ಬೆಂಗಳೂರು:ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲ ಎಂದು ಮಹತ್ವದ ತೀರ್ಪು ನೀಡಿರುವ ಹೈಕೋರ್ಟ್, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನೂ ವಜಾಗೊಳಿಸಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್​ ಧರಿಸಲು ಅವಕಾಶವಿಲ್ಲ ಎಂದು ತೀರ್ಪು ನೀಡುವ ಮೂಲಕ ರಾಜ್ಯದಲ್ಲಿ ಕಳೆದ ಒಂದೂವರೆ ತಿಂಗಳಿಂದ ಎದ್ದಿದ್ದ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಡಿದೆ.
ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ಪ್ರಶ್ನಿಸಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಕೆಲ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಮತ್ತಿತರರಿಂದ ಫೆ.5ರಂದು 10ಕ್ಕೂ ಅಧಿಕ ಅರ್ಜಿಗಳು ಹಾಗೂ ಮಧ್ಯಂತರ ಅರ್ಜಿಗಳು ಹೈಕೋರ್ಟ್​ಗೆ ಸಲ್ಲಿಕೆಯಾಗಿದ್ದವು. ಈ ಮೊದಲು ಅರ್ಜಿಗಳು ಏಕಸದಸ್ಯ ಪೀಠದಲ್ಲಿ ವಿಚಾರಣೆಗೆ ನಿಗದಿಯಾಗಿದ್ದವು. ಫೆ.8ರಂದು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್​ ಅವರಿದ್ದ ಪೀಠ ವಾದ ಆಲಿಸಿತ್ತು. ಫೆ.9ರಂದು ಮತ್ತೆ ಅರ್ಜಿ ವಿಚಾರಣೆಗೆ ಬಂದಾಗ, ಪ್ರಕರಣವನ್ನು ವಿಸ್ತೃತ ಪೀಠದಲ್ಲಿ ನಿರ್ಧರಿಸುವುದು ಸೂಕ್ತವೆಂದು ಅಭಿಪ್ರಾಯಪಟ್ಟಿತ್ತು. ಕಡತಗಳನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದಿಟ್ಟಿತ್ತು. ಅಂದೇ ಅರ್ಜಿಗಳ ವಿಚಾರಣೆಗೆ ಸಿಜೆಯೂ ಸೇರಿ ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ಪೂರ್ಣ ಪೀಠ ರಚಿಸಲಾಗಿತ್ತು.
ಫೆ.10ರಂದು ಅರ್ಜಿ ವಿಚಾರಣೆ ನಡೆಸಿದ್ದ ಪೂರ್ಣ ಪೀಠ, ಹಿಜಾಬ್​ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ನ್ಯಾಯಾಲಯ ನಿರ್ಧಾರ ಕೈಗೊಳ್ಳುವವರೆಗೆ ಶಿಕ್ಷಣ ಸಂಸ್ಥೆಗಳಲ್ಲಿ ಯಾರೊಬ್ಬರೂ ಯಾವುದೇ ರೀತಿಯ ಧಾರ್ಮಿಕ ಆಚರಣೆಯ ಭಾಗವಾದ ಉಡುಪುಗಳನ್ನು ಧರಿಸಿ ಹಾಜರಾಗಬಾರದು ಎಂದು ಮಧ್ಯಂತರ ಆದೇಶ ನೀಡಿತ್ತು.
ಬಳಿಕ ಅರ್ಜಿ ಕುರಿತು ಸತತ 11 ದಿನಗಳ ವಿಚಾರಣೆ ನಡೆಸಿದ್ದ ಪೀಠ, ವಿದ್ಯಾರ್ಥಿನಿಯರು, ಸರ್ಕಾರ, ಕಾಲೇಜು ಅಭಿವೃದ್ಧಿ ಸಮಿತಿ, ಉಪನ್ಯಾಸಕರು, ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರರ ವಾದ-ಪ್ರತಿವಾದ ಆಲಿಸಿತ್ತು. ಮುಖ್ಯ ನ್ಯಾಯಮೂರ್ತಿ ರಿತುರಾಜ್​ ಅವಸ್ಥಿ ಹಾಗೂ ನ್ಯಾಯಮೂರ್ತಿಗಳಾದ ಕೃಷ್ಣ ಎಸ್​. ದೀಕ್ಷಿತ್​ ಮತ್ತು ಖಾಜಿ ಜೈಬುನ್ನಿಸಾ ಮೊಹಿದ್ದೀನ್​ ಅವರಿದ್ದ ಪೂರ್ಣಪೀಠ ಫೆ. 25ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು(ಮಾ.15) ಐತಿಹಾಸಿಕ ತೀರ್ಪು ಪ್ರಕಟಿಸುವ ಮೂಲಕ ವಿವಾದಕ್ಕೆ ತಾರ್ಕಿಕ ಅಂತ್ಯ ಹಾಕಲಾಗಿದೆ.
–BJP KARNATAKA (@BJP4Karnataka)15 Mar 2022

ಹಿಜಾಬ್​ ಬ್ಯಾನ್​: ಸಿಜೆ ಅವರು ಓದಿದ 129 ಪುಟಗಳ ತೀರ್ಪಿನ ಪ್ರಮುಖ ಅಂಶ ಇಲ್ಲಿದೆ

ಶಾಲೆಯಲ್ಲಿ ಹಿಜಾಬ್​ ಬ್ಯಾನ್​: ​ಸಮವಸ್ತ್ರ ಆದೇಶ ಎತ್ತಿಹಿಡಿದು ಐತಿಹಾಸಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್​

ಕಾಲೇಜಿಗೆ ಹೋಗುವಾಗ ಬೈಕ್ ಮೇಲೆ ಹರಿದ ಕ್ಯಾಂಟರ್: ಅಪ್ಪನ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಮಗ

ಹಿಂದೂ ಯುವತಿ ಬಾಳಲ್ಲಿ ಘೋರ ದುರಂತ: ಗಂಡನ ರಹಸ್ಯ ಬಯಲಾದ ಬೆನ್ನಲ್ಲೇ ಮತ್ತೊಂದು ನರಕ ದರ್ಶನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
