ಬೆಂಗಳೂರು:ರಾಜ್ಯದಲ್ಲಿ ವರುಣಾರ್ಭಟ ಮುಂದುವರಿದಿದ್ದು, ಮುಂದಿನ ನಾಲ್ಕು ದಿನ ಇನ್ನಷ್ಟು ಜೋರಾಗಿ ಮಳೆ ಬೀಳುವ ಸಾಧ್ಯತೆಯಿದೆ. ಸೋಮವಾರವೂ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕಳೆದೊಂದು ವಾರದಿಂದ ದಕ್ಷಿಣ ಒಳನಾಡಿನಲ್ಲಿ ವಾಡಿಕೆಗಿಂತ ಶೇ.303 ಹೆಚ್ಚು ಮಳೆ ಬಿದ್ದಿದೆ.
ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ತುಮಕೂರು, ಚಾಮರಾಜನಗರ, ಮೈಸೂರು, ಮಂಡ್ಯದಲ್ಲಿ ವಾಡಿಕೆಗಿಂತ ಅಧಿಕ ಸುರಿದಿದೆ. ಕರಾವಳಿ ಮತ್ತು ಮಲೆನಾಡಿನ ಭಾಗಗಳಲ್ಲಿ ವಾಡಿಕೆಯಷ್ಟೇ ಬಿದ್ದರೆ, ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗಿದೆ. ಅಲ್ಲದೆ, ಆ.1ರಿಂದ ಆ.29ರವರೆಗೆ ರಾಜ್ಯಾದ್ಯಂತ 211 ಮಿಮೀ ಮಳೆ ಬದಲಾಗಿ 281 ಮಿಮೀ ಮಳೆಯಾಗಿದ್ದು, ಶೇ.33 ವಾಡಿಕೆಗಿಂತ ಹೆಚ್ಚು ಸುರಿದಿದೆ.
ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ಭಾಗಮಂಡಲದಲ್ಲಿ ಅತಿ ಹೆಚ್ಚು 21 ಸೆಂಮೀ ಮಳೆಯಾದರೆ, ಗದಗದ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರದಲ್ಲಿ ತಲಾ 11 ಸೆಂ.ಮೀ., ಹಾವೇರಿಯ ಸವಣೂರಿನಲ್ಲಿ 9, ಉತ್ತರ ಕನ್ನಡದ ಬನವಾಸಿ ಮತ್ತು ಚಾಮರಾಜನಗರದ ಕೊಳ್ಳೆಗಾಲದಲ್ಲಿ ತಲಾ 7 ಸೆಂ.ಮೀ. ಮಳೆ ಸುರಿದಿದೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಆ.30ರಿಂದ ಸೆ.1ರವರೆಗೆ, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ, ದಾವಣಗೆರೆಯಲ್ಲಿ ಮುಂದಿನ 24 ಗಂಟೆ ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಚಾಮರಾಜನಗರದಲ್ಲಿ ಮುಂದಿನ 48 ಗಂಟೆ ಮತ್ತು ಮಂಡ್ಯ ಆ.31ರಂದು ಯೆಲ್ಲೋ ಅಲರ್ಟ್ ಇರಲಿದೆ.
ಅಮಿತ್ ಶಾ ಮನೆ ಬಳಿ ಪ್ರತಿಭಟನೆ ಮಾಡಲು ಹೋಗಿದ್ದೆ… ಎನ್ನುತ್ತಲೇ ಕರ್ನಾಟಕ ಪೊಲೀಸರ ವಿರುದ್ಧ ಕಿಡಿಕಾರಿದ ನವ್ಯಶ್ರೀ!

ದಶಕದ ಬಳಿಕ ನೀರಲ್ಲಿ ಮುಳುಗುತ್ತಿದೆ ಕಾರೇಹಳ್ಳಿ ಶ್ರೀ ರಂಗನಾಥಸ್ವಾಮಿ! ಕಣ್ತುಂಬಿಕೊಳ್ಳಲು ಹರಿದು ಬರ್ತಿದೆ ಜನಸಾಗರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − five =
Remember me
