ಬೆಂಗಳೂರು:ಕರೊನಾ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದೆ. ರಾಜ್ಯಾದ್ಯಂತ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಸೇರಿಂದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಹಾರಾಷ್ಟ್ರ ಹಾಗೂ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ ವರುಣನ ಆರ್ಭಟ ಮುಂದುವರಿದ್ದು, ನದಿ ತೀರದ ಗ್ರಾಮಗಳ ಜನರು ಅಕ್ಷರಶಃ ತತ್ತರಿಸಿದ್ದಾರೆ. ಬೆಳಗಾವಿಯ ಮಾರ್ಕಂಡೇಯ ನದಿಯ ಪ್ರವಾಹದಲ್ಲಿ ರೈತರೊಬ್ಬರು ಶುಕ್ರವಾ ಕೊಚ್ಚಿ ಹೋಗಿದ್ದಾರೆ. ಹಲವಡೆ ರಸ್ತೆಗಳಲ್ಲಿ ಮಣ್ಣು ಕುಸಿದು ಸಂಚಾರ ಸ್ಥಗಿತಗೊಂಡಿದೆ. ಬಹುತೇಕ ಸೇತುವೆಗಳು ಜಲಾವೃತಗೊಂಡು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಈ ಕುರಿತ ಫೋಟೋಗಳು ಇಲ್ಲಿವೆ.
ಧಾರವಾಡ ಜಿಲ್ಲೆ ಅಳ್ನಾವರ ತಾಲೂಕಿನ ಕಂಬಾರಗಣವಿ ಗ್ರಾಮದ ಸೇತುವೆ ಮುಳುಗಡೆಯಾಗಿದ್ದು, ಇಡೀ ಗ್ರಾಮ ದ್ವೀಪವಾಗುವ ಆತಂಕದಲ್ಲಿದೆ. ಅರಣ್ಯ ಭಾಗದಿಂದ ಮಳೆ ನೀರಿನ ಜತೆ ಮರದ ದಿನ್ನೆಗಳೂ ಬರುತ್ತಿವೆ.

ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಕಲಘಟಗಿ ತಾಲೂಕಿನ ಹಟಕಿನಾಳದ ಜಿಗಳಿ ಕೆರೆ ಒಡೆದು ಅಪಾರ ಪ್ರಮಾಣದ ನೀರು ಜಮೀನುಗಳಿಗೆ ನುಗ್ಗಿದೆ. ಭತ್ತ, ಸೋಯಾಬಿನ್, ಕಬ್ಬು, ಹತ್ತಿ, ಗೋವಿನಜೋಳ ಬೆಳೆಗಳು ಜಲಾವೃತಗೊಂಡಿವೆ.

ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮ ಬಳಿ ದತ್ತ ಮಂದಿರ ಜಲಾವೃತ ವಾಗಿದೆ. ಈ ಭಾಗದ ಜನರಲ್ಲಿ ಮತ್ತೆ ಪ್ರವಾಹ ಭೀತಿ ಆವರಿಸಿದೆ. ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕಿನ 6 ಕೆಳ ಹಂತದ ಸೇತುವೆಗಳು ಮುಳುಗಡೆಯಾಗಿವೆ. ಕಾರದಗಾ- ಭೋಜ ಗ್ರಾಮ ಸಂಪರ್ಕಿಸುವ ಸೇತುವೆ, ಭೋಜವಾಡಿ ಕುನ್ನೂರ ಸಂಪರ್ಕಿಸುವ ಸೇತುವೆ, ಸಿದ್ನಾಳ -ಅಕ್ಕೋಳ ಸೇತುವೆ, ಕುನ್ನೂರ-ಬಾರವಾಡ ಸೇತುವೆ, ಮಲಿಕವಾಡ- ದತ್ತವಾಡ ಸೇತುವೆ, ಯಡೂರು-ಕಲ್ಲೋಳ ಸೇತುವೆ ಮುಳುಗಡೆಯಾಗಿವೆ.

ಹಾಸನದ ಸಕಲೇಶಪುರದಲ್ಲಿ ನಿರಂತರವಾಗಿ ಮಳೆ ಸುರಿದಿದ್ದು, ಪ್ರೇಮ್ ನಗರದ ರಸ್ತೆಯಲ್ಲಿ ಮಣ್ಣು ಕುಸಿದಿದೆ. ಶಿರಾಡಿ ಗಡಿ ಭಾಗದ ಕಾಡುಮನೆಯಲ್ಲಿ ಮನೆ ಹಾನಿಯಾಗಿದೆ.

ಎದುರಾಗಬಹುದಾದ ಪ್ರವಾಹ ಎದುರಿಸಲು ರಾಯಚೂರು ಜಿಲ್ಲಾಡಳಿತ ಸಜ್ಜಾಗಿದ್ದು, ನದಿ ಪಾತ್ರದ 105 ಗ್ರಾಮಗಳಲ್ಲಿ ಈಗಿನಿಂದಲೇ ಕಟ್ಟೆಚ್ಚರ ವಹಿಸಲಾಗಿದೆ. ದೋಅಬ್ ಪ್ರಾಂತ್ಯ ರಾಯಚೂರಲ್ಲಿ NDRF ತಾಲೀಮು ನಡೆಸಿದೆ. ನಡು ಗಡ್ಡೆಯಲ್ಲಿ ವಾಸವಿದ್ದ ಮಕ್ಕಳು, ಗರ್ಭಿಣಿಯರು, ಬಾಣಂತಿಯರು, ವೃದ್ಧರು ಹಾಗೂ ರೋಗಿಗಳನ್ನು ಈಗಲೇ ಹೊರತರಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಬಾಗಲಕೋಟೆ ‌ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ರೈತರೇ ಕಟ್ಟಿಸಿದ ಶ್ರಮಬಿಂದು ಸಾಗರ ಬ್ಯಾರೇಜ್ ಜಲಾವೃತಗೊಂಡಿದೆ.
ಸತ್ತು ಮಲಗಿದ್ದವ ಕರುಳ ಕೂಗಿಗೆ ಓಗೊಟ್ಟು ಮತ್ತೆ ಬದುಕಿದ! ಅಂತ್ಯಸಂಸ್ಕಾರ ವೇಳೆ ನಡೆದ ಪವಾಡ ಕೇಳಿದ್ರೆ ಶಾಕ್​ ಆಗ್ತೀರಿ

ಪತ್ನಿಯ ಗೆಳತಿಯರು ಮನೆಗೆ ಬರುತ್ತಿದ್ದಂತೆ ಅವರ ಬಟ್ಟೆ ಬಿಚ್ಚುತ್ತಾನೆ ಗಂಡ! ಬೆಚ್ಚಿಬೀಳಿಸುತ್ತೆ ದಂಪತಿ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
