ಉಡುಪಿ:ಹಿಂದೂ ಯುವತಿಗೆ ಮತ್ತು ಬರೆಸುವ ಔಷಧ ಕುಡಿಸಿ ಮುಸ್ಲಿಂ ಯುವಕ ಅತ್ಯಾಚಾರ ಎಸಗಿದ್ದಾನೆ ಎನ್ನುವ ಪ್ರಕರಣ ಕಾರ್ಕಳದಲ್ಲಿ ನಿನ್ನೆ ಸಂಜೆ ವರದಿಯಾಗಿದೆ. ಈ ಕುರಿತಾಗಿ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್‌ಸ್ಟಾಗ್ರಾಮ್​​ ಸ್ನೇಹ ಬೆಳೆಸಿದ ಹಿಂದೂ ಯುವತಿಯನ್ನು ಕರೆದೊಯ್ದ ಮುಸ್ಲಿಂ ಯುವಕ, ಆಕೆಗೆ ಬಿಯರ್‌ನಲ್ಲಿ ಮತ್ತು ಬರಿಸುವ ಔಷಧ ಸೇರಿಸಿ ಕುಡಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೆ ಆತನ ಇಬ್ಬರು ಸ್ನೇಹಿತರು ಸಹಕರಿಸಿದ್ದು, ಸಾಮೂಹಿಕ ಅತ್ಯಾಚಾರ ನಡೆದಿದೆಯೇ ಎಂಬುದು ಇನ್ನೂ ದೃಢಪಡಬೇಕಿದೆ. ಈ ಪ್ರಕರಣದಲ್ಲಿ ಕಾರ್ಕಳ ನಗರದಲ್ಲಿ ಕೋಮು ಉದ್ವಿಗ್ನತೆಗೆ ಕಾರಣವಾಗಿದೆ.
ಆರೋಪಿಗೆ ಬಿಯರ್ ಬಾಟಲ್ ತಂದುಕೊಟ್ಟಿದ್ದ ಇಬ್ಬರು ಆರೋಪಿಗಳ ಪೈಕಿ ಸುಬೇರ್ ಎಂಬಾತನನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವಾಹನವನ್ನು ಸೀಜ್ ಮಾಡಲಾಗಿದೆ. ಸಂತ್ರಸ್ತೆಗೆ ಮಣಿಪಾಲ ಕೆಎಂಸಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಮುಖ ಆರೋಪಿ ಅಲ್ತಾಫ್ ಮತ್ತು ಸಹಕರಿಸಿದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿಗೆ ಬಲೆ ಬೀಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಈ ಕುರಿತು ಮಾತನಾಡಿ, “ಕಾರ್ಕಳ ಠಾಣೆ ವ್ಯಾಪ್ತಿಯಲ್ಲಿ ಯುವತಿಯನ್ನು ಅಪಹರಿಸಿ ಅತ್ಯಾಚಾರ ದೂರು ಬಂದಿದೆ. ಸಂತ್ರಸ್ತೆಗೆ ಆರೋಪಿ ಜೊತೆಗೆ ಮೂರು ತಿಂಗಳಿಂದ ಪರಿಚಯವಿತ್ತು. ಇನ್ಸ್ಟಾಗ್ರಾಮ್ ಮೂಲಕ ಪರಸ್ಪರ ಪರಿಚಯ ಹೊಂದಿದ್ದರು. ಶುಕ್ರವಾರ ಆರೋಪಿ ಅಲ್ತಾಫ್ ಕರೆ ಮಾಡಿ ಸಂತ್ರಸ್ತೆಗೆ ಬರಲು ಹೇಳಿದ್ದ. ಆಕೆ ಬಂದಾಗ ಅಲ್ಲಿಂದ ಅಪಹರಿಸಿದ್ದ. ಬಿಯರ್‌ನಲ್ಲಿ ಏನನ್ನೊ ಬೆರೆಸಿ ಕುಡಿಸಿ ಮತ್ತು ಬರಿಸಿ ಅತ್ಯಾಚಾರ ಮಾಡಿದ್ದಾಗಿ ಸಂತ್ರಸ್ತೆ ತಿಳಿಸಿದ್ದಾಳೆ. ಆರೋಪಿ ಅಲ್ತಾಫ್‌ನನ್ನು ಬಂಧಿಸಲಾಗಿದೆ” ಎಂದು ಅರುಣ್‌ ಕುಮಾರ್‌ ಹೇಳಿದ್ದಾರೆ.
ಜನಪ್ರಿಯ ರೆಸ್ಟೋರೆಂಟ್ ಬಂದ್; ಉದ್ಯೋಗ ಕಳೆದುಕೊಂಡ 700+ ನೌಕರರು ಕಣ್ಣೀರಿಟ್ಟರು..

ಶಿಖರ್ ಧವನ್ ದೇಶದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು…142 ಕೋಟಿ ರೂ. ಆಸ್ತಿಗೆ ಒಡೆಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
