ಚಿತ್ರದುರ್ಗ:ಸರ್ಕಾರಿ ಕಾರ್ಯಕ್ರಮದಲ್ಲಿ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ದರ್ಬಾರ್​ ನಡೆಸಿದ್ದು, ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಹಿರಿಯೂರು ಹೊರವಲಯದ ಆದಿವಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 25 ಕೋಟಿ ರೂ. ವೆಚ್ಚದ ಮಲ್ಟಿ ಸ್ಪೆಷಾಲಿಟಿ ತಾಲೂಕು ಆಸ್ಪತ್ರೆ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಶಾಸಕಿ ಪೂರ್ಣಿಮಾ ಮಾಡಬೇಕಿದ್ದ ಪ್ರಾಸ್ತಾವಿಕ ಭಾಷಣವನ್ನು ಅವರ ಪತಿ ಶ್ರೀನಿವಾಸ್​ ಮಾಡಿದ್ದಾರೆ.
ಕೇಂದ್ರ ಸಚಿವ ನಾರಾಯಣಸ್ವಾಮಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಜತೆ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕಿ ಪತಿ ಶ್ರೀನಿವಾಸ್​ ವೇದಿಕೆ ಹಂಚಿಕೊಂಡಿದ್ದಾರೆ.
ಶಿಷ್ಟಾಚಾರ ಉಲ್ಲಂಘನೆಯಾದ್ರೂ ಜಿಲ್ಲಾಡಳಿತ ಮತ್ತು ಸಚಿವರು ಸುಮ್ಮನಿದ್ದದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಿ ಬ್ಯಾನರ್​ನಲ್ಲೂ ಶ್ರೀನಿವಾಸ್ ಭಾವಚಿತ್ರ ರಾರಾಜಿಸಿದೆ. ಶಾಸಕಿ ಪೂರ್ಣಿಮಾ ಹೇಳಬೇಕಿದ್ದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆಯೂ ಸಚಿವರ ಮುಂದೆ ಶ್ರೀನಿವಾಸ್ ಅವರೇ ಮಾತನಾಡಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − 8 =
Remember me
