷ್ಟು ಕ್ರೂರಿ.. 3 ಮಕ್ಕಳನ್ನ ತಬ್ಬಲಿ ಮಾಡಿಬಿಟ್ಟೆಯಲ್ಲ…
ರಾತ್ರೋರಾತ್ರಿ ಮಲಗಿದ್ದಲ್ಲೇ ತಂದೆಯ ತಲೆಯನ್ನ ರುಬ್ಬವ ಕಲ್ಲಿಂದ ಜಜ್ಜಿ ಕೊಂದ ಮಗ! ಬೆಚ್ಚಿಬಿದ್ದ ಸ್ಥಳೀಯರು
ಹಿರಿಯ ನಟಿ ಕವಿತಾರ ಮಗ ಕರೊನಾಗೆ ಬಲಿ, ಪತಿಯ ಸ್ಥಿತಿ ಗಂಭೀರ
ಕೆಲಸಕ್ಕಾಗಿ ಮನೆಗೆ ಬಂದ ಯುವತಿಗೆ ಗ್ರಾಪಂ ಸದಸ್ಯ ಹೀಗಾ ಮಾಡ್ಹೋದು? ಈ ಕೃತ್ಯ ಕೇಳಿದ್ರೆ ಹಿಡಿಶಾಪ ಹಾಕ್ತೀರಿ




ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 3 =
Remember me
