ಬೆಂಗಳೂರು:ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗೆ ಈವರೆಗೂ ಲಿಖಿತ ವಾದ ಹಾಗೂ ದಿನಾಂಕಸಹಿತ ಸಂಕ್ಷಿಪ್ತ ಸಾರಾಂಶ (ಸಿನಾಪ್ಸಿಸ್​) ಸಲ್ಲಿಸದ ಸರ್ಕಾರ ಹಾಗೂ ಎಸ್​ಐಟಿ ಕ್ರಮಕ್ಕೆ ಬೇಸರ ವ್ಯಕ್ತಪಡಿಸಿರುವ ಹೈಕೋರ್ಟ್​, 10 ದಿನದೊಳಗೆ ಎಲ್ಲರೂ ಲಿಖಿತ ವಾದ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ.
ಪ್ರಕರಣದ ತನಿಖೆಗೆ ಎಸ್​ಐಟಿ ರಚನೆ ಪ್ರಶ್ನಿಸಿ ಹಾಗೂ ಸದಾಶಿವನಗರ ಪೊಲೀಸ್​ ಠಾಣೆಯಲ್ಲಿ ರಮೇಶ್​ ಜಾರಕಿಹೊಳಿ ದಾಖಲಿಸಿರುವ ಬ್ಲ್ಯಾಕ್​ಮೇಲ್​ ಪ್ರಕರಣದ ಎಫ್​ಐಆರ್​ ರದ್ದು ಕೋರಿ ಸಂತ್ರಸ್ತೆ ಮತ್ತಿಬ್ಬರು ಆರೋಪಿಗಳಾದ ಎಸ್​. ಶ್ರವಣ್​ ಕುಮಾರ್​ ಹಾಗೂ ಬಿ.ಎಂ. ನರೇಶ್​ ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್​. ಸುನೀಲ್​ ದತ್​ ಯಾದವ್​ ಅವರಿದ್ದ ಪೀಠ ಸೋಮವಾರ ವಿಚಾರಣೆ ನಡೆಸಿತು.
ಸಂತ್ರಸ್ತೆ ಪರ ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಹಾಜರಾಗಿ, ಪ್ರಕರಣದ ಬೆಳವಣಿಗೆಗಳ ಕುರಿತ ಸಿನಾಪ್ಸಿಸ್​ ಹಾಗೂ ಅರ್ಜಿ ಸಂಬಂಧ ಮಂಡಿಸಲಿರುವ ಕಾನೂನಾತ್ಮಕ ಅಂಶಗಳ ಲಿಖಿತ ವಾದ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅದನ್ನು ಎರಡೂ ಪಕ್ಷದವರು ಪರಸ್ಪರ ಹಂಚಿಕೊಳ್ಳಬೇಕು ಎಂದು ಕಳೆದ ವಿಚಾರಣೆ ವೇಳೆ ನ್ಯಾಯಾಲಯ ನಿರ್ದೇಶಿಸಿತ್ತು. ಆದರೆ ಸರ್ಕಾರ, ಎಸ್​ಐಟಿ ಮತ್ತು ರಮೇಶ್​ ಜಾರಕಿಹೊಳಿ ಸೇರಿ ಪ್ರತಿವಾದಿಗಳು ಈವರೆಗೆ ಲಿಖಿತ ವಾದ ಸಲ್ಲಿಸಿಲ್ಲ. ಇದಕ್ಕೆ ಬೇಸರ ವ್ಯಕ್ತಪಡಿಸಿದ ಪೀಠ, ಮತ್ತೆ 10 ದಿನ ಕಾಲಾವಕಾಶ ನೀಡಲಾಗುವುದು. ಅಷ್ಟರೊಳಗೆ ಯಾವುದೇ ವಿಳಂಬವಿಲ್ಲದೆ ಲಿಖಿತ ವಾದ ಸಲ್ಲಿಸಬೇಕು ಎಂದು ತಾಕೀತು ಮಾಡಿತು.
ವಾದ-ಪ್ರತಿವಾದ ಆಲಿಸುವುದಿಲ್ಲ:ಎಲ್ಲರೂ ಲಿಖಿತ ವಾದ ಸಲ್ಲಿಸದ ಹೊರತು ವಾದ&ಪ್ರತಿವಾದ ಆಲಿಸುವುದಿಲ್ಲ. ಲಿಖಿತ ವಾದ ಸಲ್ಲಿಸುವುದರಿಂದ ಯಾರು ಯಾವೆಲ್ಲ ಕಾನೂನಾತ್ಮಕ ಅಂಶದ ಮೇಲೆ ವಾದ ಮಂಡಿಸಲಿದ್ದಾರೆ ಎನ್ನುವುದು ತಿಳಿಯಲಿದ್ದು, ಇದರಿಂದ, ಸುದೀರ್ಘವಾಗಿ ವಾದ ಮಂಡಿಸುವುದನ್ನು ತಪ್ಪಿಸಬಹುದು. ವಾದ ಮಂಡನೆಗೆ ಸಮಯದ ಮಿತಿ ನಿಗದಿಪಡಿಸಬಹುದು ಎಂದು ಅಭಿಪ್ರಾಯಪಟ್ಟ ಪೀಠ, ವಿಚಾರಣೆಯನ್ನು ದಸರಾ ರಜೆಯ ನಂತರಕ್ಕೆ ಮುಂದೂಡಿತು.
ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

PSI ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಪತಿಗೆ ಜಾಮೀನು ಮಂಜೂರು

ಒಬ್ಬಳಿಗಾಗಿ ಇಬ್ಬರ ಗಲಾಟೆ: ಪ್ರಿಯತಮೆ-ನಗರಸಭೆ ಸದಸ್ಯನ ಕಿರುಕುಳ… ಚಿಕ್ಕಬಳ್ಳಾಪುರದಲ್ಲಿ ನಡೆಯಿತು ಘೋರ ದುರಂತ

ಜಿಪಂ, ತಾಪಂ ಚುನಾವಣೆ: ಸರ್ಕಾರಕ್ಕೆ 12 ವಾರ ಕಾಲಾವಕಾಶ ನೀಡಿದ ಹೈಕೋರ್ಟ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
