ಮಂಗಳೂರು:ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.
ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು ದಾಖಲಿಸಿದ್ದರು. ಕಚೇರಿಯಲ್ಲಿ ಕಚೇರಿಯಲ್ಲೇ ಲೈಂಗಿಕ ಕಿರುಕುಳ ನೀಡಿದ್ದರು. ಖಾಸಗಿ ಅಂಗಗಳನ್ನು ಮುಟ್ಟಿ ಅಸಭ್ಯವಾಗಿದ ವರ್ತಿಸಿದರು ಎಂದು ಎಂದು ರಾಜೇಶ್​ ವಿರುದ್ಧ ಸಂತ್ರಸ್ತೆ ದೂರು ನೀಡಿದ್ದರು. ಈ ಪ್ರಕರಣ ಹೊರ ಬರುತ್ತಿದ್ದಂತೆ ತಲೆಮರೆಸಿಕೊಂಡಿದ್ದ ರಾಜೇಶ್​, ಡಿ.20ರಂದು ಮಂಗಳೂರು ನ್ಯಾಯಾಲಯಕ್ಕೆ ಶರಣಾಗಿದ್ದರು.
ಬಳಿಕ ಆರೋಪಿಯನ್ನ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು. ಬಳಿಕ ರಾಜೇಶ್​ಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಈ ನಡುವೆ ಮಂಗಳೂರು ಕೋರ್ಟ್​ ಹಾಗೂ ಹೈಕೋರ್ಟ್​ನಲ್ಲಿ ಸಲ್ಲಿಸಲಾಗಿದ್ದ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಇದೀಗ ಹೈಕೋರ್ಟ್​ನಲ್ಲಿ ಜಾಮೀನು ಮಂಜೂರಾಗಿದೆ.
ಇಂಟರ್ನ್​ಶಿಪ್​ ವಿದ್ಯಾರ್ಥಿನಿಗೆ ಹಿರಿಯ ವಕೀಲನಿಂದ ಲೈಂಗಿಕ ಕಿರುಕುಳ: ಪ್ರಕರಣ ತಿರುಚಲು ಹೋಗಿ ಸಿಕ್ಕಿಬಿದ್ದ ಮಹಿಳೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + five =
Remember me
