ಬಳ್ಳಾರಿ:ರಾಹುಲ್​ ಗಾಂಧಿ ನೇತೃತ್ವದ ಭಾರತ್​ ಜೋಡೋ ಯಾತ್ರೆಗೆ ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಅದ್ದೂರಿ ಸ್ವಾಗತ ಸಿಕ್ಕಿದ್ದು, ನಗರದ ಮುನ್ಸಿಪಲ್​ ಮೈದಾನದಲ್ಲಿ ಇಂದು(ಶನಿವಾರ) ಬೃಹತ್​ ಸಮಾವೇಶ ನಡೆಯುತ್ತಿದೆ. ಈ ಹಿನ್ನೆಲೆ ನಗರದ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ನಗರದ ಮುನ್ಸಿಪಲ್​ ಮೈದಾನದಲ್ಲಿ ಇಂದು ಮಧ್ಯಾಹ್ನ 12ಕ್ಕೆ ಬೃಹತ್​ ಸಮಾವೇಶ ನಡೆಯಲಿದ್ದು, ಕಲ್ಯಾಣ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಂದಲೂ ಸಹಸ್ರಾರು ಜನ ಆಗಮಿಸುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ಜನ ಸ್ಥಳಕ್ಕೆ ಆಗಮಿಸಿದ್ದು, ಇನ್ನೂ ಸಾವಿರಾರು ಮಂದಿ ನಗರ ಪ್ರವೇಶಿಸಿದ್ದಾರೆ. ಪರಿಣಾಮ ನಗರದಲ್ಲಿ ಟ್ರಾಫಿಕ್ ಜಾಮ್​ ಆಗಿ‌ ವಿದ್ಯಾರ್ಥಿಗಳು ಪರದಾಡಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಅ.17ರ ವರೆಗೆ ದಸರಾ ರಜೆ ಇದೆ.
ಕಾಂಗ್ರೆಸ್​ ಸಮಾವೇಶಕ್ಕೆ ನಗರದ ಮುನ್ಸಿಪಲ್​ ಮೈದಾನದಲ್ಲಿ ಸಕಲ ಸಿದ್ಧತೆ ಪೂರ್ಣಗೊಂಡಿವೆ. ಬೃಹತ್​ ವೇದಿಕೆ ನಿರ್ಮಿಸಲಾಗಿದ್ದು, ವೇದಿಕೆ ಮುಂಭಾಗ ಸುಮಾರು 80 ಸಾವಿರ ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಮಳೆ ಆತಂಕ ಇರುವುದರಿಂದ ಟಿಮನ್​ ಶೀಟ್​ನಿಂದ ಮೇಲ್ಛಾವಣಿ ನಿರ್ಮಿಸಲಾಗಿದೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್​, ಚತ್ತೀಸಗಡ ಮುಖ್ಯಮಂತ್ರಿ ಬೂಪೇಶ್​ ಬಾಬಲೆ, ಎಐಸಿಸಿ ಪ್ರಮುಖರಾದ ಕಮಲ್​ ನಾಥ್​, ದಿಗ್ವಿಜಯ್​ ಸಿಂಗ್​, ಮಲ್ಲಿಕಾರ್ಜುನ ರ್ಖಗೆ, ರಾಜ್ಯ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್​, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಪಕ್ಷದ ಪ್ರಮುಖರು ಪಾಲೊಳ್ಳಲಿದ್ದಾರೆ.
ರಾಜ್ಯದಲ್ಲಿ ಬೆರಕೆ ಸರ್ಕಾರ ಬರೋದು ಗ್ಯಾರಂಟಿ.. ದೇಶಕ್ಕೆ ಕೇಡು ಖಚಿತ… ಹಾಸನಾಂಬೆ ಸನ್ನಿಧಿಯಲ್ಲಿ ಬ್ರಹ್ಮಾಂಡ ಗುರೂಜಿ ಭವಿಷ್ಯ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜಗತ್ತಿನ ಅತಿ ದೊಡ್ಡ ನಾಗರಿಕ ವಿಮಾನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + six =
Remember me
